AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAN India SIR: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಎಂದರೇನು? ಅದರ ಪ್ರಾಮುಖ್ಯತೆ ಏನು?

ದೇಶಾದ್ಯಂತ ಹಂತ ಹಂತವಾಗಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಅದರ ಕುರಿತಾಗಿ ಇಂದು (ಅ. 27) ಸಂಜೆ ಸುದ್ದಿಗೋಷ್ಠಿ ನಡೆಸಿ ರಾಜ್ಯಗಳು, ದಿನಾಂಕಗಳನ್ನು ಘೋಷಣೆ ಮಾಡಲಿದೆ.2026ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಸೇರಿದಂತೆ 10 ರಿಂದ 15 ರಾಜ್ಯಗಳನ್ನು ಒಳಗೊಂಡಿದೆ ಎಂದು ವರದಿಗಳು ಉಲ್ಲೇಖಿಸಿವೆ.ಪ ಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಹಾಗಾದರೆ ಈ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಎಂದರೇನು?, ಅದರ ಪ್ರಾಮುಖ್ಯತೆ ಏನು? ಎಂಬುದನ್ನು ತಿಳಿಯೋಣ.

PAN India SIR: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಎಂದರೇನು? ಅದರ ಪ್ರಾಮುಖ್ಯತೆ ಏನು?
ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ
ನಯನಾ ರಾಜೀವ್
| Updated By: Digi Tech Desk|

Updated on:Oct 27, 2025 | 2:28 PM

Share

ನವದೆಹಲಿ, ಅಕ್ಟೋಬರ್ 27: ಭಾರತದ ಚುನಾವಣಾ ಆಯೋಗ(Election Commission Of India)ವು ಬಿಹಾರ ವಿಧಾನಸಭಾ ಚುನಾವಣೆ ನಾಲ್ಕು ತಿಂಗಳು ಬಾರಿ ಇರುವಾಗಲೇ ರಾಜ್ಯದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(Special Intensive Revision)ಯನ್ನು ಪ್ರಾರಂಭಿಸಿತ್ತು. ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ದಿನಾಂಕಗಳನ್ನು ಘೋಷಿಸಲು ಚುನಾವಣಾ ಆಯೋಗ ಇಂದು ಪತ್ರಿಕಾಗೋಷ್ಠಿ ಕರೆದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖ್​ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ.

ಮತದಾರರ ಪಟ್ಟಿ ತೀವ್ರ ವಿಶೇಷ ಪರಿಷ್ಕರಣೆ ಎಂದರೇನು?

ಯಾವುದೇ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ಯಾವುದೇ ಅನರ್ಹ ವ್ಯಕ್ತಿಯನ್ನು ಸೇರಿಸದಂತೆ ನೋಡಿಕೊಳ್ಳುವುದು ಈ ವಿಶೇಷ ಪರಿಷ್ಕರಣೆಯ ಉದ್ದೇಶವಾಗಿದೆ. ಅಧಿಸೂಚನೆಯ ಪ್ರಕಾರ, ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಪರಿಹರಿಸಿದ ನಂತರವೇ ಹೊಸ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲು ಸೆಪ್ಟೆಂಬರ್ 30 ರ ದಿನಾಂಕವನ್ನು ನಿಗದಿಪಡಿಸಲಾಗಿದೆ. ಈ ಅಭಿಯಾನದ ಮೊದಲ ಹಂತವನ್ನು ಇಸಿಐ ಪೂರ್ಣಗೊಳಿಸಿದೆ. ಚುನಾವಣಾ ಆಯೋಗ ಈಗಾಗಲೇ ಮೊದಲ ಕರಡನ್ನು ಪ್ರಕಟಿಸಿದೆ.

ಎಸ್​ಐಆರ್ ಸಮೀಕ್ಷೆ ಹೇಗೆ ನಡೆಯುತ್ತೆ?

ಮನೆ-ಮನೆಗೆ ತೆರಳಿ ಗಣತಿ ಮಾಡುವ ಮೂಲಕ ಹೊಸ ಮತದಾರರ ಪಟ್ಟಿಯನ್ನು ವ್ಯಾಪಕ ಪರಿಷ್ಕರಣೆಯ ಭಾಗವಾಗಿ ಸಿದ್ಧಪಡಿಸಲಾಗುತ್ತದೆ. ಪ್ರಸ್ತುತ ಮತದಾರರ ಪಟ್ಟಿಯನ್ನು ಪರಿಶೀಲಿಸದೆಯೇ ಎಂದು, ಗಣತಿದಾರರು ಪ್ರತಿ ಮನೆಗೆ ಭೇಟಿ ನೀಡಿ ಅರ್ಹ ದಿನಾಂಕದಂದು ಅರ್ಹ ಮತದಾರರನ್ನು ಪಟ್ಟಿ ಮಾಡುತ್ತಾರೆ.

ಮತ್ತಷ್ಟು ಓದಿ: ಸಮಗ್ರ ಪರಿಷ್ಕರಣೆ ನಂತರ ಬಿಹಾರ ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ಮೊದಲ ಹಂತದಲ್ಲಿ 10-15 ರಾಜ್ಯಗಳನ್ನು ಒಳಗೊಂಡಿರುತ್ತೆ

ಮೊದಲ ಹಂತವು 2026 ರಲ್ಲಿ ವಿಧಾನಸಭಾ ಚುನಾವಣೆಗಳು ಸೇರಿದಂತೆ 10 ರಿಂದ 15 ರಾಜ್ಯಗಳನ್ನು ಒಳಗೊಳ್ಳುತ್ತದೆ. ಮತದಾರರ ಪಟ್ಟಿಯನ್ನು ನವೀಕರಿಸಲು ಮತ್ತು ಶುದ್ಧೀಕರಿಸಲು ಎಸ್‌ಐಆರ್ ಒಂದು ನಿರ್ಣಾಯಕ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಹೊಸ ಮತದಾರರನ್ನು ನೋಂದಾಯಿಸುವುದು, ಮೃತರ ಹೆಸರುಗಳನ್ನು ತೆಗೆದುಹಾಕುವುದು, ನಕಲಿ ನಮೂದುಗಳನ್ನು ತೆಗೆದುಹಾಕುವುದು ಮತ್ತು ವರ್ಗಾವಣೆಗಳು ಸೇರಿವೆ.

ಆಯೋಗದ ಈ ಉಪಕ್ರಮವು ಶೀಘ್ರದಲ್ಲೇ ಚುನಾವಣೆಗಳು ನಡೆಯಲಿರುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯಂತಹ ರಾಜ್ಯಗಳ ಮೇಲೆ ವಿಶೇಷವಾಗಿ ಗಮನಹರಿಸಿದೆ. ಈ ರಾಜ್ಯಗಳಲ್ಲಿ 2026 ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಮತ್ತು ಮತದಾರರ ಪಟ್ಟಿಗಳ ನಿಖರತೆಯು ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಖಚಿತಪಡಿಸುತ್ತದೆ.

ಎಸ್​ಐಆರ್ ಏಕೆ ಮುಖ್ಯವಾಗುತ್ತೆ?

ಮತದಾರರ ಪಟ್ಟಿಯಲ್ಲಿನ ಯಾವುದೇ ದೋಷಗಳು ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಬಹುದು. ಹಾಗಾಗಿ ಅರ್ಹ ಮತದಾರರನ್ನು ಮಾತ್ರ ಹಿಡಿದಿಡಲು ಈ ಎಸ್​ಐಆರ್ ಸಹಾಯ ಮಾಡುತ್ತದೆ. ಮತದಾರರ ಪಟ್ಟಿಯನ್ನು ಮತ್ತಷ್ಟು ಬಲಪಡಿಸಲು ಆಯೋಗವು ಇತ್ತೀಚಿನ ವರ್ಷಗಳಲ್ಲಿ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿದೆ. ಮತದಾರರ ಸಹಾಯವಾಣಿ ಅಪ್ಲಿಕೇಶನ್‌ಗಳು, ಆನ್‌ಲೈನ್ ನೋಂದಣಿ ಮತ್ತು ಬೂತ್ ಮಟ್ಟದ ಅಧಿಕಾರಿಗಳ (BLO) ಪಾತ್ರವನ್ನು ಹೆಚ್ಚಿಸಲಾಗಿದೆ.

ಎಸ್​ಐಆರ್ ಪ್ರಕ್ರಿಯೆ ಏನು?

ಎಸ್‌ಐಆರ್ ಸಮಯದಲ್ಲಿ, ಮನೆ-ಮನೆಗೆ ಸಮೀಕ್ಷೆಗಳು ನಡೆಯಲಿವೆ, ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಂಸ್ಕರಿಸುವುದು ಮತ್ತು ಫೋಟೋ ಐಡಿ ಕಾರ್ಡ್‌ಗಳನ್ನು ನವೀಕರಿಸುವುದು ಮುಂತಾದ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಮೊದಲ ಹಂತದ ನಂತರ, ದೇಶಾದ್ಯಂತ ಏಕರೂಪದ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಇತರ ರಾಜ್ಯಗಳನ್ನು ಹಂತಹಂತವಾಗಿ ಈ ಪ್ರಕ್ರಿಯೆ ನಡೆಸಲಾಗುತ್ತದೆ.

ಮೊದಲು ಯಾವ ರಾಜ್ಯಗಳಲ್ಲಿ ಮೊದಲು ಎಸ್​ಐಆರ್ ನಡೆಯಬಹುದು?

ಅಸ್ಸಾಂ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಬಂಗಾಳದಲ್ಲಿ 2026 ರಲ್ಲಿ ಚುನಾವಣೆ ನಡೆಯಲಿದೆ, ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಮೊದಲು ಈ ರಾಜ್ಯಗಳಿಂದ ಪ್ರಾರಂಭವಾಗಲಿವೆ.

ಬಿಹಾರದಲ್ಲಿ ಎಸ್​ಐಆರ್ ಪೂರ್ಣಗೊಂಡಿದೆ

ಬಿಹಾರದಲ್ಲಿ ಮತದಾರರ ಪಟ್ಟಿಯ ಎಸ್​ಐಆರ್ ಪೂರ್ಣಗೊಂಡಿದ್ದು, ಸೆಪ್ಟೆಂಬರ್ 30 ರಂದು ಸುಮಾರು 74.2 ಮಿಲಿಯನ್ ಹೆಸರುಗಳನ್ನು ಒಳಗೊಂಡ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಯಿತು. ಬಿಹಾರದಲ್ಲಿ ಮತದಾನವು ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ರಂದು ಮತಗಳ ಎಣಿಕೆ ನಡೆಯಲಿದೆ. SIR ಅನ್ನು ಅನುಷ್ಠಾನಗೊಳಿಸುವ ಚೌಕಟ್ಟನ್ನು ಅಂತಿಮಗೊಳಿಸಲು ಆಯೋಗವು ಈಗಾಗಲೇ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ (CEO) ಎರಡು ಸಭೆಗಳನ್ನು ನಡೆಸಿದೆ. ಅನೇಕ ಮುಖ್ಯ ಚುನಾವಣಾ ಅಧಿಕಾರಿಗಳು ತಮ್ಮ ಹಿಂದಿನ ಎಸ್​ಐಆರ್​ ನಂತರ ಪ್ರಕಟಿಸಲಾದ ಮತದಾರರ ಪಟ್ಟಿಗಳನ್ನು ತಮ್ಮ ವೆಬ್‌ಸೈಟ್‌ಗಳಲ್ಲಿ ಈಗಾಗಲೇ ಅಪ್‌ಲೋಡ್ ಮಾಡಿದ್ದಾರೆ.

2008ರಲ್ಲಿ ದೆಹಲಿಯಲ್ಲಿ ಕೊನೆಯ ಬಾರಿಗೆ ಸಂಪೂರ್ಣ ಪರಿಷ್ಕರಣೆ ನಡೆಸಲಾಯಿತು. ಉತ್ತರಾಖಂಡದಲ್ಲಿ ಕೊನೆಯ SIR ಅನ್ನು 2006 ರಲ್ಲಿ ನಡೆಸಲಾಯಿತು ಮತ್ತು ಆ ವರ್ಷದ ಮತದಾರರ ಪಟ್ಟಿ ಈಗ ರಾಜ್ಯ ಮುಖ್ಯ ಚುನಾವಣಾಧಿಕಾರಿಯ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಚುನಾವಣಾ ಆಯೋಗವು 2003 ರ ಬಿಹಾರದ ಮತದಾರರ ಪಟ್ಟಿಯನ್ನು ಸಂಪೂರ್ಣ ಪರಿಷ್ಕರಣೆಗಾಗಿ ಬಳಸಿದಂತೆಯೇ ರಾಜ್ಯಗಳಲ್ಲಿ ಅಂತಿಮ ಎಸ್​ಐಆರ್ ಅನ್ನು ಬಳಸುತ್ತದೆ. ಹೆಚ್ಚಿನ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಕೊನೆಯ ಎಸ್​ಐಆರ್ 2002 ಮತ್ತು 2004 ರ ನಡುವೆ ಇದೆ.

ಬಿಹಾರ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಹೇಗೆ ನವೀಕರಿಸುತ್ತದೆ?

ತರಬೇತಿ ಪಡೆದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಪ್ರಸ್ತುತ ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡಲು ಸಹಾಯ ಮಾಡುತ್ತಾರೆ. ಹೆಚ್ಚುವರಿಯಾಗಿ, ಬಿಎಲ್‌ಒಗಳು ಗಣತಿ ನಮೂನೆಗಳನ್ನು ಸಂಗ್ರಹಿಸಿ ಪ್ರತಿಯೊಂದರ ಬಗ್ಗೆ ಶಿಫಾರಸುಗಳನ್ನು ಒದಗಿಸುತ್ತಾರೆ. ಇಸಿಐ ಪ್ರಕಾರ, 1952–56, 1957, 1961, 1965, 1966, 1983–84, 1987–89, 1992, 1993, 1995, 2002, 2003  ರಲ್ಲಿ ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶಕ್ಕಾಗಿ ದೇಶದ ಎಲ್ಲಾ ಪ್ರದೇಶಗಳಲ್ಲಿ ಇದೇ ರೀತಿಯ ಪರಿಷ್ಕರಣೆಯನ್ನು ನಡೆಸಲಾಗಿತ್ತು.

ನವೆಂಬರ್​​ನಲ್ಲಿ ಪ್ರಾರಂಭವಾಗುವ ನಿರೀಕ್ಷೆ

ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಹಂತ ಹಂತವಾಗಿ ನಡೆಸಲು ಸಿದ್ಧತೆ ನಡೆಸುತ್ತಿದೆ. ಈ ಪ್ರಕ್ರಿಯೆಯು ನವೆಂಬರ್ ಆರಂಭದಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. 2026 ರಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳು ಮತ್ತು ಕೆಲವು ಇತರ ರಾಜ್ಯಗಳಲ್ಲಿ ಇದು ಮೊದಲು ಜಾರಿಗೆ ಬರಲಿದೆ. ದಿನಾಂಕ ಇಂದು ಪ್ರಕಟವಾಗುವ ನಿರೀಕ್ಷೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:08 pm, Mon, 27 October 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ