Fact Check: ರಾಮ ಮಂದಿರ ಕೆಡವಿ ಮಸೀದಿ ನಿರ್ಮಾಣದ ವಿಡಿಯೋವನ್ನು ವಯನಾಡ್ ಕಾಂಗ್ರೆಸ್ ಹಂಚಿಕೊಂಡಿದ್ದು ನಿಜವೇ?

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ವಯನಾಡ್ ಕಾಂಗ್ರೆಸ್ ಈ ರೀತಿಯ ಯಾವುದೇ ವಿಡಿಯೋ ಹಂಚಿಕೊಂಡಿಲ್ಲ ಎಂಬುದು ತಿಳಿದುಬಂದಿದೆ. 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಯನಾಡ್ ಕಾಂಗ್ರೆಸ್ ಈ ವಿಡಿಯೋ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ.

Fact Check: ರಾಮ ಮಂದಿರ ಕೆಡವಿ ಮಸೀದಿ ನಿರ್ಮಾಣದ ವಿಡಿಯೋವನ್ನು ವಯನಾಡ್ ಕಾಂಗ್ರೆಸ್ ಹಂಚಿಕೊಂಡಿದ್ದು ನಿಜವೇ?
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 13, 2024 | 2:00 PM

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಲಿಂಕ್ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದ ಆರಂಭದಲ್ಲಿ ರಾಮಮಂದಿರವನ್ನು ತೋರಿಸಲಾಗುತ್ತದೆ ನಂತರ ಅದರ ಸ್ಥಳದಲ್ಲಿ ಮಸೀದಿ ಕಟ್ಟಿರುವುದು ಇದೆ. ವಿಡಿಯೋದ ಕೊನೆಯಲ್ಲಿ, ವಯನಾಡ್ ಕಾಂಗ್ರೆಸ್ ಸಮಿತಿಯು ರಾಹುಲ್ ಗಾಂಧಿಗೆ ಮತ ನೀಡುವಂತೆ ಮನವಿ ಮಾಡಿದೆ ಎಂದು ಬರೆಯಲಾಗಿದೆ. ಕೆಲ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡು ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಪರವಾಗಿ ಮತ ಚಲಾಯಿಸಲು ಕಾಂಗ್ರೆಸ್ ರಾಮಮಂದಿರದ ಬದಲಿಗೆ ಮಸೀದಿಯ ವಿಡಿಯೋವನ್ನು ಮಾಡಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಫೇಸ್‌ಬುಕ್ ಬಳಕೆದಾರ ಅವನೀಶ್ ಕುಮಾರ್ ಎಂಬವರು ಈ ವಿಡಿಯೋವನ್ನು ಹಂಚಿಕೊಂಡು, ‘‘ರಾಹುಲ್ ಗಾಂಧಿಗೆ ಮತ ಹಾಕಲು ಕಾಂಗ್ರೆಸ್ ತನ್ನ ವಯನಾಡ್ ಲೋಕಸಭಾ ಸ್ಥಾನಕ್ಕಾಗಿ ಮಾಡಿರುವ ಜಾಹೀರಾತನ್ನು ನೋಡಿ ನಾಚಿಕೆ, ನಾಚಿಕೆ, ನಾಚಿಕೆಗೇಡು, ಕಾಂಗ್ರೆಸ್, ಜಾತ್ಯತೀತ ಹಿಂದೂಗಳೇ, ಈಗಲಾದರೂ ನಿಮ್ಮ ಕಣ್ಣು ತೆರೆಯಿರಿ.’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ವಯನಾಡ್ ಕಾಂಗ್ರೆಸ್ ಈ ರೀತಿಯ ಯಾವುದೇ ವಿಡಿಯೋ ಹಂಚಿಕೊಂಡಿಲ್ಲ ಎಂಬುದು ತಿಳಿದುಬಂದಿದೆ. 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಯನಾಡ್ ಕಾಂಗ್ರೆಸ್ ಈ ವಿಡಿಯೋ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ. ಎರ್ನಾಕುಲಂ ಗ್ರಾಮಾಂತರ ಸೈಬರ್ ಪೊಲೀಸರು ವಿಡಿಯೋವನ್ನು ಶೇರ್ ಮಾಡಿದ್ದಕ್ಕಾಗಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವೈರಲ್ ಕ್ಲೈಮ್ ಅನ್ನು ಪರಿಶೀಲಿಸಲು ನಾವು ಗೂಗಲ್​ನಲ್ಲಿ ಕೀವರ್ಡ್‌ಗಳನ್ನು ಬಳಸಿಕೊಂಡು ಹುಡುಕಿದಾಗ, ಏಪ್ರಿಲ್ 26, 2024 ರಂದು ANI ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯನ್ನು ನಾವು ಕಂಡುಕೊಂಡಿದ್ದೇವೆ. ಪಕ್ಷದ ಘಟಕದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ನಕಲಿ ವೀಡಿಯೋ’ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಯನಾಡ್ ಜಿಲ್ಲಾ ಸಮಿತಿಯು ಪೊಲೀಸರಿಗೆ ದೂರು ನೀಡಿದೆ ಎಂದು ಬರೆಯಲಾಗಿದೆ. ದೇಶದ ಧಾರ್ಮಿಕ ಸಾಮರಸ್ಯವನ್ನು ಹಾಳು ಮಾಡುವ ಉದ್ದೇಶದಿಂದ ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹೆಸರಿನಲ್ಲಿ ನಕಲಿ ವಿಡಿಯೋ ಮಾಡಿ ಶೇರ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರಿನಲ್ಲಿ, ವಿಡಿಯೋ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಅದನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಮನವಿಯನ್ನೂ ಮಾಡಲಾಗಿದೆ.

ಇದಕ್ಕೆ ಸಂಬಂಧ ಪಟ್ಟ ಸುದ್ದಿಯನ್ನು ನೀವು ಇಲ್ಲಿ ಓದಬಹುದು.

Congress lodges police complaint against ‘fake video’ of Rahul Gandhi circulated on social media

ಹಾಗೆಯೆ ಖಾಸಗಿ ವೆಬ್​ಸೈಟ್ ಒಂದರ ಪ್ರಕಾರ, ಮುವಾಟ್ಟುಪುಳ ಶಾಸಕ ಮ್ಯಾಥ್ಯೂ ಕುಜಲನಾಡನ್ ಅವರ ದೂರಿನ ಮೇರೆಗೆ ಎರ್ನಾಕುಲಂ ಗ್ರಾಮಾಂತರ ಸೈಬರ್ ಪೊಲೀಸರು ರಾಜೇಶ್ ಜಿ ನಾಯರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಬರೆಯಲಾಗಿದೆ. ಈ ವಿಡಿಯೋವನ್ನು ವಾಟ್ಸಾಪ್ ಗ್ರೂಪ್‌ನಲ್ಲಿ ಶೇರ್ ಮಾಡಿದ್ದ ಎನ್ನಲಾಗಿದೆ. 30 ಸೆಕೆಂಡುಗಳ ವಿಡಿಯೋ ಅಯೋಧ್ಯೆಯ ರಾಮ ಮಂದಿರವನ್ನು ಚಿತ್ರಿಸುವ ಹಾಡಿನೊಂದಿಗೆ ಪ್ರಾರಂಭವಾಗುತ್ತದೆ. ನಂತರ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ತೋರಿಸಲಾಗಿದೆ.

ಈ ಕುರಿತು ಕೇರಳ ಕಾಂಗ್ರೆಸ್ ಉಪಾಧ್ಯಕ್ಷ ವಿಟಿ ಬಲರಾಮ್ ಅವರು, ಈ ವಿಡಿಯೋವನ್ನು ವೈರಲ್ ಮಾಡಿರುವ ವಯನಾಡ್ ಕಾಂಗ್ರೆಸ್ ಆರೋಪ ಅಸಂಬದ್ಧವಾಗಿದೆ. ಇದು ವಿರೋಧ ಪಕ್ಷದ ಕೆಲಸವಾಗಬೇಕು. ನಾವು ಸಾಮಾನ್ಯವಾಗಿ ವಯನಾಡ್ ಕಾಂಗ್ರೆಸ್ ಸಮಿತಿಯನ್ನು ಬಳಸುವುದಿಲ್ಲ. ನಾವು ಇಲ್ಲಿ ಯುಡಿಎಫ್ ಹೆಸರಿನಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ, ಬರೀ ಕಾಂಗ್ರೆಸ್ ಹೆಸರಿನಲ್ಲಿ ಅಲ್ಲ. ನಾವು ಪಕ್ಷದ ಹೆಸರನ್ನು ಬಳಸಿದರೆ ನಾವು ‘ಜಿಲ್ಲಾ ಕಾಂಗ್ರೆಸ್ ಸಮಿತಿ ವಯನಾಡ್’ ಎಂದು ಬಳಸುತ್ತೇವೆ ಎಂದು ಹೇಳಿದ್ದಾರೆ ಎಂದು ವರದಿಯಲ್ಲಿದೆ.

ಹೀಗಾಗಿ ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿಯು 2024 ರ ಏಪ್ರಿಲ್‌ನಲ್ಲಿ ರಾಮ ಮಂದಿರವನ್ನು ಕೆಡವಿ ಮಸೀದಿ ನಿರ್ಮಿಸುವ ವಿಡಿಯೋದ ಕುರಿತು ಪೊಲೀಸರಿಗೆ ದೂರು ನೀಡಿದ್ದು, ವಿಡಿಯೋ ತಯಾರಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಆದರೆ, ಈಗ ಈ ವಿಡಿಯೋ ಪುನಃ ಜಿಲ್ಲಾ ವಯನಾಡ್ ಕಾಂಗ್ರೆಸ್ ಸಮಿತಿ ಹೆಸರಿನಲ್ಲಿ ಶೇರ್ ಮಾಡಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ
ಪಾರ್ಟ್ನರ್ ಚೈತ್ರಾ ವಿರುದ್ಧ ಉರಿದು ಬಿದ್ದ ತ್ರಿವಿಕ್ರಮ್, ಮಾಡಿದ್ದಾರೂ ಏನು?
ಪಾರ್ಟ್ನರ್ ಚೈತ್ರಾ ವಿರುದ್ಧ ಉರಿದು ಬಿದ್ದ ತ್ರಿವಿಕ್ರಮ್, ಮಾಡಿದ್ದಾರೂ ಏನು?