5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ, ಲಸಿಕೆ ನೀಡಿಕೆ ವೇಗ ಹೆಚ್ಚಿಸಿ ಎಂದ ಚುನಾವಣಾ ಆಯೋಗ

Assembly Polls 2022: ಸದ್ಯ ಉತ್ತರಾಖಂಡ ಮತ್ತು ಗೋವಾದಲ್ಲಿ ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯಗೊಂಡಿದೆ. ಉತ್ತರಪ್ರದೇಶದಲ್ಲಿ ಶೇ.85 ಮತ್ತು ಮಣಿಪುರ-ಪಂಜಾಬ್​​ನಲ್ಲಿ ಶೇ.80ರಷ್ಟು ಸಂಪೂರ್ಣಗೊಂಡಿದೆ.

5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ, ಲಸಿಕೆ ನೀಡಿಕೆ ವೇಗ ಹೆಚ್ಚಿಸಿ ಎಂದ ಚುನಾವಣಾ ಆಯೋಗ
ಚುನಾವಣಾ ಆಯೋಗ
Follow us
TV9 Web
| Updated By: Lakshmi Hegde

Updated on:Dec 29, 2021 | 10:55 AM

ಕೆಲವೇ ದಿನಗಳ ಹಿಂದೆ ಚುನಾವಣಾ ಆಯೋಗದ ಮುಖ್ಯಸ್ಥರು ದೇಶದ ಆರೋಗ್ಯ ಇಲಾಖೆ ಕಾರ್ಯದರ್ಶಿ, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. 2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್​ (5 ರಾಜ್ಯಗಳು)ಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್​ ಸೋಂಕಿನ (Omicron Variant) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ? ಹೀಗೆ ಹಲವು ವಿಚಾರಗಳನ್ನು ಚರ್ಚಿಸಲು ಸಭೆ ನಡೆದಿತ್ತು. ಈ ಮಧ್ಯೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗಳನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು.

ಆದರೆ ಚುನಾವಣಾ ಆಯೋಗ, ಚುನಾವಣೆಗಳನ್ನು ಮುಂದೂಡಲಾಗದು. ಅದರ ಬದಲು ಬರುವ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊವಿಡ್ 19 ಲಸಿಕೆ ನೀಡಿಕೆ ವೇಗವನ್ನು ಹೆಚ್ಚಿಸಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬಳಿ ಕೇಳಿದೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಈಗಾಗಲೇ ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲನಾ ಭೇಟಿ ನಡೆಸುತ್ತಿದ್ದಾರೆ. ಗೋವಾ ಮತ್ತು ಉತ್ತರಾಖಂಡ ಪ್ರವಾಸದ ಬಳಿಕ ಇವರು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್​​ರನ್ನು ಭೇಟಿಯಾಗಿ ದೇಶದ ಕೊರೊನಾ ಸ್ಥಿತಿಗತಿಗಳ ಕುರಿತು ಚರ್ಚೆ ಮಾಡಿದ್ದಾರೆ.  ಇನ್ನೇನು ಚುನಾವಣಾ ಪ್ರಚಾರ ಶುರುವಾಗುತ್ತದೆ. ನಂತರ ಮತದಾನದ ದಿನ, ಮತ ಎಣಿಕೆ ದಿನಗಳಂದು ಕೊವಿಡ್​ 19 ನಿಯಂತ್ರಣ ಶಿಷ್ಟಾಚಾರಗಳಲ್ಲಿ ಹೇಗೆ ಸುಧಾರಣೆ ಮಾಡಬಹುದು ಎಂಬುದನ್ನ ಚುನಾವಣಾ ಆಯೋಗ ಮತ್ತು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಸೇರಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಸದ್ಯ ಉತ್ತರಾಖಂಡ ಮತ್ತು ಗೋವಾದಲ್ಲಿ ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯಗೊಂಡಿದೆ. ಉತ್ತರಪ್ರದೇಶದಲ್ಲಿ ಶೇ.85 ಮತ್ತು ಮಣಿಪುರ-ಪಂಜಾಬ್​​ನಲ್ಲಿ ಶೇ.80ರಷ್ಟು ಸಂಪೂರ್ಣಗೊಂಡಿದೆ. ಆದರೆ ಚುನಾವಣೆಗೂ ಪೂರ್ವ ಇನ್ನಷ್ಟು ವೇಗವಾಗಿ ಕೊರೊನಾ ಲಸಿಕೆ ನೀಡಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ. ಒಂದೊಂದೇ ರಾಜ್ಯವಾಗಿ ಚುನಾವಣಾ ಆಯೋಗದ ಅಧಿಕಾರಿಗಳು ಪ್ರವಾಸ ಮಾಡುತ್ತಿದ್ದು, ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ ಶೀಘ್ರವೇ ಒಂದು ಮಾರ್ಗಸೂಚಿ ಬಿಡುಗಡೆ ಮಾಡಲಿದ್ದಾರೆ.  ಈ ಹಿಂದೆ ಒಂದು ಬೂತ್​​ನಲ್ಲಿ ಗರಿಷ್ಠ 1500 ಮತದಾರರು ಮತ ಹಾಕಬಹುದಿತ್ತು. ಅದನ್ನು ಈಗಾಗಲೇ ಚುನಾವಣಾ ಆಯೋಗ 1200ಕ್ಕೆ ಇಳಿಕೆ ಮಾಡಿದೆ.  ಹಾಗೇ, ಮತಗಟ್ಟೆಗಳ ಸಂಖ್ಯೆಯನ್ನು ಏರಿಕೆ ಮಾಡಿದೆ.  ಜನವರಿ ಮೊದಲ ವಾರದಲ್ಲಿ ಮತ್ತೊಮ್ಮೆ ಚುನಾವಣಾ ಆಯೋಗದ ಮುಖ್ಯಸ್ಥರು, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಅಪ್ಪು ಇಲ್ಲದೇ ಕಳೆಯಿತು 2 ತಿಂಗಳು; ನೇತ್ರದಾನದ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ರಾಘಣ್ಣ

Published On - 10:55 am, Wed, 29 December 21

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ