Fact Check: ರತನ್ ಟಾಟಾ ಭಾರತೀಯ ಸೇನೆಗೆ 2500 ಬುಲೆಟ್ ಪ್ರೂಫ್ ಸ್ಕಾರ್ಪಿಯೋ ನೀಡಿರುವುದು ನಿಜವೇ?

ರತನ್ ಟಾಟಾ ಅವರು ಭಾರತೀಯ ಸೇನೆಗೆ 2500 ಬುಲೆಟ್ ಪ್ರೂಫ್ ಸ್ಕಾರ್ಪಿಯೋ ವಾಹನಗಳನ್ನು ನೀಡಿಲ್ಲ. ವೈರಲ್ ಚಿತ್ರಗಳು 2012 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಾಗಿವೆ. ಮಹೀಂದ್ರಾ ಈ ರಕ್ಷಕ್ ಪ್ಲಸ್ ವಾಹನಗಳನ್ನು 2012 ರಲ್ಲಿ ಡಿಫೆನ್ಸ್ ಎಕ್ಸ್‌ಪೋದಲ್ಲಿ ಪ್ರದರ್ಶಿಸಿತ್ತು.

Fact Check: ರತನ್ ಟಾಟಾ ಭಾರತೀಯ ಸೇನೆಗೆ 2500 ಬುಲೆಟ್ ಪ್ರೂಫ್ ಸ್ಕಾರ್ಪಿಯೋ ನೀಡಿರುವುದು ನಿಜವೇ?
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 11, 2024 | 12:40 PM

ರತನ್ ಟಾಟಾ ಅವರ ಸಾವಿನ ನಂತರ, ಕೆಲವು ವಾಹನಗಳ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿವೆ. ಕೆಲ ಸಮಯದ ಹಿಂದೆ ರತನ್ ಟಾಟಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಗೆ 2500 ಬುಲೆಟ್ ಪ್ರೂಫ್ ಸ್ಕಾರ್ಪಿಯೋಗಳನ್ನು ಕೊಡುಗೆಯಾಗಿ ನೀಡಿದ್ದರು ಎಂಬ ಹೇಳಿಕೆಯೊಂದಿಗೆ ಈ ಫೋಟೋಗಳು ಹರಿದಾಡುತ್ತಿವೆ. ಹಾಗಾದರೆ ನಿಜಕ್ಕೂ ರತನ್ ಟಾಟಾ ಅವರು ಭಾರತೀಯ ಸೇನೆಗೆ 2500 ಬುಲೆಟ್ ಪ್ರೂಫ್ ಸ್ಕಾರ್ಪಿಯೋ ನೀಡಿದ್ದಾರೆಯೇ?. ಈ ಕುರಿತ ನಿಜಾಂಶ ಇಲ್ಲಿದೆ ಓದಿ.

ವೈರಲ್ ಆಗುತ್ತಿರುವುದು ಏನು?

ವೈರಲ್ ಚಿತ್ರವನ್ನು ಹಂಚಿಕೊಳ್ಳುವಾಗ, ಫೇಸ್‌ಬುಕ್ ಬಳಕೆದಾರರು “ದೇಶದ ಅತಿದೊಡ್ಡ ಕೈಗಾರಿಕೋದ್ಯಮಿ ಮತ್ತು ಗೌರವಾನ್ವಿತ ರತನ್ ಟಾಟಾ ಜಿ ಅವರು 2500 ಬುಲೆಟ್ ಪ್ರೂಫ್ ಸ್ಕಾರ್ಪಿಯೋ ಜೀಪ್‌ಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಾರತೀಯ ಸೇನೆಗೆ ನೀಡಿದ್ದಾರೆ. ದೇಶದ ಸೇನೆಗೆ ಅಭಿನಂದನೆಗಳು. ದೇಶದ ನಿಜವಾದ ಮಗ ಮತ್ತು ಮಹಾನ್ ವ್ಯಕ್ತಿ ರತನ್ ಟಾಟಾ ಜಿ ಅವರಿಗೆ ಧನ್ಯವಾದಗಳು’’ ಎಂದು ಬರೆದುಕೊಂಡಿದ್ದಾರೆ.

Fact Check:

ವೈರಲ್ ಪೋಸ್ಟ್‌ನ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ನಾವು ಈ ಹೇಳಿಕೆಯನ್ನು ಸರಿಯಾಗಿ ಪರಿಶೀಲಿಸಿದ್ದೇವೆ. ಸಂಬಂಧಿತ ಕೀವರ್ಡ್‌ಗಳ ಸಹಾಯದಿಂದ ನಾವು ಗೂಗಲ್​ನಲ್ಲಿ ಮೊದಲು ಹುಡುಕಿದೆವು. ರತನ್ ಟಾಟಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಗೆ 2500 ಬುಲೆಟ್ ಪ್ರೂಫ್ ಸ್ಕಾರ್ಪಿಯೋಗಳನ್ನು ಕೊಡುಗೆಯಾಗಿ ನೀಡಿದ್ದಾರೆ ಎಂಬ ಹೇಳಿಕೆಯನ್ನು ಬೆಂಬಲಿಸುವ ಯಾವುದೇ ವಿಶ್ವಾಸಾರ್ಹ ಸುದ್ದಿ ನಮಗೆ ಸಿಕ್ಕಿಲ್ಲ. ರತನ್ ಟಾಟಾ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸಹ ಪರಿಶೀಲಿಸಿದ್ದೇವೆ. ಆದರೆ ಅಲ್ಲಿಯೂ ಯಾವುದೇ ಮಾಹಿತಿ ಸಿಕ್ಕಿಲ್ಲ.

ವೈರಲ್ ಚಿತ್ರದ ಸತ್ಯಾಸತ್ಯತೆ ತಿಳಿಯಲು, ನಾವು ಗೂಗಲ್ ರಿವರ್ಸ್ ಇಮೇಜ್ ಮೂಲಕ ಫೋಟೋವನ್ನು ಹುಡುಕಿದೆವು. ಆಗ ರಾಜೇಶ್ ಬನೇಡಿಯಾ ಹೆಸರಿನ X ಖಾತೆಯಲ್ಲಿ ವೈರಲ್ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ. ಈ ಫೋಟೋವನ್ನು 28 ಜುಲೈ 2016 ರಂದು ಹಂಚಿಕೊಳ್ಳಲಾಗಿದೆ.

ಹಾಗೆಯೆ Zigwheel ಮತ್ತು Indium ಆಟೋ ಬ್ಲಾಗ್ ಹೆಸರಿನ ವೆಬ್‌ಸೈಟ್‌ಗಳ ವರದಿಗಳಲ್ಲಿ ವೈರಲ್ ಫೋಟೋಗಳನ್ನು ನಾವು ಕಂಡುಕೊಂಡಿದ್ದೇವೆ. ಈ ಸುದ್ದಿ ಏಪ್ರಿಲ್ 2012 ರಲ್ಲಿ ಪ್ರಕಟಿಸಲಾಗಿದೆ. ವರದಿಗಳ ಪ್ರಕಾರ, 2012 ರ ಡಿಫೆನ್ಸ್ ಎಕ್ಸ್‌ಪೋದಲ್ಲಿ ಮಹೀಂದ್ರಾ ಈ ರಕ್ಷಕ್ ಪ್ಲಸ್ ವಾಹನಗಳನ್ನು ಪ್ರದರ್ಶಿಸಿತ್ತು. ಹಾಗೆಯೆ ಟೈಮ್ಸ್ ನೌ ನ ಅಧಿಕೃತ ಯೂಟ್ಯೂಬ್​ ಚಾನೆಲ್‌ನಲ್ಲಿ ವೈರಲ್ ಕ್ಲೈಮ್‌ಗೆ ಸಂಬಂಧಿಸಿದ ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ. ಈ ವೀಡಿಯೊವನ್ನು 9 ಏಪ್ರಿಲ್ 2012 ರಂದು ಅಪ್‌ಲೋಡ್ ಮಾಡಲಾಗಿದೆ. ಇದರಲ್ಲಿ ವೈರಲ್ ಚಿತ್ರದಲ್ಲಿರುವ ವಾಹನವನ್ನು ಕಾಣಬಹುದು. ವರದಿಯ ಪ್ರಕಾರ, ಮಹೀಂದ್ರಾ ಡಿಫೆನ್ಸ್ ಎಕ್ಸ್‌ಪೋದಲ್ಲಿ ರಕ್ಷಕ್ ಪ್ಲಸ್ ವಾಹನವನ್ನು ಪ್ರದರ್ಶಿಸಿತ್ತು.

ಹೀಗಾಗಿ ರತನ್ ಟಾಟಾ ಹೆಸರಿನಲ್ಲಿ ಭಾರತೀಯ ಸೇನೆಗೆ 2500 ಬುಲೆಟ್ ಪ್ರೂಫ್ ಸ್ಕಾರ್ಪಿಯೋ ಜೀಪ್‌ಗಳನ್ನು ಕೊಡುಗೆಯಾಗಿ ನೀಡಿದ ವೈರಲ್ ಫೋಟೋ ಸುಳ್ಳು ಎಂದು ಟಿವಿ9 ಕನ್ನಡ ತನ್ನ ತನಿಖೆಯಲ್ಲಿ ಕಂಡುಹಿಡಿದಿದೆ. ರತನ್ ಟಾಟಾ ಅವರು ಭಾರತೀಯ ಸೇನೆಗೆ 2500 ಬುಲೆಟ್ ಪ್ರೂಫ್ ಸ್ಕಾರ್ಪಿಯೋ ವಾಹನಗಳನ್ನು ನೀಡಿಲ್ಲ. ವೈರಲ್ ಫೋಟೋಗಳು 2012 ರಿಂದ ಸಾಮಾಜಿಕ ಮಾಧ್ಯಮದಲ್ಲಿದೆ. ಮಹೀಂದ್ರಾ ಈ ರಕ್ಷಕ್ ಪ್ಲಸ್ ವಾಹನಗಳನ್ನು 2012 ರಲ್ಲಿ ಡಿಫೆನ್ಸ್ ಎಕ್ಸ್‌ಪೋದಲ್ಲಿ ಪ್ರದರ್ಶಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು