Fact Check: ಶಾರುಖ್ ಖಾನ್-ಸಲ್ಮಾನ್ ಖಾನ್ ಮಹಾಕುಂಭದಲ್ಲಿ ಸ್ನಾನ ಮಾಡಿದ್ದು ನಿಜವೇ?
ಬಾಲಿವುಡ್ನ ಸ್ಟಾರ್ ನಟರಾದ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾರುಖ್ ಮತ್ತು ಸಲ್ಮಾನ್ ಮಹಾಕುಂಭದಲ್ಲಿ ಸ್ನಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಶಾರುಖ್ ಹಾಗೂ ಸಲ್ಮಾನ್ ನೀರಿನಲ್ಲಿ ಮುಳುಗಿ ಏಳುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ 144 ವರ್ಷಗಳ ನಂತರ ಮಹಾಕುಂಭ ಮೇಳೆ ನಡೆಯುತ್ತಿದೆ. ಈ ಬಾರಿ ನಡೆಯುತ್ತಿರುವ ಕುಂಭಮೇಳದಲ್ಲಿ ಸುಮಾರು 45 ಕೋಟಿಗೂ ಅಧಿಕ ಮಂದಿ ಪುಣ್ಯ ಸ್ನಾನ ಮಾಡುವ ನಿರೀಕ್ಷೆ ಇದೆ. 44 ದಿನಗಳ ಕಾಲ ನಡೆಯುವ ಮಹಾ ಕುಂಭಮೇಳ 2025 ಜನವರಿ 13 ರಂದು ಮಕರ ಸಂಕ್ರಾಂತಿಯಿಂದ ಪ್ರಾರಂಭವಾಗಿ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ಮುಕ್ತಾಯಗೊಳ್ಳುತ್ತದೆ. ಈ ಬಾರಿಯ ಮಹಾಕುಂಭ ಮೇಳಕ್ಕೆ ಸಂಬಂಧಿಸಿದಂತೆ ಅನೇಕ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.
ಇದೀಗ ಬಾಲಿವುಡ್ನ ಸ್ಟಾರ್ ನಟರಾದ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾರುಖ್ ಮತ್ತು ಸಲ್ಮಾನ್ ಮಹಾಕುಂಭದಲ್ಲಿ ಸ್ನಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಕ್ಸ್ ಬಳಕೆದಾರರೊಬ್ಬರು ಶಾರುಖ್ ಹಾಗೂ ಸಲ್ಮಾನ್ ನೀರಿನಲ್ಲಿ ಮುಳುಗಿ ಏಳುವ ಫೋಟೋವನ್ನು ಹಂಚಿಕೊಂಡು, ‘‘ಮಹಾಮಂತ್ರ- ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ ಹರೇ ರಾಮ ಹರೇ ರಾಮ ರಾಮ ರಾಮ ಹರೇ ಹರೇ! ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಅವರ ಕುಂಭ ಸ್ನಾನದ ಸುಂದರ ನೋಟ’’ ಎಂದು ಬರೆದುಕೊಂಡಿದ್ದಾರೆ.
कलयुग में महामंत्र ही काफी है ! महामंत्र- हरे कृष्ण हरे कृष्ण कृष्ण कृष्ण हरे हरे हरे राम हरे राम राम राम हरे हरे !
सलमान खान और शाहरुख खान के कुंभ स्नान का सुंदर दृश्य। pic.twitter.com/5zSftJDLws
— Jeetendra Sharan (@jeetendrasaran) January 21, 2025
ಮತ್ತೊಬ್ಬ ಬಳಕೆದಾರ ವೈರಲ್ ಚಿತ್ರವನ್ನು ಹಂಚಿಕೊಂಡು, ಸಲ್ಮಾನ್ ಖಾನ್-ಶಾರುಖ್ ಖಾನ್ ಕುಂಭದಲ್ಲಿ ಸ್ನಾನ ಮಾಡಲು ಒಟ್ಟಿಗೆ ಬಂದಿದ್ದಾರೆ ಎಂದು ಬರೆದುಕೊಂಡಿದ್ದಾರೆ.
Fact Check: ಮಹಾಕುಂಭ ಮೇಳಕ್ಕೆ ಜಾನ್ ಸೀನಾ ಬಂದು ಪವಿತ್ರ ಸ್ನಾನ ಮಾಡಿದ್ದು ನಿಜವೇ?
Fact Check:
ಈ ಪೋಸ್ಟ್ನ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಇದು ಸಂಪೂರ್ಣ ಸುಳ್ಳು ಸುದ್ದಿ ಎಂಬುದು ಕಂಡುಬಂದಿದೆ. ಈ ವೈರಲ್ ಚಿತ್ರವನ್ನು ತನಿಖೆ ಮಾಡಲು ಮೊದಲು ನಾವು ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ಕುಂಭ ಸ್ನಾನಕ್ಕೆ ಸಂಬಂಧಿಸಿದ ಮಾಧ್ಯಮ ವರದಿ ಕುರಿತು ತನಿಖೆ ಮಾಡಿದ್ದೇವೆ. ಆದರೆ ಈ ಬಗ್ಗೆ ಯಾವುದೇ ಮಾಧ್ಯಮ ವರದಿ ನಮಗೆ ಸಿಕ್ಕಿಲ್ಲ.
ಹೀಗಾಗಿ ನಾವು ಈ ಫೋಟೋವನ್ನು ಸೂಕ್ಷ್ಮವಾಗಿ ಗಮನಿಸಿದ್ದೇವೆ. ಇದರಲ್ಲಿ ಶಾರುಖ್ ಅವರ ಕೊರಳಿನ ಭಾಗ ವಿಚಿತ್ರವಾಗಿರುಂತೆ ಕಂಡುಬಂತು. ಹೀಗಾಗಿ ನಮಗೆ ಇದು ಕೃತಕ ಬುದ್ದಿಮತ್ತೆ ಸಹಾಯದಿಂದ ರಚಿಸಿರಬಹುದು ಎಂಬ ಅನುಮಾನ ಮೂಡಿತು. ಇದನ್ನು ಕಂಡುಹಿಡಿಯಲು AI ಪತ್ತೆ ಸಾಧನ ಹೈವ್ ಮಾಡರೇಶನ್‌ನೊಂದಿಗೆ ವೈರಲ್ ಚಿತ್ರವನ್ನು ಪರಿಶೀಲಿಸಿದ್ದೇವೆ. ಈ ಸಮಯದಲ್ಲಿ ನಾವು ಶಾರುಖ್- ಸಲ್ಮಾನ್ ಅವರ ಈ ಫೋಟೋ ಶೇ. 99.9 ರಷ್ಟು AI ನಿಂದ ರಚಿಸಲಾಗಿದೆ ಎಂದು ಕಂಡುಕೊಂಡಿದ್ದೇವೆ.
ಹೀಗಾಗಿ, ಕುಂಭದಲ್ಲಿ ಶಾರುಖ್-ಸಲ್ಮಾನ್ ಖಾನ್ ಸ್ನಾನ ಮಾಡುತ್ತಿರುವ ವೈರಲ್ ಚಿತ್ರ ನಕಲಿ ಎಂಬುದು ಟಿವಿ9 ಕನ್ನಡ ವಾಸ್ತವ ಪರಿಶೀಲನೆಯಿಂದ ಸ್ಪಷ್ಟವಾಗಿದೆ. ಈ ಚಿತ್ರವನ್ನು ಕೃತಕ ಬುದ್ದಿಮತ್ತೆ (ಎಐ) ಸಹಾಯದಿಂದ ರಚಿಸಲಾಗಿದೆ.
ಬಸಂತ ಪಂಚಮಿ ಪ್ರಯುಕ್ತ ಬೆಳ್ಳಂಬೆಳಗ್ಗೆ 62 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಅಮೃತ ಸ್ನಾನ:
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಬಸಂತ ಪಂಚಮಿಯ ಅಮೃತ ಸ್ನಾನದ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಇಂದು ಮುಂಜಾನೆ 8 ಗಂಟೆಯೊಳಗೆ 62 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಉತ್ತರ ಪ್ರದೇಶದ ಮಾಹಿತಿ ಇಲಾಖೆಯ ಪ್ರಕಾರ, ಜನವರಿ 13ರಂದು ಮಹಾ ಕುಂಭಮೇಳ ಪ್ರಾರಂಭವಾದಾಗಿನಿಂದ ಇಂದಿನವರೆಗೆ 349.7 ಮಿಲಿಯನ್‌ಗಿಂತಲೂ ಹೆಚ್ಚು (34.97 ಕೋಟಿ) ಭಕ್ತರು ಪವಿತ್ರ ಸ್ನಾನದಲ್ಲಿ ಭಾಗವಹಿಸಿದ್ದಾರೆ. 2025ರ ಮಹಾ ಕುಂಭ ಮೇಳದ ಕೊನೆಯ ಅಮೃತ ಸ್ನಾನ ಬಸಂತ್ ಪಂಚಮಿಯಾದ ಇಂದು ನಡೆಯುತ್ತಿದೆ.
ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ