ರಾಜಸ್ಥಾನ ಸಿಎಂ ಗೆಹ್ಲೋಟ್ ಚುನಾವಣಾ ರ‍್ಯಾಲಿಯಲ್ಲಿ ಮೋದಿ ಪರ ಘೋಷಣೆ; ವೈರಲ್ ವಿಡಿಯೊದ ಫ್ಯಾಕ್ಟ್ ಚೆಕ್

Fact Check: ರಾಜಸ್ಥಾನದ ಸಾರ್ವಜನಿಕರು ಮೋದಿ-ಮೋದಿ ಘೋಷಣೆಗಳೊಂದಿಗೆ ಸಿಎಂ ಗೆಹ್ಲೋಟ್ ಅವರನ್ನು ಸ್ವಾಗತಿಸಿದರು ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್ ಆಗಿದೆ. ಗೆಹ್ಲೋಟ್ ಭಾಷಣದ ವೇಳೆ ಮೋದಿ ಮೋದಿ ಎಂದು ಜನರು ಘೋಷಣೆ ಕೂಗಿದ್ದಾರೆಯೇ? ವೈರಲ್ ವಿಡಿಯೊದ ಸತ್ಯಾಸತ್ಯತೆ ಇಲ್ಲಿದೆ.

ರಾಜಸ್ಥಾನ ಸಿಎಂ ಗೆಹ್ಲೋಟ್ ಚುನಾವಣಾ ರ‍್ಯಾಲಿಯಲ್ಲಿ ಮೋದಿ ಪರ ಘೋಷಣೆ; ವೈರಲ್ ವಿಡಿಯೊದ ಫ್ಯಾಕ್ಟ್ ಚೆಕ್
ಅಶೋಕ್ ಗೆಹ್ಲೋಟ್
Follow us
ರಶ್ಮಿ ಕಲ್ಲಕಟ್ಟ
|

Updated on:Nov 25, 2023 | 9:33 PM

ದೆಹಲಿ ನವೆಂಬರ್ 25: ರಾಜಸ್ಥಾನ ವಿಧಾನಸಭಾ ಚುನಾವಣೆಗಾಗಿ (Rajasthan Assembly Election) ಕಾಂಗ್ರೆಸ್ ಮತ್ತು ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ(BJP) ಅಬ್ಬರದ ಪ್ರಚಾರ ನಡೆಸಿತ್ತು. ಈ ವೇಳೆ ಕಾಂಗ್ರೆಸ್ ರ‍್ಯಾಲಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಪರವಾಗಿ ಘೋಷಣೆಗಳನ್ನು ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅವರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರರಾದ ರಿಷಿ ಬಾಗ್ರೀ “ರಾಜಸ್ಥಾನದ ಸಾರ್ವಜನಿಕರು ಮೋದಿ-ಮೋದಿ ಘೋಷಣೆಗಳೊಂದಿಗೆ ಸಿಎಂ ಗೆಹ್ಲೋಟ್ ಅವರನ್ನು ಸ್ವಾಗತಿಸಿದರು” ಎಂಬ ಶೀರ್ಷಿಕೆಯೊಂದಿಗೆ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ಸಿಎಂ ಗೆಹ್ಲೋಟ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ಜನಸಮೂಹವು ‘ಮೋದಿ ಮೋದಿ’ ಎಂದು ಘೋಷಣೆ ಮಾಡುತ್ತಿರುವುದು ಕೇಳಿಸುತ್ತದೆ. ಅನೇಕ ಬಳಕೆದಾರರು ಫೇಸ್‌ಬುಕ್‌ನಲ್ಲಿ ಇದೇ ವಿಡಿಯೊ ಹಂಚಿಕೊಂಡು ಗೆಹ್ಲೋಟ್ ಚುನಾವಣಾ ರ‍್ಯಾಲಿಯಲ್ಲಿ ಮೊಳಗಿದ ಮೋದಿ ಪರ ಘೋಷಣೆ ಎಂಬ ಶೀರ್ಷಿಕೆ ನೀಡಿದ್ದಾರೆ.

ಫ್ಯಾಕ್ಟ್ ಚೆಕ್

ಅಂದಹಾಗೆ ಈ ವೈರಲ್ ವಿಡಿಯೊದ ಫ್ಯಾಕ್ಟ್ ಚೆಕ್ ಮಾಡಿದ ಎಬಿಪಿ ಲೈವ್, ಈ ವಿಡಿಯೊ ಎಡಿಟ್ ಮಾಡಿದ್ದು. ಗೆಹ್ಲೋಟ್ ಭಾಷಣ ವೇಳೆ ಮೋದಿ ಪರ ಘೋಷಣೆ ಕೂಗಲಾಗಿಲ್ಲ ಎಂದಿದೆ. ವೈರಲ್ ವಿಡಿಯೊದ ಕೀಫ್ರೇಮ್ ತೆಗೆದು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾದ ವಿಡಿಯೊ ತುಣುಕು ನವೆಂಬರ್ 22 ರಂದು ಗೆಹ್ಲೋಟ್ ಮಾಡಿದ ಭಾಷಣದ್ದು ಎಂಬುದು ಗೊತ್ತಾಯಿತು. ಅಶೋಕ್ ಗೆಹ್ಲೋಟ್ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅವರ ಭಾಷಣದ ದೀರ್ಘ ಆವೃತ್ತಿ ಇದೆ. ವಿಡಿಯೊ ಶೀರ್ಷಿಕೆ ಮತ್ತು ವಿವರಣೆಯ ಪ್ರಕಾರ, ರಾಜಸ್ಥಾನದ ಟೋಂಕ್ ಜಿಲ್ಲೆಯ ಮಾಲ್ಪುರದಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಗೆಹ್ಲೋಟ್ ಮಾತನಾಡುತ್ತಿದ್ದರು.

ತೋಡರೈಸಿಂಗ್-ಮಲ್ಪುರದ ಕಾಂಗ್ರೆಸ್ ಅಭ್ಯರ್ಥಿ ಘಾಸಿಲಾಲ್ ಚೌಧರಿ ಅವರನ್ನು ಬೆಂಬಲಿಸಲು ಗೆಹ್ಲೋಟ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಜಾನುವಾರು ಸಾಕಣೆದಾರರ ಮೇಲೆ ಕಾಂಗ್ರೆಸ್‌ನ ಖಾತರಿಗಳು, ಗೃಹ ಲಕ್ಷ್ಮಿ ಯೋಜನೆ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಕಡಿತದ ಬಗ್ಗೆ ಮುಖ್ಯಮಂತ್ರಿ ಮಾತನಾಡಿದರು. ರ್ಯಾಲಿಯಲ್ಲಿ ರಾಜ್ಯಸಭಾ ಸಂಸದ ದೀಪೇಂದ್ರ ಸಿಂಗ್ ಹೂಡಾ ಕೂಡ ಉಪಸ್ಥಿತರಿದ್ದರು. 2:15 ಟೈಮ್‌ಸ್ಟ್ಯಾಂಪ್ ನಲ್ಲಿ ವೈರಲ್ ಕ್ಲಿಪ್‌ನ ದೃಶ್ಯವನ್ನು ಕಾಣಬಹುದು ಇಲ್ಲಿ, ಪ್ರತಿ ಕುಟುಂಬದ ಮಹಿಳೆಗೆ ವಾರ್ಷಿಕ ₹ 10,000 ನೀಡುವ ಕಾಂಗ್ರೆಸ್‌ನ ಭರವಸೆಯ ಬಗ್ಗೆ ಗೆಹ್ಲೋಟ್ ಮಾತನಾಡುತ್ತಿದ್ದಾರೆ. ವೇದಿಕೆಯಲ್ಲಿ ಅವರ ಪಕ್ಕದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘಾಸಿಲಾಲ್ ಚೌಧರಿ ನಿಂತಿದ್ದಾರೆ. ಆದರೆ ವಿಡಿಯೊದಲ್ಲಿ ಎಲ್ಲಿಯೂ ಮೋದಿ ಪರ ಘೋಷಣೆ ಕೇಳಿಲ್ಲ.

ಗೆಹ್ಲೋಟ್ ಮಾತನಾಡುತ್ತಿದ್ದಂತೆ ಕೆಲವರು (ಫ್ರೇಮ್‌ನಲ್ಲಿ ಕಾಣಿಸದ) ಬಹುಶಃ ಕಿರುಚುತ್ತಿದ್ದರು ಎಂದು ವಿಡಿಯೊ ತೋರಿಸುತ್ತದೆ. ಕೂಗಾಟದಿಂದ ವಿಚಲಿತರಾದ ಗೆಹ್ಲೋಟ್ “ಅವರು ಯಾರು “ನೀವು ಅವನ ಬೆಂಬಲಕ್ಕೆ ಬಂದಿದ್ದೀರಾ ಅಥವಾ ಇಲ್ಲವೇ? ಎಂದು ಕೇಳುತ್ತಾ ಅವರಿಗೂ ಕುಳಿತುಕೊಳ್ಳುವಂತೆ ಸೂಚಿಸುತ್ತಾಕ. ಅವನ ಪಕ್ಕದಲ್ಲಿ, ಚೌಧರಿ ಕೂಡ ತನ್ನ ಕೈಯಿಂದ ಸನ್ನೆ ಮಾಡಿ, ಜನರಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡುತ್ತಾರೆ. ಆದರೆ, ‘ಮೋದಿ ಮೋದಿ’ ಘೋಷಣೆಗಳು ಕೇಳಿಸಲಿಲ್ಲ.

ಇದನ್ನೂ ಓದಿ: ‘ಒಂದು ತಿಂಗಳೊಳಗೆ ಅವರು ನಗುತ್ತಾರೆ’; ರೋಹಿತ್ ಶರ್ಮಾ ಮಗಳ ವೈರಲ್ ವಿಡಿಯೊ ಇತ್ತೀಚಿನದ್ದು ಅಲ್ಲ

ಗೆಹ್ಲೋಟ್  ರ‍್ಯಾಲಿಯ ಲೈವ್‌ಸ್ಟ್ರೀಮ್ ಅನ್ನು ನವೆಂಬರ್ 22 ರಂದು ಕಾಂಗ್ರೆಸ್ ನಡೆಸುತ್ತಿರುವ ಯೂಟ್ಯೂಬ್ ಚಾನೆಲ್ ‘INC TV’ ನಲ್ಲಿ ಸಹ ಹಂಚಿಕೊಳ್ಳಲಾಗಿದೆ. ಈಗ ವೈರಲ್ ಕ್ಲಿಪ್ ಸುಮಾರು 2:40 ಟೈಮ್‌ಸ್ಟ್ಯಾಂಪ್‌ನಿಂದ ಪ್ರಾರಂಭವಾಗುತ್ತದೆ. ಇಲ್ಲೂ ಕೂಡ ನರೇಂದ್ರ ಮೋದಿ ಪರ ಘೋಷಣೆಗಳು ಕೇಳಿ ಬಂದಿಲ್ಲ.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:31 pm, Sat, 25 November 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು