AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚಳಕ್ಕೆ ಕಾರಣವಾಗಲಿದೆಯೇ ರೈತರ ದೆಹಲಿ ಚಲೋ ಚಳವಳಿ

ಪಂಜಾಬ್ ರೈತರ ದೆಹಲಿ ಚಲೊ ಕೊರೊನಾ ಸೋಂಕು ಹೆಚ್ಚಲು ಕಾರಣವಾಗಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರ ಸಾವಿರಾರು ರೈತರು ಒಂದೆಡೆ ಸೇರುವುದನ್ನು ತಡೆಯಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕೊರೊನಾ ಹೆಚ್ಚಳಕ್ಕೆ ಕಾರಣವಾಗಲಿದೆಯೇ ರೈತರ ದೆಹಲಿ ಚಲೋ ಚಳವಳಿ
ಸಾಂದರ್ಭಿಕ ಚಿತ್ರ
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 30, 2020 | 6:25 PM

Share

ದೆಹಲಿ: ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಐದನೇ ದಿನವೂ ಮುಂದುವರೆದಿರುವ ಪಂಜಾಬ್ ರೈತರ ಪ್ರತಿಭಟನೆಯಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ICMRನ ಸೋಂಕುರೋಗ ವಿಭಾಗದ ಮುಖ್ಯಸ್ಥ ಸಮೀರನ್ ಪಂಡಾ, ಸೋಂಕು ಪ್ರಸರಣೆ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿತ್ತು. ಆದರೆ, ರೈತರ ಪ್ರತಿಭಟನೆಯಲ್ಲಿ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಲಾಗಿಲ್ಲ. ಒಂದೇ ಕಡೆ ಸಾವಿರಾರು ಜನ ಸೇರಿರುವುದು ಕೊರೊನಾ ಸೋಂಕು ಹರಡಲು ಕಾರಣವಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಐಪಿಸಿ 270ರ ಪ್ರಕಾರ ತಡೆಯಬಹುದಿತ್ತು.. ಈ ಅಭಿಪ್ರಾಯಕ್ಕೆ ಧ್ವನಿಗೂಡಿಸಿರುವ ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಕೆ.ಕೆ. ಅಗರ್​ವಾಲ್, ಸಾಂಕ್ರಾಮಿಕ ರೋಗ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವ ಅಧಿಕಾರ ಸರ್ಕಾರದ ಬಳಿಯಿದೆ. ಐಪಿಸಿ 270ರ ಪ್ರಕಾರ ಸ್ಥಳೀಯ ಪೊಲೀಸರು ಸಾಂಕ್ರಾಮಿಕ ರೋಗ ಹೆಚ್ಚಿಸುವ ಪ್ರತಿಭಟನೆಯನ್ನು ತಡೆಯಬಹುದಿತ್ತು. ಎಲ್ಲಾ ಸಮಸ್ಯೆಗಳಿಗೂ ಸರ್ವೋಚ್ಛ ನ್ಯಾಯಾಲಯವೇ ಪರಿಹಾರ ಸೂಚಿಸಲಿ ಎಂದು ಬಯಸುವುದು ತಪ್ಪು’ ಎಂದು ವಿವರಿಸಿದರು.

ಕೊರೊನಾ ನಿಯಂತ್ರಿಸಲು ಇದುವರೆಗೆ ದೆಹಲಿ ಸರ್ಕಾರ ಕೈಗೊಂಡ ಕ್ರಮಗಳು ವ್ಯರ್ಥವಾಗಲಿವೆ. ಮಾರ್ಗಸೂಚಿ ಅನುಸರಿಸಿ ಪ್ರತಿಭಟನೆ ಮಾಡಬಹುದಿತ್ತು. ದೆಹಲಿಯನ್ನೂ ಮೀರಿ, ಇಡೀ ದೇಶಕ್ಕೇ ಕೊರೊನಾ ಹರಡಲು ದೆಹಲಿ ಚಲೋ ಕಾರಣವಾಗಲಿದೆ ಎಂದು AIIMS ನ ಪ್ರಾಧ್ಯಾಪಕ ಸಂಜಯ್ ರೈ ಆತಂಕ ವ್ಯಕ್ತಪಡಿಸಿದರು.

ವಾಯುಮಾಲಿನ್ಯದ ಹೆಚ್ಚಳದಿಂದ ಇತ್ತೀಚಿಗೆ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಎಂದು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ದೆಹಲಿಗೆ ತೆರಳುವ ಮಾರ್ಗಗಳನ್ನೇ ಬಂದ್ ಮಾಡುತ್ತೇವೆ: ಎಚ್ಚರಿಕೆ ನೀಡಿದ ಪಂಜಾಬ್ ರೈತರು

Published On - 6:24 pm, Mon, 30 November 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!