Exit Poll Results 2021: ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳ ಗದ್ದುಗೆ ಯಾರಿಗೆ? ಎಲ್ಲ ಮತಗಟ್ಟೆ ಸಮೀಕ್ಷೆಗಳ ಸರಾಸರಿ ಲೆಕ್ಕಾಚಾರ ನೀಡುವ ಒಳನೋಟವೇನು?

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದ್ದ 8 ಹಂತದ ಮತದಾನದ ಪೈಕಿ ಕೊನೆಯ ಹಂತದ ಮತದಾನ ಮುಗಿದ ನಂತರ ಹೊರಬಿದ್ದಿರುವ ಈ ಮತಗಟ್ಟೆ ಸಮೀಕ್ಷೆಗಳು ಒಂದು ರೀತಿಯಲ್ಲಿ ಜಿದ್ದಾಜಿದ್ದಿ ಕಣಕ್ಕೆ ರೋಚಕ ಕ್ಲೈಮ್ಯಾಕ್ಸ್ ಸಿಗುವಂತೆ ಮಾಡಿವೆ.

Exit Poll Results 2021: ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳ ಗದ್ದುಗೆ ಯಾರಿಗೆ? ಎಲ್ಲ ಮತಗಟ್ಟೆ ಸಮೀಕ್ಷೆಗಳ ಸರಾಸರಿ ಲೆಕ್ಕಾಚಾರ ನೀಡುವ ಒಳನೋಟವೇನು?
ಮಮತಾ ಬ್ಯಾನರ್ಜಿ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ಆಯೇಷಾ ಬಾನು

Updated on: Apr 30, 2021 | 6:43 AM

ಬೆಂಗಳೂರು: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಬಹುನಿರೀಕ್ಷಿತ ಮತಗಟ್ಟೆ ಸಮೀಕ್ಷೆಗಳು ಗುರುವಾರ (ಏಪ್ರಿಲ್ 29) ಪ್ರಕಟವಾಗಿವೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದ್ದ 8 ಹಂತದ ಮತದಾನದ ಪೈಕಿ ಕೊನೆಯ ಹಂತದ ಮತದಾನ ಮುಗಿದ ನಂತರ ಹೊರಬಿದ್ದಿರುವ ಈ ಮತಗಟ್ಟೆ ಸಮೀಕ್ಷೆಗಳು ಒಂದು ರೀತಿಯಲ್ಲಿ ಜಿದ್ದಾಜಿದ್ದಿ ಕಣಕ್ಕೆ ರೋಚಕ ಕ್ಲೈಮ್ಯಾಕ್ಸ್ ಸಿಗುವಂತೆ ಮಾಡಿವೆ. ಈ ಸಮೀಕ್ಷೆಗಳನ್ನು ಸಂಪೂರ್ಣ ನಂಬಲು ಆಗುವುದಿಲ್ಲ. ಮೇ 2ರಂದು ಫಲಿತಾಂಶ ಪ್ರಕಟವಾದ ನಂತರವೇ ನಿಜ ಏನು ಎಂಬುದು ತಿಳಿಯುತ್ತದೆ. ಅಲ್ಲಿಯವರೆಗೆ ತಾಳ್ಮೆಯಿಂದ ಇರಬೇಕು ಎಂದು ಸಮೀಕ್ಷೆಗಳಲ್ಲಿ ಹಿನ್ನಡೆ ಅನುಭವಿಸಿರುವ ರಾಜಕೀಯ ಪಕ್ಷಗಳು ಹೇಳಿದ್ದರೆ, ‘ಇದು ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯ ಪ್ರತೀಕ. ಇಂದು ನಮ್ಮ ಮುನ್ನಡೆ, ನಾಳೆ ನಮ್ಮ ಗೆಲುವು’ ಎಂದು ಸಮೀಕ್ಷೆಗಳಲ್ಲಿ ಮುನ್ನಡೆ ಸಾಧಿಸಿರುವ ರಾಜಕೀಯ ಪಕ್ಷಗಳು ಹೇಳುತ್ತಿವೆ.

ಆರು ಸಂಸ್ಥೆಗಳು ಪ್ರಕಟಿಸಿರುವ ಮತಗಟ್ಟೆ ಸಮೀಕ್ಷೆಗಳನ್ನು ಸರಾಸರಿ ಲೆಕ್ಕಹಾಕಿ ವಿಶ್ಲೇಷಿಸಿದಾಗ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರಳ ಬಹುಮತ ಪಡೆಯುವ ಸಾಧ್ಯತೆ ಕಂಡುಬಂದಿದೆ. ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆ ಟಿಎಂಸಿ ತೊರೆದವರ ಪೈಕಿ ಎಷ್ಟು ಮಂದಿ ಸೋಲುತ್ತಾರೆ ಎಂಬ ಪ್ರಶ್ನೆಗೆ ಸಿಗುವ ಉತ್ತರದ ಮೇಲೆ ಮಮತಾ ಈ ಬಾರಿ ಅಧಿಕಾರಕ್ಕೆ ಮರಳಿ ಬರುತ್ತಾರೋ? ಇಲ್ಲವೋ ಎಂಬ ಪ್ರಶ್ನೆಗಳಿಗೂ ಉತ್ತರ ಸಿಗಬೇಕಿದೆ. ಮತಗಟ್ಟೆ ಸಮೀಕ್ಷೆಗಳ ಪ್ರಕಾರ ಈ ಬಾರಿ ಬಿಜೆಪಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಸಿಗುವುದು ಕಷ್ಟ. ಆದರೆ ಕಳೆದ 2016ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಬಿಜೆಪಿಯ ಮತಗಳಿಕೆ ಮತ್ತು ಸ್ಥಾನಗಳಿಕೆ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಸುಧಾರಿಸಿರುವುದನ್ನು ತಳ್ಳಿಹಾಕಲು ಆಗುವುದಿಲ್ಲ.

ಟಿಎಂಸಿಯ ಚುನಾವಣಾ ಸಲಹೆಗಾರರೂ ಆಗಿರುವ ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್​ ಅವರ ಹೇಳಿಕೆ ಇದೀಗ ಹಲವರಿಗೆ ನೆನಪಾಗುತ್ತಿದೆ. ಮೊದಲಿನಿಂದಲೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದ ಪ್ರಶಾಂತ್ ಕಿಶೋರ್ ಒಂದು ಹಂತದಲ್ಲಿ ‘ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ 100 ಸ್ಥಾನಗಳನ್ನು ಗೆಲ್ಲುವುದಿಲ್ಲ. ಒಂದು ವೇಳೆ ಗೆದ್ದರೆ ನಾನು ರಾಜಕಾರಣದಿಂದ ದೂರ ಉಳಿಯುತ್ತೇನೆ’ ಎಂದು ಸವಾಲು ಹಾಕಿದ್ದರು. ಇಂದು ಪ್ರಕಟವಾಗಿರುವ ಬಹುತೇಕ ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದನ್ನು ತಿಳಿಸಿವೆ. ಒಂದು ವೇಳೆ ಇದು ನಿಜವೇ ಆದರೆ ಮೇ 2ರ ನಂತರ ಪ್ರಶಾಂತ್ ಕಿಶೋರ್ ನಿಜಕ್ಕೂ ಏನು ಮಾಡುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

Average-Exit-Poll

ಮತಗಟ್ಟೆ ಸಮೀಕ್ಷೆಗಳ ಸರಾಸರಿ ಲೆಕ್ಕಾಚಾರ

ಪಶ್ಚಿಮ ಬಂಗಾಳದಲ್ಲಿ 34 ವರ್ಷಗಳ ಎಡಪಕ್ಷಗಳ ಆಡಳಿತವನ್ನು ಬದಿಗೆ ತಳ್ಳಿ ತೃಣಮೂಲ ಕಾಂಗ್ರೆಸ್ 2011ರಲ್ಲಿ ಅಧಿಕಾರಕ್ಕೆ ಬಂತು. 2016ರ ಚುನಾವಣೆಯಲ್ಲಿ ಇನ್ನೂ ದೊಡ್ಡ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡಿತ್ತು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಸ್ತಿತ್ವ ಪಶ್ಚಿಮ ಬಂಗಾಳದಲ್ಲಿ ಪ್ರಖರವಾಗಿ ಬೆಳಕಿಗೆ ಬಂತು. ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಪಡೆಯಲೇಬೇಕೆಂಬ ಜಿದ್ದಿನೊಂದಿಗೆ ಬಿಜೆಪಿ ಚುನಾವಣಾ ಕಣಕ್ಕಿಳಿಯಿತು. ಹೀಗಾಗಿ ಅಲ್ಲಿನ ವಿಧಾನಸಭಾ ಚುನಾವಣೆ ದೇಶದ ಮನೆಮನೆಗಳಲ್ಲಿ ಚರ್ಚೆಯ ವಿಷಯವಾಗಿತ್ತು.

ಕೇರಳದಲ್ಲಿ ಅಧಿಕಾರರೂಢ ಎಡಪಕ್ಷಗಳ ನೇತೃತ್ವ ಎಲ್​ಡಿಎಫ್ ಮೈತ್ರಿಕೂಟವು 85ರಿಂದ 140 ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು ಸುಮಾರು 53 ಸ್ಥಾನಗಳೊಂದಿಗೆ 2ನೇ ಸ್ಥಾನಕ್ಕೆ ತೃಪ್ತಿಪಡಬೇಕಾಗುತ್ತದೆ. ಒಂದುವೇಳೆ ಈ ಬಾರಿಯ ಮತಗಟ್ಟೆ ಸಮೀಕ್ಷೆಗಳು ನಿಜವಾದರೆ ಕೇರಳದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಧಿಕಾರದಲ್ಲಿದ್ದ ಪಕ್ಷವೊಂದು ಮತ್ತೊಮ್ಮೆ ಅಧಿಕಾರಕ್ಕೆ ಮರಳಿದಂತೆ ಆಗುತ್ತದೆ. ಕೇರಳದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದ ಬಿಜೆಪಿಗೆ ಅಲ್ಲಿನ ಜನರು ಈ ಬಾರಿಯೂ ಮನ್ನಣೆ ನೀಡಿಲ್ಲ ಎಂದು ಸಮೀಕ್ಷೆಗಳು ಹೇಳಿವೆ.

ತಮಿಳುನಾಡಿನಲ್ಲಿ ಡಿಎಂಕೆ ಈ ಬಾರಿ ಅಧಿಕಾರಕ್ಕೆ ಬರಲಿದೆ ಎನ್ನುವುದು ಮತಗಟ್ಟೆ ಸಮೀಕ್ಷೆಗಳು ಸಾರಿಹೇಳಿವೆ. ತಮಿಳುನಾಡು ವಿಧಾನಸಭೆಯಲ್ಲಿ 165 ಸ್ಥಾನಗಳನ್ನು ಡಿಎಂಕೆ ಗೆಲ್ಲಬಹುದು ಎನ್ನಲಾಗುತ್ತಿದೆ. ಬಿಜೆಪಿಯ ಮಿತ್ರಪಕ್ಷವಾಗಿರುವ ಎಐಎಡಿಎಂಕೆ ಕೇವಲ 66 ಸ್ಥಾನಗಳೊಂದಿಗೆ ಸೊರಗಬಹುದು ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಎಐಎಡಿಎಂಕೆಯ ನಾಯಕಿ ಜೆ.ಜಯಲಲಿತಾ ನಿಧನದ ನಂತರ ಆ ಪಕ್ಷವು ಎದುರಿಸುತ್ತಿರುವ ಮೊದಲ ಚುನಾವಣೆ ಇದು. 2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಗಣನೀಯ ಪ್ರಮಾಣದಲ್ಲಿ ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. ಸತತ ಎರಡು ಅವಧಿಯನ್ನು ವಿರೋಧ ಪಕ್ಷದಲ್ಲಿ ಕಳೆದಿರುವ ಡಿಎಂಕೆಗೆ ಈ ಬಾರಿ ಅಧಿಕಾರ ಒಲಿಯಬಹುದು ಎನ್ನುವುದನ್ನು ಮತಗಟ್ಟೆ ಸಮೀಕ್ಷೆಗಳು ಸಾರಿಹೇಳಿವೆ.

ಅಸ್ಸಾಂನಲ್ಲಿ ಬಿಜೆಪಿಯು 72 ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಬಹುದು ಎನ್ನಲಾಗಿದೆ. ಅಸ್ಸಾಂನಲ್ಲಿ ಅಧಿಕಾರ ಪಡೆಯುವ ನಿರೀಕ್ಷೆ ಇರಿಸಿಕೊಂಡಿದ್ದ ಕಾಂಗ್ರೆಸ್​ ವ್ಯಾಪಕ ಪ್ರಚಾರ ನಡೆಸಿತ್ತು. ಆದರೆ ಅಲ್ಲಿ ಕಾಂಗ್ರೆಸ್ ಕೇವಲ 53 ಸ್ಥಾನಗಳನ್ನು ಗೆಲ್ಲಬಹುದು ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.

(Exit Poll Results 2021 Analysis of Kerala Tamil Nadu West Bengal Assam Pondicherry assembly election result predictions)

ಇದನ್ನೂ ಓದಿ: Exit Poll Results 2021: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹ್ಯಾಟ್ರಿಕ್ ಸಾಧ್ಯತೆ; Tv9-Polstrat ಸಮೀಕ್ಷೆ

ಇದನ್ನೂ ಓದಿ: Exit Poll Results 2021: ತಮಿಳುನಾಡಿನಲ್ಲಿ ಎಐಎಡಿಎಂಕೆಗೆ ಹಿನ್ನಡೆ, ಡಿಎಂಕೆ ಗದ್ದುಗೇರುವ ಸಾಧ್ಯತೆ; Tv9-Polstrat ಸಮೀಕ್ಷೆ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ