Odisha Explosion: ಒಡಿಶಾದ ಟಾಟಾ ಸ್ಟೀಲ್ ಕಾರ್ಖಾನೆಯಲ್ಲಿ ಸ್ಫೋಟ, 19 ಮಂದಿಗೆ ಗಾಯ
ಒಡಿಶಾದ ಧೆಂಕನಲ್ ಜಿಲ್ಲೆಯ ಟಾಟಾ ಸ್ಟೀಲ್ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 19 ಮಂದಿ ಗಾಯಗೊಂಡಿದ್ದಾರೆ.
ಧೆಂಕನಲ್: ಟಾಟಾ ಸ್ಟೀಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿರುವ ಘಟನೆ ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಿಂದ 19 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ತೀವ್ರವಾಗಿ ಗಾಯಗೊಂಡ ಕೆಲವರನ್ನು ಕಟಕ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಈ ಘಟನೆ ಸಂಭವಿಸಿದೆ, ತಪಾಸಣೆ ಕಾರ್ಯದ ಸಂದರ್ಭದಲ್ಲಿ ಈ ಸ್ಫೋಟ ನಡೆದಿದೆ, ಈ ಬಗ್ಗೆ ಟಾಟಾ ಸ್ಟೀಲ್ ಹೇಳಿಕೆಯಲ್ಲಿ ತಿಳಿಸಿದ್ದು, ಈ ಸ್ಫೋಟದಿಂದ ಅನೇಕರಿಗೆ ತೀವ್ರವಾದ ಗಾಯವಾಗಿದೆ. ಈಗಾಗಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಿದೆ.
ಈಗಾಗಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಬಂದಿದ್ದು, ರಕ್ಷಣೆ ಕಾರ್ಯ ನಡೆಯುತ್ತಿದೆ. ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಂಪನಿಯು ಎಲ್ಲಾ ಸಿಬ್ಬಂದಿಗಳ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಟಾಟಾ ಕಂಪನಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Petrol Pump Explosion: ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್ ಬಂಕ್ನಲ್ಲಿ ಭಾರಿ ಸ್ಫೋಟ
ಇದೀಗ ಟಾಟಾ ಸ್ಟೀಲ್ ಕಂಪನಿಯು ತಮ್ಮ ಅಧಿಕಾರಿಗಳ ಜತೆಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅಪಘಾತಕ್ಕೆ ಕಾರಣ ಏನು? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದೆ.
ಎಲ್ಲರ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆ ಮತ್ತು ಈ ಘಟನೆಯಿಂದ ಅನೇಕ ವಿಚಾರಗಳನ್ನು ತಿಳಿದುಕೊಳ್ಳಬೇಕಾಗಿದೆ, ಇದಕ್ಕೆ ಕಾರಣ ಖಂಡಿತ ಕಂಡುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:27 pm, Tue, 13 June 23