ತಮಿಳುನಾಡಿನ (Tamil Nadu) ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಎಂಬಲ್ಲಿ ಬುಧವಾರ ಮಧ್ಯಾಹ್ನ ಪಟಾಕಿ ಗೋದಾಮಿನಲ್ಲಿ (firecracker godown) ಸಂಭವಿಸಿದ ಸ್ಫೋಟದಲ್ಲಿ (explosion) ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದು 13 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಕಾರಣವನ್ನು ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಖಾಸಗಿ ಪಟಾಕಿ ಗೋದಾಮಿನ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗೋದಾಮಿನಲ್ಲಿದ್ದ ಪಟಾಕಿಗಳು ಭಾರೀ ಸದ್ದಿನಿಂದ ಸಿಡಿದಿವೆ ಎಂದು ಸ್ಥಳೀಯರು ಹೇಳಿದ್ದಾರೆ.ಕಟ್ಟಡ ಕುಸಿದಿದೆ. ಇನ್ನೂ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಡಿಜಿಪಿ ಅಭಾಷ್ ಕುಮಾರ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.
ತನಿಖೆ ನಡೆಯುತ್ತಿದೆ. ಈ ಘಟಕವು ಕಾಂಚೀಪುರಂನಿಂದ ಸುಮಾರು ಹತ್ತು ಕಿಲೋಮೀಟರ್ ದೂರದಲ್ಲಿರುವ ವಝತೋಟ್ಟಂನಲ್ಲಿದೆ. ಘಟಕವು ಮಾನ್ಯ ಪರವಾನಗಿಯನ್ನು ಹೊಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಡೀ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 20 ಮಂದಿ ನೌಕರರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕಾಂಚೀಪುರಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಗಾಯಗೊಂಡಿರುವ 13 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: Manish Sisodia: ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಏಪ್ರಿಲ್ 5ರವರೆಗೆ ನ್ಯಾಯಾಂಗ ಬಂಧನ
ಇದಕ್ಕೂ ಮುನ್ನ ಮಾರ್ಚ್ 16 ರಂದು ಧರ್ಮಪುರಿ ಜಿಲ್ಲೆಯ ಪೆನ್ನಾಗರಂನಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದು ಇಬ್ಬರು ಗಾಯಗೊಂಡಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:02 pm, Wed, 22 March 23