ದೆಹಲಿ ಮದ್ಯನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ. ಕವಿತಾರನ್ನು ಏಪ್ರಿಲ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನ್ಯಾಯಾಲಯ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಸೋಮವಾರ ಬಿಆರ್‌ಎಸ್ ನಾಯಕಿ ಕೆ ಕವಿತಾ(K Kavitha) ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಸೋಮವಾರ ಬಿಆರ್‌ಎಸ್ ನಾಯಕಿ ಕೆ ಕವಿತಾ(K Kavitha) ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಬಿಆರ್‌ಎಸ್ ನಾಯಕನನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಮತ್ತು ಪ್ರಸ್ತುತ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನಂತರ ಇವರನ್ನು ಬಂಧಿಸಲಾಗಿತ್ತು. ಮಾರ್ಚ್ 21ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರನ್ನು ಬಂಧಿಸಲಾಗಿತ್ತು.
ದೆಹಲಿ ಮದ್ಯನೀತಿ ಹಗರಣ, ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ(K Kavita) ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು.
ಮತ್ತಷ್ಟು ಓದಿ: ಮದ್ಯನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ
ಏಪ್ರಿಲ್ 2 ರಂದು ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಆಕೆ ಏಪ್ರಿಲ್ 15ರವರೆಗೆ ಜೈಲಿನಲ್ಲಿ ಇರಲಿದ್ದಾರೆ. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ಕವಿತಾ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ತಾಯಿಯ ಅನುಪಸ್ಥಿತಿಯನ್ನು ಸಹೋದರ ಅಥವಾ ತಂದೆ ಪೂರೈಸಲು ಸಾಧ್ಯವಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ವಕೀಲರು ಹೇಳಿದ್ದರು.
ವಿಚಾರಣೆ ವೇಳೆ ಇಡಿ ಪರವಾಗಿ ವಾದ ಮಂಡಿಸಿದ ವಕೀಲ ಜೊಹೆಬ್ ಹುಸೇನ್, ಕವಿತಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ತನ್ನ ಮೊಬೈಲ್‌ನಲ್ಲಿ ಸಿಕ್ಕಿದ್ದ ಸಾಕ್ಷ್ಯಗಳು ಸೇರಿದಂತೆ ತನ್ನ ವಿರುದ್ಧದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:42 am, Mon, 15 April 24