Manipur Violence Explainer: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ಮಣಿಪುರ(Manipur)ವು ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ, ಹಿಂಸಾಚಾರ ಭುಗಿಲೆದ್ದಿದೆ. ಮೈತಿ ಸ್ಥಾನಕ್ಕೆ ಪರಿಶಿಷ್ಟ ಸ್ಥಾನಮಾನದ ಬೇಡಿಕೆ ವಿರೋಧಿಸಿ ನಡೆದ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿತ್ತು.

Manipur Violence Explainer: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ
ಮಣಿಪುರ ಹಿಂಸಾಚಾರ
Follow us
|

Updated on: May 05, 2023 | 1:09 PM

ಮಣಿಪುರ(Manipur)ವು ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ, ಹಿಂಸಾಚಾರ ಭುಗಿಲೆದ್ದಿದೆ. ಮೈತಿ ಜನಾಂಗಕ್ಕೆ ಪರಿಶಿಷ್ಟ ಸ್ಥಾನಮಾನದ ಬೇಡಿಕೆ ವಿರೋಧಿಸಿ ನಡೆದ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿತ್ತು. ಗುಡ್ಡಗಾಡು ಜಿಲ್ಲೆಯಾದ ಚುರಾಚಂದ್‌ಪುರದಿಂದ ರಾಜಧಾನಿ ಇಂಫಾಲ್‌ವರೆಗೆ ಮಣಿಪುರ ರಾಜ್ಯಾದ್ಯಂತ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರವು ಉತ್ತುಂಗಕ್ಕೇರಿದೆ. ಬುಡಕಟ್ಟು ಜನಾಂಗದ ಐಕ್ಯತೆಯ ಮೆರವಣಿಗೆಯಲ್ಲಿ ಎಂಟು ಜಿಲ್ಲೆಗಳು ಹಿಂಸಾಚಾರದ ಹಿಡಿತಕ್ಕೆ ಒಳಗಾದವು. ಇಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಇಂಟರ್​ನೆಟ್ ಸ್ಥಗಿತ ಉಂಟಾಗಿದೆ.

ಘಟನೆ ಹಿನ್ನೆಲೆ

  • ಮಣಿಪುರ ರಾಜ್ಯದ ಜನಸಂಖ್ಯೆಯ ಶೇಕಡಾ 53 ರಷ್ಟಿರುವ ಬುಡಕಟ್ಟು ಜನಾಂಗದವರಲ್ಲದ ಮೇತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಅಖಿಲ ಬುಡಕಟ್ಟು ವಿದ್ಯಾರ್ಥಿ ಒಕ್ಕೂಟ ಮಣಿಪುರ (ATSUM) ರಾಜ್ಯದ ಹತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿತ್ತು.
  • ಈ ಬೆಳವಣಿಗೆಯು ರಾಜ್ಯದಲ್ಲಿ ಮೈತಿ ಸಮುದಾಯ ಮತ್ತು ಗುಡ್ಡಗಾಡು ಬುಡಕಟ್ಟುಗಳ ನಡುವಿನ ಹಳೆಯ ಜನಾಂಗೀಯ ದ್ವೇಷವನ್ನು ಮತ್ತೆ ಕೆಣಕಿದಂತಾಗಿದೆ. ಹೆಚ್ಚಿನ ರಕ್ಷಣೆಗಾಗಿ ತಮ್ಮನ್ನು ಎಸ್​ಟಿ ಪಟ್ಟಿಗೆ ಸೇರಿಸಬೇಕೆಂದು ಮೈತಿಗಳು ಬಹುಕಾಲದಿಂದ ಬೇಡಿಕೆಯಿಟ್ಟಿದ್ದರೆ, ರಾಜ್ಯದ ಬುಡಕಟ್ಟು ಜನಾಂಗದವರು, ವಿಶೇಷವಾಗಿ ನಾಗಾಗಳು ಮತ್ತು ಕುಕಿಗಳು ಇದನ್ನು ಬಲವಾಗಿ ವಿರೋಧಿಸಿದ್ದಾರೆ. ಮೈತಿಗಳನ್ನು ಎಸ್​ಟಿ ಪಟ್ಟಿಗೆ ಸೇರಿಸಿದರೆ ಇದು ನಮ್ಮ ಭೂಮಿಯನ್ನು ಕಸಿದುಕೊಳ್ಳುತ್ತದೆ ಎಂದು ಬುಡಕಟ್ಟು ಜನಾಂಗದವರು ಹೇಳುತ್ತಾರೆ.
  •  ಮೈತಿ ಸಮುದಾಯದ ಎಸ್‌ಟಿ ಸ್ಥಾನಮಾನದ ಬೇಡಿಕೆಯ ಕುರಿತು ನಾಲ್ಕು ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.
  • ಇದರ ಬೆನ್ನಲ್ಲೇ ರಾಜ್ಯದ ಜನಸಂಖ್ಯೆಯ ಸುಮಾರು ಶೇ 40ರಷ್ಟು ಇರುವ ಬುಡಕಟ್ಟು ಜನಾಂಗದವರು ಈ ಮೆರವಣಿಗೆಯನ್ನು ಆಯೋಜಿಸಿದ್ದರು. ಚುರಾಚಂದ್‌ಪುರ ಜಿಲ್ಲೆಯ ಟೊರ್ಬಂಗ್ ಪ್ರದೇಶದಲ್ಲಿ ನಡೆದ ಮೆರವಣಿಗೆಯಲ್ಲಿ, ಶಸ್ತ್ರಸಜ್ಜಿತ ಜನಸಮೂಹವು ಮೇಟಿ ಸಮುದಾಯದ ಜನರ ಮೇಲೆ ದಾಳಿ ನಡೆಸಿತು, ಇದು ಅನೇಕ ಜಿಲ್ಲೆಗಳಲ್ಲಿ ಪ್ರತೀಕಾರದ ದಾಳಿಗೆ ಕಾರಣವಾಯಿತು, ಅಲ್ಲದೇ ರಾಜ್ಯದಾದ್ಯಂತ ಹಿಂಸಾಚಾರವನ್ನು ಉಲ್ಬಣಗೊಳಿಸಲು ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.
  • ಮಣಿಪುರ ಹೈಕೋರ್ಟ್ ಏಪ್ರಿಲ್ 19 ರಂದು ನೀಡಿದ ಆದೇಶದಲ್ಲಿ, ಶೀಘ್ರವಾಗಿ, ಅಂದರೆ ನಾಲ್ಕು ವಾರಗಳ ಅವಧಿಯಲ್ಲಿ ಪರಿಶಿಷ್ಟ ಪಂಗಡದ ಪಟ್ಟಿಗೆ ಮೈತಿ ಸಮುದಾಯವನ್ನು ಸೇರಿಸಲು ಅರ್ಜಿಗಳನ್ನು ಪರಿಗಣಿಸಲು ಸರ್ಕಾರವನ್ನು ಕೇಳಿದೆ.
  • ರಾಜ್ಯದ ಜನಸಂಖ್ಯೆಯ 60% ರಷ್ಟಿರುವ ಮೇಟಿ ಸಮುದಾಯದ ಸದಸ್ಯರು ಹೆಚ್ಚಾಗಿ ಇಂಫಾಲ್ ಕಣಿವೆಯಲ್ಲಿ ಕೇಂದ್ರೀಕೃತರಾಗಿದ್ದಾರೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸಮುದಾಯವು ಹೇಳಿಕೊಂಡಿದೆ.
  • ಅಸ್ತಿತ್ವದಲ್ಲಿರುವ ಕಾನೂನುಗಳ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ನೆಲೆಸಲು ಅವರಿಗೆ ಅವಕಾಶವಿಲ್ಲ.
  • ಇನ್ನೊಂದೆಡೆ ಬುಡಕಟ್ಟು ಸಮುದಾಯಗಳು ತಮಗೆ ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ನೀಡಿದರೆ ಮೇಟಿ ಸಮುದಾಯ ತಮ್ಮ ಭೂ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಬಹುದು ಎನ್ನುವ ಭಯದಲ್ಲಿದ್ದಾರೆ.
  • ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ರಾಜ್ಯದ ಎಲ್ಲಾ ಹತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ಕರೆದ ಮೆರವಣಿಗೆಯಲ್ಲಿ ಸಾವಿರಾರು ಆದಿವಾಸಿಗಳು ಭಾಗವಹಿಸಿದ್ದರು.
  • ಮಣಿಪುರದ ಎಂಟು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ ಮತ್ತು ಬುಡಕಟ್ಟು ಆಂದೋಲನದ ಸಂದರ್ಭದಲ್ಲಿ ಹಿಂಸಾಚಾರದ ಹಿನ್ನೆಲೆಯಲ್ಲಿ ಇಡೀ ಈಶಾನ್ಯ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಬುಡಕಟ್ಟು ಆಂದೋಲನದ ಸಂದರ್ಭದಲ್ಲಿ ಹಿಂಸಾಚಾರದ ಹಿನ್ನೆಲೆಯಲ್ಲಿ ಮಣಿಪುರದ ಎಂಟು ಜಿಲ್ಲೆಗಳಲ್ಲಿ ಬುಧವಾರ ಕರ್ಫ್ಯೂ ವಿಧಿಸಲಾಯಿತು. ಇಡೀ ಈಶಾನ್ಯ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ