Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಗಾಜಿಯಾಬಾದ್‌ನಲ್ಲಿ ಆಹಾರದಲ್ಲಿ ಮೂತ್ರ ಬೆರೆಸಿದ ಮನೆಗೆಲಸದಾಕೆ ಮುಸ್ಲಿಂ ಎಂದು ಸುಳ್ಳು ಪೋಸ್ಟ್ ವೈರಲ್

ಗಾಜಿಯಾಬಾದ್‌ನ ಕ್ರಾಸಿಂಗ್ ರಿಪಬ್ಲಿಕ್‌ನಲ್ಲಿ ಆಹಾರದಲ್ಲಿ ಮೂತ್ರವನ್ನು ಬೆರೆಸಿದ ಮಹಿಳೆಯ ಹೆಸರು ರೀನಾ. ಘಟನೆಯಲ್ಲಿ ಯಾವುದೇ ಕೋಮುವಾದಿ ಕೋನ ಇಲ್ಲ ಎಂದು ನಾವು ಖಚಿತವಾಗಿ ಹೇಳುತ್ತೇವೆ.

Fact Check: ಗಾಜಿಯಾಬಾದ್‌ನಲ್ಲಿ ಆಹಾರದಲ್ಲಿ ಮೂತ್ರ ಬೆರೆಸಿದ ಮನೆಗೆಲಸದಾಕೆ ಮುಸ್ಲಿಂ ಎಂದು ಸುಳ್ಳು ಪೋಸ್ಟ್ ವೈರಲ್
ಫ್ಯಾಕ್ಟ್​ಚೆಕ್
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 18, 2024 | 10:23 AM

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಕೆ ಕ್ರಾಸಿಂಗ್ ರಿಪಬ್ಲಿಕ್ ಪ್ರದೇಶದಲ್ಲಿ ಮನೆಕೆಲಸದಾಕೆ ಮನೆಯಲ್ಲಿ ಹಿಟ್ಟು ಮತ್ತು ಪಾತ್ರೆಗಳಲ್ಲಿ ಮೂತ್ರವನ್ನು ಬೆರೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಇದೀಗ ಕೋಮು ಹೇಳಿಕೆಯೊಂದಿಗೆ ಪುನಃ ಈ ವಿಡಿಯೋ ಹರಿದಾಡುತ್ತಿದ್ದು, ಮನೆಗೆಲಸದಾಕೆ ಮುಸ್ಲಿಂ ಎಂದು ಹೇಳಲಾಗುತ್ತಿದೆ.

ಎಕ್ಸ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ‘‘ಉಗುಳಿನ ಬಳಿಕ ಈಗ ಮೂತ್ರ ಜಿಹಾದ್‌ ಶುರುವಾಗಿದೆ. ಗಾಜಿಯಾಬಾದ್‌ನಲ್ಲಿ ಮುಸ್ಲಿಂ ಮನೆಕೆಲಸದಾಕೆ ಪಾತ್ರೆಯೊಂದರಲ್ಲಿ ಮೂತ್ರ ಮಾಡಿ ಅದರಲ್ಲಿಯೇ ರೊಟ್ಟಿ ತಯಾರಿಸಿರುವ ಆಘಾತಕಾರಿ ಘಟನೆ ಮನೆಯಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಗೂಗಲ್ ಓಪನ್ ಸರ್ಚ್ ಟೂಲ್ ಅನ್ನು ಬಳಸಿ ಕೀವರ್ಡ್‌ಗಳೊಂದಿಗೆ ಹುಡುಕಿದಾಗ, ನಾವು ಈ ಘಟನೆಗೆ ಸಂಬಂಧಿಸಿದಂತೆ ಅನೇಕ ಸುದ್ದಿಯನ್ನು ಕಂಡುಕೊಂಡಿದ್ದೇವೆ. ಇದರಲ್ಲಿ ಟಿವಿ9 ಕನ್ನಡ ಪ್ರಕಟಿಸಿದೆ ಸುದ್ದಿ ಕೂಡ ಸಿಕ್ಕಿತು.

ಅಕ್ಟೋಬರ್ 16, 2024 ರಂದು ಟಿವಿ9 ಕನ್ನಡ ‘ಮೂತ್ರ ಬೆರೆಸಿ ರೊಟ್ಟಿ ತಯಾರಿಸುತ್ತಿರುವ ವೇಳೆ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ ಮನೆಕೆಲಸದಾಕೆ; ವೈರಲ್‌ ಆಯ್ತು ವಿಡಿಯೋ’ ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಪ್ರಕಟಿಸಿದೆ. ಇದರಲ್ಲಿರುವ ಮಾಹಿತಿಯ ಪ್ರಕಾರ, ಈ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದಿದ್ದು, ಇಲ್ಲಿನ ಥಾನಾ ಕ್ರಾಸಿಂಗ್‌ ರಿಪಬ್ಲಿಕ್‌ ಪ್ರದೇಶದ ಫ್ಲಾಟ್‌ ಒಂದರಲ್ಲಿ ವಾಸವಿರುವ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರ ಮನೆಯಲ್ಲಿ ಮನೆಕೆಲಸದಾಕೆ ತನ್ನ ಮೂತ್ರ ಬೆರೆಸಿ ರೊಟ್ಟಿ ತಯಾರಿಸುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾಳೆ. ರೀನಾ ಹೆಸರಿನ ಆ ಮಹಿಳೆ ಕಳೆದ 8 ವರ್ಷದಿಂದ ಈ ಉದ್ಯಮಿಯ ಮನೆಯಲ್ಲಿಯೇ ಕೆಲಸವನ್ನು ಮಾಡುತ್ತಿದ್ದು, ಇದೀಗ ಆಕೆ ಉಂಡ ಮನೆಗೆಯೇ ದ್ರೋಹ ಬಗೆಯುವ ಕೆಲಸವನ್ನು ಮಾಡಿದ್ದಾಳೆ ಎಂದು ಬರೆಯಲಾಗಿದೆ.

ಸಂಪೂರ್ಣ ಸುದ್ದಿಯನ್ನು ಇಲ್ಲಿ ಓದಬಹುದು.

Viral: ಮೂತ್ರ ಬೆರೆಸಿ ರೊಟ್ಟಿ ತಯಾರಿಸುತ್ತಿರುವ ವೇಳೆ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ ಮನೆಕೆಲಸದಾಕೆ; ವೈರಲ್‌ ಆಯ್ತು ವಿಡಿಯೋ

ಇನ್ನು ಹುಡುಕಾಟದ ಸಮಯದಲ್ಲಿ, ಎಎನ್‌ಐನ ಅಧಿಕೃತ ಹ್ಯಾಂಡಲ್‌ನಲ್ಲಿ ಆರೋಪಿ ರೀನಾ ಅವರ ಚಿತ್ರವನ್ನು ನಾವು ಕಂಡುಕೊಂಡಿದ್ದೇವೆ. ಇದಲ್ಲದೇ ಗಾಜಿಯಾಬಾದ್ ವೇವ್ ಸಿಟಿಯ ಎಸಿಪಿ ಲಿಪಿ ನಾಗೈಚ್ ಅವರ ಹೇಳಿಕೆ ನಮಗೆ ಸಿಕ್ಕಿದೆ. ಇದರಲ್ಲಿಯೂ ಆರೋಪಿ ಮಹಿಳೆಯ ಹೆಸರು ರೀನಾ ಎಂದು ನಮೂದಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಪ್ರತಿ ಕೂಡ ನಮಗೆ ಸಿಕ್ಕಿದೆ. ಇದರ ಪ್ರಕಾರ ಅಕ್ಟೋಬರ್ 14 ರಂದು ಗಾಜಿಯಾಬಾದ್‌ನ ಕ್ರಾಸಿಂಗ್ ರಿಪಬ್ಲಿಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ಸಂಖ್ಯೆ 0391/2024 ರ ಪ್ರಕಾರ ಆರೋಪಿ ಮಹಿಳೆಯ ಹೆಸರನ್ನು ರೀನಾ ಎಂದು ನಮೂದಿಸಲಾಗಿದ್ದು, ಗಂಡನ ಹೆಸರನ್ನು ಪ್ರಮೋದ್ ಕುಮಾರ್ ಎಂದು ಬರೆಯಲಾಗಿದೆ.

(FIR Copy Photo)

ಹೀಗಾಗಿ ಟಿವಿ9 ಕನ್ನಡ ತನಿಖೆಯಿಂದ ವೈರಲ್ ಆಗುತ್ತಿರುವ ಹೇಳಿಕೆ ತಪ್ಪುದಾರಿಗೆಳೆಯುವಂತಿದೆ ಎಂಬುದು ಕಂಡುಬಂದಿದೆ. ಗಾಜಿಯಾಬಾದ್‌ನ ಕ್ರಾಸಿಂಗ್ ರಿಪಬ್ಲಿಕ್‌ನಲ್ಲಿ ಆಹಾರದಲ್ಲಿ ಮೂತ್ರವನ್ನು ಬೆರೆಸಿದ ಮಹಿಳೆಯ ಹೆಸರು ರೀನಾ. ಘಟನೆಯಲ್ಲಿ ಯಾವುದೇ ಕೋಮುವಾದಿ ಕೋನ ಇಲ್ಲ ಎಂದು ನಾವು ಖಚಿತವಾಗಿ ಹೇಳುತ್ತೇವೆ.

Published On - 6:28 pm, Fri, 18 October 24

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ