ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ವಿದ್ಯಾರ್ಥಿ, ಸ್ಫೋಟ, ಗಂಭೀರ ಗಾಯ
ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ಸ್ಫೋಟ(Bomb Blast)ಗೊಂಡಿದ್ದು, ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ವಿದ್ಯಾರ್ಥಿ ಬುಧವಾರ ಸಂಜೆ ಹಾಸ್ಟೆಲ್ನಲ್ಲಿ ಬಾಂಬ್ ತಯಾರಿಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದ್ದು, ಸ್ಫೋಟಕವು ಕೈನಲ್ಲಿರುವಾಗಲೇ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ ಏಕೆ ಬಾಂಬ್ ತಯಾರಿಸುತ್ತಿದ್ದ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಅಲಹಾಬಾದ್ ವಿಶ್ವವಿದ್ಯಾನಿಲಯದ ಎಂಎ ವಿದ್ಯಾರ್ಥಿಯಾಗಿರುವ ಪ್ರಭಾತ್ ಯಾದವ್ ಪಿಸಿ ಬ್ಯಾನರ್ಜಿ ಹಾಸ್ಟೆಲ್‌ನಲ್ಲಿರುವ ತಮ್ಮ ಕೋಣೆಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಅದು ಸ್ಫೋಟಗೊಂಡು ಅವರ ಬಲಗೈಗೆ ತೀವ್ರವಾಗಿ ಗಾಯವಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಶಿವಕುಟಿ) ರಾಜೇಶ್ ಕುಮಾರ್ ಯಾದವ್ ಹೇಳಿದ್ದಾರೆ.
ಮತ್ತಷ್ಟು ಓದಿ: ಪಾಕಿಸ್ತಾನದ ಪೇಶಾವರದಲ್ಲಿ ಸ್ಫೋಟ; ಮಕ್ಕಳು ಸೇರಿದಂತೆ ಏಳು ಮಂದಿಗೆ ಗಾಯ
ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಎಸ್‌ಆರ್‌ಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಭಾತ್ ಯಾದವ್ ವಿರುದ್ಧ ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುವುದು ಎಂದು ಎಸಿಪಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ