ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳೀಯರಿಗೆ ಸ್ಫೋಟದ ಸದ್ದು ಕೇಳಿದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಮೊನ್ನೆ ಅಕ್ಟೋಬರ್ 20 ರಂದು ಕೂಡ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿತ್ತು.
#WATCH | NSG commandos and dog squad arrive at the explosion site in Delhi’s Prashant Vihar. pic.twitter.com/X7HHATRP7g
— ANI (@ANI) November 28, 2024
ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಅವರು ಗುರುವಾರ ಬೆಳಗ್ಗೆ 11:58 ಕ್ಕೆ ಸ್ಫೋಟದ ಬಗ್ಗೆ ಮಾಹಿತಿ ಪಡೆದರು. ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಪ್ರಶಾಂತ್ ವಿಹಾರ್ ಪ್ರದೇಶದ ಪಿವಿಆರ್ ಬಳಿ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಪೊಲೀಸ್ ತಂಡವಿದೆ. ಈ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.
ದೇಶದ ರಾಜಧಾನಿ ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ.
ಸ್ಫೋಟದ ರಭಸಕ್ಕೆ ಪ್ರದೇಶದಲ್ಲಿ ಭಾರಿ ಶಬ್ದ ಕೇಳಿಬಂದಿತ್ತು. ಸ್ವೀಟ್ ಅಂಗಡಿಯೊಂದರ ಬಳಿ ಸ್ಕೂಟರ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸ್ಥಳದಲ್ಲಿ ಬಿಳಿ ಪುಡಿಯಂತಹ ವಸ್ತು ಪತ್ತೆಯಾಗಿರುವ ಬಗ್ಗೆ ಮಾಹಿತಿ ಇದೆ. ಫೋರೆನ್ಸಿಕ್ ತಂಡವನ್ನು ಸ್ಥಳಕ್ಕೆ ಕರೆಸಲಾಗಿದ್ದು, ನಂತರವಷ್ಟೇ ಸ್ಪಷ್ಟವಾಗಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:56 pm, Thu, 28 November 24