Excise Policy case: ಕೇಜ್ರಿವಾಲ್ ಜಾಮೀನಿಗೆ ಇಡಿ ತಡೆಯಾಜ್ಞೆ ಮನವಿ; ದೆಹಲಿ ಹೈಕೋರ್ಟ್​ನಿಂದ ಮಂಗಳವಾರ ತೀರ್ಪು ಪ್ರಕಟ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ತಡೆಯಾಜ್ಞೆ ನೀಡುವಂತೆ ಇಡಿ ಮನವಿ ಮಾಡಿತ್ತು. ಆ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನಾಳೆ (ಮಂಗಳವಾರ) ಆದೇಶ ನೀಡಲಿದೆ.

Excise Policy case: ಕೇಜ್ರಿವಾಲ್ ಜಾಮೀನಿಗೆ ಇಡಿ ತಡೆಯಾಜ್ಞೆ ಮನವಿ; ದೆಹಲಿ ಹೈಕೋರ್ಟ್​ನಿಂದ ಮಂಗಳವಾರ ತೀರ್ಪು ಪ್ರಕಟ
ಅರವಿಂದ್ ಕೇಜ್ರಿವಾಲ್‌
Follow us
|

Updated on: Jun 24, 2024 | 7:06 PM

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ (Excise Policy case) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಜಾಮೀನು ನೀಡಿರುವ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಜಾರಿ ನಿರ್ದೇಶನಾಲಯದ ಮನವಿಯ ಕುರಿತು ದೆಹಲಿ ಹೈಕೋರ್ಟ್ (Delhi High Court) ಮಂಗಳವಾರ ತನ್ನ ತೀರ್ಪು ಪ್ರಕಟಿಸಲಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಈ ಆದೇಶ ಪ್ರಕಟವಾಗಲಿದೆ.

ಮಾರ್ಚ್ 21ರಂದು ಇಡಿಯಿಂದ ಬಂಧಿಸಲ್ಪಟ್ಟಿದ್ದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿತ್ತು. ಅದರ ಪ್ರಕಾರ ಅವರು ಶುಕ್ರವಾರವೇ ಬಿಡುಗಡೆಯಾಗಬಹುದಿತ್ತು. ಆದರೆ. ಅದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ತನ್ನ ಆದೇಶದವರೆಗೆ ಆ ಜಾಮೀನಿಗೆ ತಡೆ ನೀಡಿತ್ತು.

ನ್ಯಾಯಾಧೀಶ ಸುಧೀರ್ ಕುಮಾರ್ ಜೈನ್ ಅವರ ರಜಾಕಾಲದ ಪೀಠವು ಜೂನ್ 21ರಂದು ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ ನಂತರ ಆದೇಶವನ್ನು ಕಾಯ್ದಿರಿಸಿತ್ತು. ತಾನು ತೀರ್ಪು ನೀಡುವವರೆಗೆ ಜಾಮೀನು ಆದೇಶವನ್ನು ತಡೆಹಿಡಿಯಲು ಸೂಚಿಸಿತ್ತು. ವಿಚಾರಣಾ ನ್ಯಾಯಾಲಯವು ಜೂನ್ 20ರಂದು ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿತು. 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್‌ನಲ್ಲಿ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತು. ಅದರಲ್ಲಿ ತನಿಖೆಗೆ ಅಡ್ಡಿಪಡಿಸಲು ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವುದಿಲ್ಲ ಎಂಬುದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿತು.

ಇದನ್ನೂ ಓದಿ: ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ದೆಹಲಿ ಹೈಕೋರ್ಟ್ ತನ್ನ ಜಾಮೀನಿಗೆ ತಡೆಯಾಜ್ಞೆ ನೀಡಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜೂನ್ 26ರವರೆಗೆ ಮುಂದೂಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಅರ್ಜಿಯ ಕುರಿತು ಹೈಕೋರ್ಟ್‌ನ ಅಂತಿಮ ತೀರ್ಪಿಗೆ ಸುಪ್ರೀಂ ಕೋರ್ಟ್ ಕಾಯುತ್ತಿರುವಾಗ ಈ ನಿರ್ಧಾರ ಬಂದಿದೆ.

ಇದನ್ನೂ ಓದಿ: ಚುನಾವಣೆ ಸಮಯದಲ್ಲೇ ಕೇಜ್ರಿವಾಲ್​ರನ್ನು ಬಂಧಿಸಿದ್ದೇಕೆ?; ಇಡಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಇಡಿ ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಅಂತಿಮ ಆದೇಶವನ್ನು ಪ್ರಕಟಿಸುವವರೆಗೆ ನಾವು ಕಾಯುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಂದಿನ ವಿಚಾರಣೆಯನ್ನು ಜೂನ್ 26ಕ್ಕೆ ನಿಗದಿಪಡಿಸಲಾಗಿದ್ದು, ಮಧ್ಯಂತರದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿನ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ಅನಿಶ್ಚಿತವಾಗಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಜಾಮೀನಿನ ಮೇಲಿನ ಹೈಕೋರ್ಟ್ ತಡೆಯಾಜ್ಞೆಯನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿಯ ಅರ್ಜಿಯನ್ನು ಜೂನ್ 26ಕ್ಕೆ ಮುಂದೂಡಿದೆ. ಹೈಕೋರ್ಟ್ ಜಾರಿ ನಿರ್ದೇಶನಾಲಯದ ಅಂತಿಮ ಆದೇಶವನ್ನು ನೀಡುವವರೆಗೆ ಕಾಯುವುದಾಗಿ ಸುಪ್ರೀಂ ಕೋರ್ಟ್ ಸೂಚಿಸಿದೆ.

ಲೋಕಸಭೆ ಚುನಾವಣೆಗೆ ಮುನ್ನ ನಡೆದ ಹೈಡ್ರಾಮಾದಲ್ಲಿ ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರು ಜೂನ್ 2ರಂದು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ