AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಚೀನಾ ಗಡಿಯಲ್ಲಿ ಮತ್ತೆ ಘರ್ಷಣೆ: 30ಕ್ಕೂ ಹೆಚ್ಚು ಸೇನಾ ಯೋಧರಿಗೆ ಗಾಯ

ಗಡಿ ವಿಚಾರವಾಗಿ ಬಾಲಬಿಚ್ಚಿದ ಚೀನಾ ಸೇನೆ ಭಾರತ ಗಡಿಪ್ರವೇಶ ಮಾಡಿದ್ದು, ಇದಕ್ಕೆ ಭಾರತೀಯ ಸೇನೆ ಸಹ ಪ್ರತಿರೋಧ ಒಡ್ಡಿ ಚೀನಾ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ. ಆದ್ರೆ, ಘಟನೆಯಲ್ಲಿ ಉಭಯ ದೇಶದ ಯೋಧರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಭಾರತ-ಚೀನಾ ಗಡಿಯಲ್ಲಿ ಮತ್ತೆ ಘರ್ಷಣೆ: 30ಕ್ಕೂ ಹೆಚ್ಚು ಸೇನಾ ಯೋಧರಿಗೆ ಗಾಯ
ಭಾರತ-ಚೀನಾ ಗಡಿಯಲ್ಲಿ ಮತ್ತೆ ಘರ್ಷಣೆ
TV9 Web
| Edited By: |

Updated on: Dec 12, 2022 | 8:17 PM

Share

ಗಡಿಯಲ್ಲಿ ಭಾರತದ ಪ್ರದೇಶವನ್ನು ಅತಿಕ್ರಮಣದ ಮೂಲಕ ಸ್ವಾಧೀನಕ್ಕೆ ತೆಗೆದುಕೊಳ್ಳಲು ಸದಾ ಹವಣಿಸುತ್ತಲೇ ಇರುವ ಚೀನಾ ಮತ್ತೆ ಉಪಟಳ ಮುಂದುವರಿಸಿದೆ. ಗಡಿಯಲ್ಲಿ ಭಾರತ-ಚೀನಾ ಯೋಧರ(Indian, Chinese troops) ನಡುವೆ ಮತ್ತೆ ಘರ್ಷಣೆಯಾಗಿದ್ದು, ಘಟನೆಯಲ್ಲಿ ಉಭಯ ದೇಶಗಳ 30ಕ್ಕೂ ಹೆಚ್ಚು ಸೇನಾ ಯೋಧರಿಗೆ ಗಾಯಗಳಾಗಿವೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಗಲಾಟೆ ನಡೆದ ಬಗ್ಗೆ ಭಾರತೀಯ ಸೇನೆ (Indian Army) ದೃಢಪಡಿಸಿದೆ.

ಅರುಣಾಚಲ ಪ್ರದೇಶದಲ್ಲಿ ಭಾರತ-ಚೀನಾ ಗಡಿ ಭಾಗ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಡಿಸೆಂಬರ್​ 9ರಂದು ಶುಕ್ರವಾರ ತಡರಾತ್ರಿ ಚೀನಾ ಹಾಗೂ ಭಾರತೀಯ ಸೇನಾ ಯೋಧರ ನಡುವೆ ಸಂಘರ್ಷ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘರ್ಷಣೆಯಲ್ಲಿ ಭಾರತ ಹಾಗೂ ಚೀನಾ ದೇಶದ 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. ಈ ಗಲಾಟೆ ನಡೆದ ಬಳಿಕ ಉಭಯ ದೇಶದ ಸೇನಾಧಿಕಾರಿಗಳು ಫ್ಲ್ಯಾಗ್ ಮೀಟಿಂಗ್ ನಡೆಸಿ ಶಾಂತಿ  ಕಾಪಾಡಲು ತೀರ್ಮಾನಿಸಿದ್ದಾರೆ.

ನಿತ್ಯ ನಡೆಯುವ ಗಸ್ತು ವೇಳೆ ಚೀನಾ ಸೇನೆ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿರುವ ಭಾರತದ ಗಡಿ ಪ್ರವೇಶಿಸಿದೆ. ಇದಕ್ಕೆ ಭಾರತೀಯ ಸೇನಾಪಡೆ ತೀವ್ರ ಆಕ್ಷೇಪಿಸಿದೆ. ಈ ವೇಳೆ ಭಾರತ, ಚೀನಾ ಸೇನಾ ಯೋಧರ ನಡುವೆ ತಳ್ಳಾಟ, ನೂಕಾಟ ನಡೆದಿದ್ದು, ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಬಳಿಕ ಭಾರತೀಯ ಯೋಧರು ತಕ್ಕ ತಿರುಗೇಟು ಕೊಟ್ಟಿದ್ದರಿಂದ ಚೀನಾ ಸೇನೆ ಗಡಿಯಿಂದ ಕಾಲ್ಕಿತ್ತಿದೆ. ಈ ಮೂಲಕ ಭಾರತ ಸೇನೆ, ಚೀನಾ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು