Excise Policy Scam: ಮನೀಶ್ ಸಿಸೋಡಿಯಾಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್​

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

Excise Policy Scam: ಮನೀಶ್ ಸಿಸೋಡಿಯಾಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್​
ಮನೀಶ್ ಸಿಸೋಡಿಯಾ
Follow us
|

Updated on:Jun 05, 2023 | 2:41 PM

ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ(Excise Policy Scam) ಅಕ್ರಮವಾಗಿ ಹಣ ಸಂಗ್ರಹ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಈ ಆರೋಪಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿದೆ ಆ ಕಾರಣದಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ನ್ಯಾಯಾಲಯವು ಸಿಸೋಡಿಯಾ ಅವರನ್ನು ಅವರ ಪತ್ನಿ ಅನುಕೂಲಕರವಾದ ದಿನಗಳಲ್ಲಿ ಭೇಟಿಯಾಗಲು ಅನುಮತಿ ನೀಡಿದೆ.  ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಮನೀಶ್ ಸಿಸೋಡಿಯಾ ಅವರು ತಮ್ಮ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ನಾನು ಒಬ್ಬನೇ ನೋಡಿಕೊಳ್ಳಬೇಕು ಅದಕ್ಕಾಗಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು.

ಆದರೆ ಹೈಕೋರ್ಟ್​ ಅವರ ಅರ್ಜಿಯನ್ನು ನಿರಾಕರಿಸಿದೆ ಎಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಆದೇಶ ನೀಡಿದ್ದಾರೆ, ಆದರೆ ಸಿಸೋಡಿಯಾ ಅವರ ಅನುಕೂಲಕ್ಕಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ತಮ್ಮ ಪತ್ನಿಯನ್ನು ಒಂದು ದಿನದ ಮಟ್ಟಿಗೆ ಕಸ್ಟಡಿಯಲ್ಲಿ ಭೇಟಿಯಾಗಲು ಅವಕಾಶ ನೀಡಿದ್ದಾರೆ.

ಮಾರ್ಚ್ 9ರಂದು ಬಂಧಿತರಾಗಿದ್ದ ಸಿಸೋಡಿಯಾ ಅವರು ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದೆಹಲಿಯ ಅಬಕಾರಿ ನೀತಿಯನ್ನು ಎಎಪಿ ಸರ್ಕಾರವು ನವೆಂಬರ್ 2021ರಲ್ಲಿ ಜಾರಿಗೊಳಿಸಿತು. ಭ್ರಷ್ಟಾಚಾರದ ಆರೋಪಗಳ ನಡುವೆ ಕಳೆದ ವರ್ಷ ಸೆಪ್ಟೆಂಬರ್ ಕೊನೆಯಲ್ಲಿ ಈ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ: Excise Policy Case: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್

ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಮೇ 30ರಂದು ನ್ಯಾಯಾಲಯವು ವಜಾಗೊಳಿಸಿತ್ತು, ಅವರು ಪ್ರಭಾವಿ ವ್ಯಕ್ತಿ ಮತ್ತು ಅವರ ವಿರುದ್ಧದ ಆರೋಪಗಳು ಮೇಲೆ ಬೇರೆ ಪರಿಣಾಮವನ್ನು ಉಂಟು ಮಾಡಬಹುದು ಎಂದು ರದ್ದು ಮಾಡುವಂತೆ ಸಿಬಿಐ ಅರ್ಜಿಯನ್ನು ಸಲ್ಲಿಸಿತ್ತು. ಆ ಕಾರಣದಿಂದ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ ಮತ್ತೆ ಅವರು ಮಧ್ಯಂತರ ಜಾಮೀನುಯನ್ನು ಸಲ್ಲಿಸಿದ್ದರು, ಆದರೆ ಇದೀಗ ಅವರ ಅರ್ಜಿಯನ್ನು ನಿರಾಕರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:29 pm, Mon, 5 June 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ