AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸಾವಿರಾರು ಮಿಸೇಲ್ ಮೂಲಕ ಭಾರತದಿಂದ ಪಾಕಿಸ್ತಾನ ಮೇಲೆ ದಾಳಿ?, ಸತ್ಯ ಇಲ್ಲಿ ತಿಳಿಯಿರಿ

Operation Sindoor Fact Check: ಟಿವಿ9 ಕನ್ನಡ ತನ್ನ ತನಿಖೆಯಲ್ಲಿ ಈ ಹೇಳಿಕೆ ಸುಳ್ಳು ಎಂದು ಕಂಡುಕೊಂಡಿದೆ. ವೈರಲ್ ಆಗುತ್ತಿರುವ ವಿಡಿಯೋ ನಿಜವಾದ ಕ್ಷಿಪಣಿ ದಾಳಿಯದ್ದಲ್ಲ, ಬದಲಾಗಿ ಇದು ಗೇಮಿಂಗ್ ಕ್ಲಿಪ್ ಆಗಿದೆ. ಗ್ರಾಫಿಕ್ಸ್ ತಂತ್ರಜ್ಞಾನಗಳನ್ನು ಬಳಸಿಕೊಂಡು ನೈಜ-ಪ್ರಪಂಚದ ಘಟನೆಗಳನ್ನು ಅನುಕರಿಸುವ ಮೂಲಕ ರಚಿಸಲಾದ ವಿಡಿಯೋ ಇದಾಗಿದೆ.

Fact Check: ಸಾವಿರಾರು ಮಿಸೇಲ್ ಮೂಲಕ ಭಾರತದಿಂದ ಪಾಕಿಸ್ತಾನ ಮೇಲೆ ದಾಳಿ?, ಸತ್ಯ ಇಲ್ಲಿ ತಿಳಿಯಿರಿ
India Pakistan War Fact Check
Vinay Bhat
|

Updated on:May 09, 2025 | 1:44 PM

Share

ಬೆಂಗಳೂರು (ಮೇ. 09): ಮೇ 8 ರಂದು ಪಾಕಿಸ್ತಾನ ಸೇನೆಯು ಭಾರತದ ಗಡಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಕ್ಷಿಪಣಿ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ (India Pakistan) ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ವಾಯು ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಭಾರತೀಯ ಸೇನೆಯು ಒಳಬರುವ ಎಲ್ಲಾ ಕ್ಷಿಪಣಿಗಳನ್ನು ಯಶಸ್ವಿಯಾಗಿ ತಡೆದು ನಾಶಪಡಿಸಿದೆ. ಅಲ್ಲದೆ ಭಾರತೀಯ ಸೇನೆಯು ವಾಯುಪ್ರದೇಶವನ್ನು ಉಲ್ಲಂಘಿಸಲು ಪ್ರಯತ್ನಿಸಿದ ಮೂರು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ. ಇದರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಒಂದೇ ಬಾರಿಗೆ ಅನೇಕ ಕ್ಷಿಪಣಿಗಳನ್ನು ರಿಲೀಸ್ ಮಾಡುತ್ತಿರುವುದನ್ನು ಕಾಣಬಹುದು. ಫೇಸ್​ಬುಕ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ‘‘ಪಾಕಿಸ್ತಾನದಿಂದ ಜಮ್ಮು ಮತ್ತು ಪಂಜಾಬ್ ಮೇಲೆ ಏಕಕಾಲಕ್ಕೆ 100 ಮಿಸೆಲ್ ನಿಂದ ದಾಳಿ. ಅದಕ್ಕೆ ಉತ್ತರವಾಗಿ ಸಾವಿರಾರು ಮಿಸೇಲ್ ಮೂಲಕ ಭಾರತದಿಂದ ದಾಳಿ ಆರಂಭ ಬೆಳಿಗ್ಗೆ ವೇಳೆಗೆ ಪಾಕಿಸ್ತಾನ ಏನಾಗುತ್ತೋ ಕಾದು ನೋಡಬೇಕು, ಹಿಂದೂಸ್ತಾನವನ್ನು ಕೆಣಕಿದ ಪಾಕಿಸ್ತಾನದ ನಾಶ ಕಟ್ಟಿಟ್ಟ ಬುತ್ತಿ’’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಭಾರತದ ಯುದ್ಧ ವಿಮಾನ ಪಾಕ್ ಮೇಲೆ ಬಾಂಬ್ ಹಾಕಿದೆಯೆಂದು ಸುಳ್ಳು ಹೇಳಿಕೆ ವೈರಲ್
Image
ಪಾಕ್​ನ F17 ಜೆಟ್ ಅನ್ನು ಹೊಡೆದುರುಳಿಸಿದ ಭಾರತೀಯ ಸೇನೆ?, ನಿಜಾಂಶ ಇಲ್ಲಿದೆ
Image
ಎಲ್‌ಒಸಿಯಲ್ಲಿ ಪಾಕಿಸ್ತಾನ ರಫೇಲ್ ಅನ್ನು ಹೊಡೆದುರುಳಿಸಿದ ಭಾರತೀಯ ವಾಯುಪಡೆ?
Image
ಲಾಹೋರ್ ವಿಮಾನ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬುದು ಸುಳ್ಳು

ಇದು ಭಾರತದಿಂದ ಪಾಕಿಸ್ತಾನ ಮೇಲೆ ದಾಳಿಯ ವಿಡಿಯೋ ಅಲ್ಲ:

ಟಿವಿ9 ಕನ್ನಡ ತನ್ನ ತನಿಖೆಯಲ್ಲಿ ಈ ಹೇಳಿಕೆ ಸುಳ್ಳು ಎಂದು ಕಂಡುಕೊಂಡಿದೆ. ವೈರಲ್ ಆಗುತ್ತಿರುವ ವಿಡಿಯೋ ನಿಜವಾದ ಕ್ಷಿಪಣಿ ದಾಳಿಯದ್ದಲ್ಲ, ಬದಲಾಗಿ ಇದು ಗೇಮಿಂಗ್ ಕ್ಲಿಪ್ ಆಗಿದೆ. ಗ್ರಾಫಿಕ್ಸ್ ತಂತ್ರಜ್ಞಾನಗಳನ್ನು ಬಳಸಿಕೊಂಡು ನೈಜ-ಪ್ರಪಂಚದ ಘಟನೆಗಳನ್ನು ಅನುಕರಿಸುವ ಮೂಲಕ ರಚಿಸಲಾದ ವಿಡಿಯೋ ಇದಾಗಿದೆ.

Fact Check: ಭಾರತದ ಯುದ್ಧ ವಿಮಾನ ಪಾಕಿಸ್ತಾನದ ಮೇಲೆ ಬಾಂಬ್ ಹಾಕಿದೆ ಎಂದು ಜಾರ್ಜಿಯಾದ ವಿಡಿಯೋ ವೈರಲ್

ನಿಜಾಂಶವನ್ನು ತಿಳಿಯಲು ನಾವು ವೈರಲ್ ವಿಡಿಯೋದ ಕೀ ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ, Compared Comparison ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಇದೇ ವಿಡಿಯೋದ ಪೂರ್ಣ ಆವೃತ್ತಿಯನ್ನು ಉತ್ತಮ ಕ್ವಾಲಿಟಿಯಲ್ಲಿ ಕಂಡುಕೊಂಡಿದ್ದೇವೆ.

ಈ ಚಾನಲ್‌ನಲ್ಲಿ ನಾವು ಅಂತಹ ಹಲವಾರು ವಿಡಿಯೋಗಳನ್ನು ಕಂಡುಕೊಂಡಿದ್ದೇವೆ. ಈ ಎಲ್ಲಾ ವಿಡಿಯೋಗಳು ಗೇಮಿಂಗ್ ವಿಡಿಯೋಗಳಾಗಿವೆ. ನಮ್ಮ ತನಿಖೆಯಿಂದ ವೈರಲ್ ವಿಡಿಯೋ ನಿಜವಾದದ್ದಲ್ಲ, ಬದಲಾಗಿ ಇದು ಗ್ರಾಫಿಕ್ಸ್ ಗೇಮಿಂಗ್ ದೃಶ್ಯಾವಳಿಯಾಗಿದೆ ಎಂದು ಸ್ಪಷ್ಟವಾಗಿ ತಿಳಿದುಬಂದಿದೆ.

ಭಾರತದಿಂದ ವಾಟರ್​ ಸ್ಟ್ರೈಕ್:

ಪಾಕಿಸ್ತಾನಕ್ಕೆ ಭಾರತ ಇದೀಗ ಸಲಾಲ್ ಹಾಗೂ ಬಾಗ್ಲಿಹಾರ್​ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಿದ್ದು, ಪ್ರವಾಹ ಭೀತಿ ಎದುರಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣವಿದೆ. ಮೇ 6-7ರ ರಾತ್ರಿ ಭಾರತ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿತ್ತು. ಭಾರತದ ವಾಯು ಸೇನೆ ಜೊತೆಗೆ ನೌಕಾಪಡೆಯು ಪಾಕಿಸ್ತಾನದ ವಿರುದ್ಧ ದಾಳಿಗೆ ಇಳಿದಿದೆ. ವಾಯು ಸೇನೆ ಹಾಗೂ ನೌಕಾಪಡೆಯು ಎರಡೂ ಜಂಟಿಯಾಗಿ ಅಟ್ಯಾಕ್ ಮಾಡುತ್ತಿವೆ. ವಿರೋಧಿ ರಾಷ್ಟ್ರದ ಪ್ರಮುಖ ನಗರಗಳಾದ ಇಸ್ಲಾಮಾಬಾದ್, ಬಂದರು ನಗರಿ ಕರಾಚಿ ಮೇಲೆ ಭಾರತ ಅಟ್ಯಾಕ್ ಮಾಡಿದೆ. ದಾಳಿ ಮುಂದಿರೆದಿದ್ದು ಪಾಕಿಸ್ತಾನದ ಮೇಲೆ ನಿರಂತರ ಕ್ಷಿಪಣಿ ದಾಳಿ ನಡೆಸಲಾಗುತ್ತಿದೆ.

ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Fri, 9 May 25

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ