ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸ್ಫೋಟ, 4 ಮಂದಿ ಸಾವು, ಮಾಲೀಕನ ಬಂಧನ
ತಮಿಳುನಾಡಿನ ಮೈಲಾಡುತುರೈನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಮೃತಪಟ್ಟವರನ್ನು ಮಾಣಿಕ್ಕಂ, ಮದನ್, ರಾಘವನ್ ಮತ್ತು ನಿಕೇಶ್ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ತಂಡಗಳು ಸ್ಥಳದಲ್ಲಿ ದೌಡಾಯಿಸಿದ್ದು, ಅವರು ಇತರ ನಾಲ್ವರನ್ನು ರಕ್ಷಿಸಿದ್ದಾರೆ, ನಂತರ ಅವರನ್ನು ಚಿಕಿತ್ಸೆಗಾಗಿ ಮಯಿಲಾಡುತುರೈ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಗೋಡೌನ್ ಮಾಲೀಕ ಮೋಹನ್ ಎಂದು ಗುರುತಿಸಲಾಗಿದ್ದು, ಪರವಾನಗಿ ಪಡೆದಿದ್ದಾರೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ಮೈಲಾಡುತುರೈ ಜಿಲ್ಲಾ ಕಂದಾಯ ಅಧಿಕಾರಿ (ಡಿಆರ್‌ಒ) ಮಣಿಮೇಕಲೈ, ಆರ್‌ಡಿಒ ಅರ್ಚನಾ ಮತ್ತು ನಾಗಪಟ್ಟಣಂ ಎಸ್‌ಪಿ ಹರ್ಷ್ ಸಿಂಗ್ ಕೂಡ ಸ್ಥಳಕ್ಕೆ ತಲುಪಿದ್ದಾರೆ.
ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಏತನ್ಮಧ್ಯೆ, ಸ್ಫೋಟದ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಮೃತರ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು.
ಪಶ್ಚಿಮ ಬಂಗಾಳದಲ್ಲೂ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು ಮೇ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು, 9 ಮಂದಿ ಸಾವನ್ನಪ್ಪಿದ್ದರು. ಮಧ್ಯಾಹ್ನದ ಸಮಯದಲ್ಲಿ ಇದ್ದಕ್ಕಿದ್ದಂತೆ ಭಾರಿ ಸ್ಫೋಟವೊಂದು ಕೇಳಿಬಂದಿತ್ತು, ಕಾರ್ಖಾನೆಯ ಮೇಲ್ಛಾವಣಿ ಹಾರಿಹೋಗಿರುವುದನ್ನು ನೋಡಿದ್ದಾರೆ. ಜನರ ಮೃತ ದೇಹಗಳು ಛಿದ್ರವಾಗಿ ಬಿದ್ದಿತ್ತು, ಕೆಲವರ ದೇಹಗಳು ರಸ್ತೆಯಲ್ಲಿ ಬಿದ್ದಿತ್ತು. ಅದರಲ್ಲಿ ಹಲವರು ಸುಟ್ಟು ಕರಕಲಾಗಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ