ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಸಾವು,13 ಮಂದಿಗೆ ಗಾಯ

ಖಾಸಗಿ ಪಟಾಕಿ ಗೋದಾಮಿನ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗೋದಾಮಿನಲ್ಲಿದ್ದ ಪಟಾಕಿಗಳು ಭಾರೀ ಸದ್ದಿನಿಂದ ಸಿಡಿದಿವೆ ಎಂದು ಸ್ಥಳೀಯರು ಹೇಳಿದ್ದಾರೆ.

ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಸಾವು,13 ಮಂದಿಗೆ ಗಾಯ
ಘಟನಾ ಸ್ಥಳದಲ್ಲಿನ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Mar 22, 2023 | 3:21 PM

ತಮಿಳುನಾಡಿನ (Tamil Nadu) ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಎಂಬಲ್ಲಿ ಬುಧವಾರ ಮಧ್ಯಾಹ್ನ ಪಟಾಕಿ ಗೋದಾಮಿನಲ್ಲಿ (firecracker godown) ಸಂಭವಿಸಿದ ಸ್ಫೋಟದಲ್ಲಿ (explosion) ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದು 13 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಕಾರಣವನ್ನು ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಖಾಸಗಿ ಪಟಾಕಿ ಗೋದಾಮಿನ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗೋದಾಮಿನಲ್ಲಿದ್ದ ಪಟಾಕಿಗಳು ಭಾರೀ ಸದ್ದಿನಿಂದ ಸಿಡಿದಿವೆ ಎಂದು ಸ್ಥಳೀಯರು ಹೇಳಿದ್ದಾರೆ.ಕಟ್ಟಡ ಕುಸಿದಿದೆ. ಇನ್ನೂ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಡಿಜಿಪಿ ಅಭಾಷ್ ಕುಮಾರ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ತನಿಖೆ ನಡೆಯುತ್ತಿದೆ. ಈ ಘಟಕವು ಕಾಂಚೀಪುರಂನಿಂದ ಸುಮಾರು ಹತ್ತು ಕಿಲೋಮೀಟರ್ ದೂರದಲ್ಲಿರುವ ವಝತೋಟ್ಟಂನಲ್ಲಿದೆ. ಘಟಕವು ಮಾನ್ಯ ಪರವಾನಗಿಯನ್ನು ಹೊಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಡೀ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 20 ಮಂದಿ ನೌಕರರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕಾಂಚೀಪುರಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಗಾಯಗೊಂಡಿರುವ 13 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Manish Sisodia: ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಏಪ್ರಿಲ್ 5ರವರೆಗೆ ನ್ಯಾಯಾಂಗ ಬಂಧನ

ಇದಕ್ಕೂ ಮುನ್ನ ಮಾರ್ಚ್ 16 ರಂದು ಧರ್ಮಪುರಿ ಜಿಲ್ಲೆಯ ಪೆನ್ನಾಗರಂನಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದು ಇಬ್ಬರು ಗಾಯಗೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Wed, 22 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ