AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ ಎಂದು 2022ರ ವಿಡಿಯೋ ವೈರಲ್

Priyanka Gandhi Waqf Protest: ಪ್ರಿಯಾಂಕಾ ಗಾಂಧಿ ಅವರು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಅನೇಕ ಬಳಕೆದಾರರು ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ಈ ವೈರಲ್ ವಿಡಿಯೋ ಇತ್ತೀಚಿನದಲ್ಲ, ಇದು 2022 ರದ್ದಾಗಿದೆ.

Fact Check: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ ಎಂದು 2022ರ ವಿಡಿಯೋ ವೈರಲ್
Priyanka Gandhi Waqf Fact Check Kannada
Follow us
Vinay Bhat
|

Updated on: Apr 09, 2025 | 4:42 PM

ಬೆಂಗಳೂರು (ಏ. 09): ರಾಷ್ಟ್ರಪತಿಗಳ ಅನುಮೋದನೆ ಪಡೆದ ನಂತರ, ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Amendment Act) ಅಂಗೀಕರಿಸಲಾಗಿದೆ. ಏಪ್ರಿಲ್ 3, 2025 ರಂದು ಲೋಕಸಭೆಯು ವಕ್ಫ್ ಅಭಿವೃದ್ಧಿ ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಿತು. ಇದರ ಬೆನ್ನಲ್ಲೇ ದೇಶಾದ್ಯಂತ ಅನೇಕ ವಿವಾದಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿವೆ. ಕೆಲ ವ್ಯಕ್ತಿಗಳು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದ್ದು, ಅದರಲ್ಲಿ ಪ್ರಿಯಾಂಕಾ ಗಾಂಧಿ ಕಪ್ಪು ಬಟ್ಟೆ ಧರಿಸಿ ಪೊಲೀಸ್ ಅಧಿಕಾರಿಗಳಿಂದ ಸುತ್ತುವರೆದಿರುವುದನ್ನು ಕಾಣಬಹುದು.

ಪ್ರಿಯಾಂಕಾ ಗಾಂಧಿ ಅವರು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಅನೇಕ ಬಳಕೆದಾರರು ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫೇಸ್​ಬುಕ್ ಬಳಕೆದಾರರೊಬ್ಬರು, ‘‘ಕಾಂಗ್ರೆಸ್ ಪಕ್ಷ ವಕ್ಫ್ ಸಂಶೋಧನೆ ಬಿಲ್ ವಿರುದ್ಧ ಸಂಸತ್ ನಿಂದ ರೋಡ್ ಮೇಲೆ ವಿರೋಧ ಪ್ರದರ್ಶನ ಮಾಡುತ್ತಿದೆ ಪ್ರಿಯಾಂಕಾ ಗಾಂಧಿಯವರು ಕೂಡ ವಿರೋಧ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ’’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಭಾರತ ಸರ್ಕಾರದಿಂದ 125 ಮತ್ತು 500 ರೂಪಾಯಿ ನಾಣ್ಯ ಬಿಡುಗಡೆ?
Image
ಎಂಎಸ್ ಧೋನಿ ಬಿಜೆಪಿ ಸೇರ್ಪಡೆ?: ವೈರಲ್ ಫೋಟೋದ ಅಸಲಿಯತ್ತು ಏನು?
Image
ಸಲ್ಮಾನ್ ಖಾನ್ ಮನೆಯ ಮೇಲೆ ಗುಂಡಿನ ದಾಳಿ ಎಂದು ವಿಡಿಯೋ ವೈರಲ್
Image
ಚಾಹಲ್- ಧನಶ್ರೀ ವಿಚ್ಛೇದನದ ಹಾರ್ದಿಕ್ ಪಾಂಡ್ಯ ಶಾಕಿಂಗ್ ಹೇಳಿಕೆ?

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ ನಡೆಸಿದ್ದಾರೆಯೇ?:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ಈ ವೈರಲ್ ವಿಡಿಯೋ ಇತ್ತೀಚಿನದಲ್ಲ, ಇದು 2022 ರದ್ದಾಗಿದೆ. ವೈರಲ್ ಆಗಿರುವ ಹೇಳಿಕೆಯನ್ನು ಪರಿಶೀಲಿಸಲು, ನಾವು ವಿಡಿಯೋದ ಸ್ಕ್ರೀನ್‌ಶಾಟ್ ತೆಗೆದುಕೊಂಡು ಗೂಗಲ್ ಲೆನ್ಸ್ ಸಹಾಯದಿಂದ ಹುಡುಕಿದೆವು. ಆಗ ಇದೇ ವೈರಲ್ ವಿಡಿಯೋಕ್ಕೆ ಹೋಲುವ ಅನೇಕ ಸುದ್ದಿ ವರದಿಗಳು ನಮಗೆ ಸಿಕ್ಕಿವೆ.

Fact Check: ಭಾರತ ಸರ್ಕಾರದಿಂದ 125 ಮತ್ತು 500 ರೂಪಾಯಿ ನಾಣ್ಯ ಬಿಡುಗಡೆ?: ವೈರಲ್ ಸುದ್ದಿಯ ಸತ್ಯ ತಿಳಿಯಿರಿ

ಟಿವಿ9 ತೆಲುಗು ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ಆಗಸ್ಟ್ 5, 2022 ರಂದು ‘‘ಕಾಂಗ್ರೆಸ್ ಧರಣಿ.. ಪ್ರಿಯಾಂಕಾ ಗಾಂಧಿಯನ್ನ ಬಲವಂತವಾಗಿ ಎಳೆದುಕೊಂಡು ಹೋದ ಪೊಲೀಸರು’’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಸುದ್ದಿ ಪ್ರಕಟಿಸಿದೆ. ಮಾಹಿತಿಯ ಪ್ರಕಾರ, ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ನಾಯಕರು ಬೆಲೆ ಏರಿಕೆ ಮತ್ತು ಜಿಎಸ್‌ಟಿ ವಿರುದ್ಧ ಪ್ರತಿಭಟಿಸಿದರು. ನಂತರ ಅವರನ್ನು ಬಂಧಿಸಲಾಯಿತು ಎಂದು ಬರೆಯಲಾಗಿದೆ.

ಇದೇವೇಳೆ ಟಿವಿ9 ಕನ್ನಡ ಕೂಡ ಆಗಸ್ಟ್ 5, 2022 ವೈರಲ್ ವಿಡಿಯೋದ ಸ್ಕ್ರೀನ್ ಶಾಟ್​ನೊಂದಿಗೆ ‘‘ಪ್ರತಿಭಟನೆ ನಡೆಸುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ರಸ್ತೆಯಲ್ಲೇ ದರದರನೆ ಎಳೆದೊಯ್ದ ಪೊಲೀಸರು; ವಿಡಿಯೋ ವೈರಲ್’’ ಎಂಬ ಹೆಡ್​ಲೈನ್ ಮೂಲಕ ಸುದ್ದಿ ಪ್ರಕಟಿಸಿದೆ. ‘‘ಬೆಲೆ ಏರಿಕೆ ಮತ್ತು ಜಿಎಸ್‌ಟಿ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಿದೆ. ಈ ನಡುವೆ ದೆಹಲಿಯಲ್ಲಿ ನಾಟಕೀಯ ದೃಶ್ಯಗಳು ಕಾಣಿಸಿಕೊಂಡಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆಯಲು ಹೋದಾಗ ಅವರು ಸಹಕರಿಸಲು ನಿರಾಕರಿಸಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ರಸ್ತೆಯಲ್ಲೇ ಕುಳಿತು ಪ್ರಿಯಾಂಕಾ ಗಾಂಧಿ ಮತ್ತೆ ಪ್ರತಿಭಟನೆಗೆ ಮುಂದಾದರು. ಇದರಿಂದ ಪೊಲೀಸ್ ಸಿಬ್ಬಂದಿ ಪ್ರಿಯಾಂಕಾ ಗಾಂಧಿ ಅವರನ್ನು ರಸ್ತೆಯಲ್ಲೇ ದರದರನೆ ಎಳೆದುಕೊಂಡು ಹೋಗಿ ಕಾರಿನೊಳಗೆ ತಳ್ಳಿದರು.’’ ಎಂದು ಇದರಲ್ಲಿ ಬರೆಯಲಾಗಿದೆ.

ಬಳಿಕ ಕೀವರ್ಡ್‌ಗಳನ್ನು ಬಳಸಿ ಹುಡುಕಿದಾಗ, ಪ್ರಿಯಾಂಕಾ ಗಾಂಧಿ ವಕ್ಫ್ ಕಾಯ್ದೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಗ್ಗೆ ನಮಗೆ ಯಾವುದೇ ಸುದ್ದಿ ಸಿಗಲಿಲ್ಲ. ಈ ಮೂಲಕ ಟಿವಿ9 ಕನ್ನಡ ತನ್ನ ತನಿಖೆಯಲ್ಲಿ ಈ ವಿಡಿಯೋಗೂ ವಕ್ಫ್ ತಿದ್ದುಪಡಿ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ ಎಂದು ಕಂಡುಹಿಡಿದಿದೆ. ಈ ವಿಡಿಯೋ 2022 ರಲ್ಲಿ ಪ್ರಿಯಾಂಕಾ ಗಾಂಧಿ ಬೆಲೆ ಏರಿಕೆ ಮತ್ತು ಜಿಎಸ್‌ಟಿ ವಿರುದ್ಧ ಪ್ರತಿಭಟನೆ ನಡೆಸಿದ ಸಂದರ್ಭದ್ದಾಗಿದೆ.

ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್