AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಪುಲ್ವಾಮಾ ದಾಳಿ ಕರಾಳ ದಿನಕ್ಕೆ 6 ವರ್ಷ: ವೈರಲ್ ಆಗುತ್ತಿದೆ 2019 ಪುಲ್ವಾಮಾ ಸ್ಫೋಟದ ಸುಳ್ಳು ವಿಡಿಯೋ

Pulwama Attack: ವಾಹನವೊಂದರಲ್ಲಿ ಸಂಭವಿಸಿದ ಸ್ಫೋಟದ ವಿಡಿಯೋ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗುತ್ತಿದೆ, ಇದರಲ್ಲಿ ವಾಹನಗಳು ಹೆದ್ದಾರಿಯಲ್ಲಿ ಹೋಗುವುದನ್ನು ಕಾಣಬಹುದು ಮತ್ತು ನಂತರ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸುತ್ತದೆ. ಕೆಲವು ಬಳಕೆದಾರರು ಈ ವೀಡಿಯೊವನ್ನು ಪುಲ್ವಾಮಾ ದಾಳಿಯದ್ದು ಎಂದು ಹಂಚಿಕೊಳ್ಳುತ್ತಿದ್ದಾರೆ.

Fact Check: ಪುಲ್ವಾಮಾ ದಾಳಿ ಕರಾಳ ದಿನಕ್ಕೆ 6 ವರ್ಷ: ವೈರಲ್ ಆಗುತ್ತಿದೆ 2019 ಪುಲ್ವಾಮಾ ಸ್ಫೋಟದ ಸುಳ್ಳು ವಿಡಿಯೋ
Pulwama Blast Fact Check
ಪ್ರೀತಿ ಭಟ್​, ಗುಣವಂತೆ
| Updated By: Vinay Bhat|

Updated on:Feb 13, 2025 | 9:11 PM

Share

ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿಯಿಂದಾಗಿ 40 ಕ್ಕೂ ಯೋಧರು ಕೊನೆಯುಸಿರೆಳೆದಿದ್ದರು. ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ ಭಾರತೀಯ ಸೇನೆಯ ವಾಹನದಲ್ಲಿ ತೆರಳುತ್ತಿದ್ದ ಯೋಧರು ಬಲಿಯಾಗಿದ್ದರು. ಈ ಘಟನೆ ನಡೆದು ನಾಳೆಗೆ (ಫೆ. 14) 6 ವರ್ಷಗಳು ಆಗಲಿವೆ. ಇದೀಗ ವಾಹನವೊಂದರಲ್ಲಿ ಸಂಭವಿಸಿದ ಸ್ಫೋಟದ ವಿಡಿಯೋ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗುತ್ತಿದೆ, ಇದರಲ್ಲಿ ವಾಹನಗಳು ಹೆದ್ದಾರಿಯಲ್ಲಿ ಹೋಗುವುದನ್ನು ಕಾಣಬಹುದು ಮತ್ತು ನಂತರ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸುತ್ತದೆ. ಕೆಲವು ಬಳಕೆದಾರರು ಈ ವೀಡಿಯೊವನ್ನು ಪುಲ್ವಾಮಾ ದಾಳಿಯದ್ದು ಎಂದು ಹಂಚಿಕೊಳ್ಳುತ್ತಿದ್ದಾರೆ.

ಏನು ವೈರಲ್ ಆಗುತ್ತಿರುವುದೇನು?:

ಫೇಸ್‌ಬುಕ್ ಬಳಕೆದಾರರೊಬ್ಬರು ಫೆಬ್ರವರಿ 11, 2025 ರಂದು ಈ ವೈರಲ್ ವಿಡಿಯೋವನ್ನು ಹಂಚಿಕೊಂಡು, “ಬ್ಲಾಕ್ ಡೇ- 14 ಫೆಬ್ರವರಿ 2019 ಪುಲ್ವಾಮಾ ದಾಳಿ” ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವಾಸ್ತವವಾಗಿ ಈ ವಿಡಿಯೋ 2007 ರಲ್ಲಿ ಇರಾಕ್‌ನಲ್ಲಿ ನಡೆದ ಘಟನೆಯದ್ದಾಗಿದೆ. ಅದನ್ನು ಈಗ ಪುಲ್ವಾಮಾ ದಾಳಿಗೆ ಲಿಂಕ್ ಮಾಡಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋಗೂ ಪುಲ್ವಾಮಾ ದಾಳಿಗೂ ಯಾವುದೇ ಸಂಬಂಧವಿಲ್ಲ.

ನಿಜಾಂಶವನ್ನು ತಿಳಿಯಲು ನಾವು ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ತೆಗೆದುಕೊಂಡು ಗೂಗಲ್ ಲೆನ್ಸ್ ಮೂಲಕ ಅವುಗಳನ್ನು ಹುಡುಕಿದೆವು. ಆಗ military.com ವೆಬ್‌ಸೈಟ್‌ನಲ್ಲಿ ವಿಡಿಯೋಗೆ ಸಂಬಂಧಿಸಿದ ವರದಿಯನ್ನು ನಾವು ಕಂಡುಕೊಂಡಿದ್ದೇವೆ. ಈ ವರದಿಯನ್ನು ಏಪ್ರಿಲ್ 27, 2011 ರಂದು ಪ್ರಕಟಿಸಲಾಯಿತು. ನೀಡಿರುವ ಮಾಹಿತಿಯ ಪ್ರಕಾರ, ಈ ವಿಡಿಯೋ ಇರಾಕ್‌ನಿಂದ ಬಂದಿದೆ.

Fact Check: ಜಸ್ಪ್ರಿತ್ ಬುಮ್ರಾ ಆರೋಗ್ಯ ಹದಗೆಟ್ಟಿದೆ ಎಂದು ಆಸ್ಪತ್ರೆಯಲ್ಲಿ ಮಲಗಿರುವ ಫೋಟೋ ವೈರಲ್

ನಾವು BidentheBrig ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವನ್ನು ಕಂಡುಕೊಂಡಿದ್ದೇವೆ. ಈ ವಿಡಿಯೋವನ್ನು ಡಿಸೆಂಬರ್ 5, 2011 ರಂದು ಅಪ್‌ಲೋಡ್ ಮಾಡಲಾಗಿದೆ. ವಿಡಿಯೋದಲ್ಲಿ ತೋರಿಸಿರುವ ವರ್ಷದ ಪ್ರಕಾರ, ಈ ಘಟನೆ 2007 ರಲ್ಲಿ ಇರಾಕ್‌ನಲ್ಲಿ ನಡೆದಿದೆ. ಮಾರ್ಕ್ ಡೇಲ್ ಎಂಬ ಫೇಸ್‌ಬುಕ್ ಬಳಕೆದಾರರು ಕೂಡ ಇದೇ ವಿಡಿಯೋ ಹಂಚಿಕೊಂಡಿದ್ದು, ಈ ಘಟನೆ ಸೆಪ್ಟೆಂಬರ್ 2007 ರಲ್ಲಿ ಇರಾಕ್‌ನ ಕ್ಯಾಂಪ್ ತಾಜಿಯಲ್ಲಿ ಸಂಭವಿಸಿದೆ ಎಂದು ಹೇಳಲಾಗುತ್ತದೆ.

ಇರಾಕ್‌ನಲ್ಲಿ 2007 ರಲ್ಲಿ ನಡೆದ ಘಟನೆ ಎಂದು ಹೇಳಿಕೊಂಡು ಹಲವಾರು ಇತರ ಯೂಟ್ಯೂಬ್ ಚಾನೆಲ್‌ಗಳು ಮತ್ತು ಫೇಸ್‌ಬುಕ್ ಪುಟಗಳಲ್ಲಿ ವೈರಲ್ ವಿಡಿಯೋವನ್ನು ನಾವು ಕಂಡುಕೊಂಡಿದ್ದೇವೆ. ಟಿವಿ9 ಕನ್ನಡ ತನಿಖೆ ನಡೆಸಿ ಪುಲ್ವಾಮಾ ದಾಳಿಯ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿರುವುದು ವಾಸ್ತವವಾಗಿ ಇರಾಕ್‌ನದ್ದು ಎಂದು ಈ ಮೂಲಕ ಸ್ಪಷ್ಟಪಡಿಸುತ್ತದೆ. ಈ ವಿಡಿಯೋ 2007 ರಲ್ಲಿ ಇರಾಕ್‌ನಲ್ಲಿ ನಡೆದ ಘಟನೆಯದ್ದಾಗಿದ್ದು, ಇದನ್ನು ಈಗ ಪುಲ್ವಾಮಾ ದಾಳಿಗೆ ತಳುಕು ಹಾಕುವ ಮೂಲಕ ಹಂಚಿಕೊಳ್ಳಲಾಗುತ್ತಿದೆ.

ಪುಲ್ವಾಮಾ ದಾಳಿ ಕರಾಳ ದಿನಕ್ಕೆ 6 ವರ್ಷ:

ಅಂದು ಫೆಬ್ರವರಿ 14, 2019ರ ಮದ್ಯಾಹ್ನ 3 ಗಂಟೆ ಸಮಯವಾಗಿತ್ತಷ್ಟೇ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್ಪೊರ ಬಳಿಯ ಅವಾಂತಿಪೋರಾ ಬಳಿ ಶ್ರೀನಗರಕ್ಕೆ 2500 ಕ್ಕೂ ಹೆಚ್ಚು ಭಾರತೀಯ ಭದ್ರತಾ ಸಿಬ್ಬಂದಿಗಳಿದ್ದ 78 ಸೇನಾ ವಾಹನಗಳು ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಾಗುತ್ತಿತ್ತು. ಅದೇ ವೇಳೆಯಲ್ಲಿ 350 ಕೆಜಿ ಸ್ಫೋಟಕಗಳಿದ್ದ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿಯೊಂದು ಸೇನಾ ವಾಹನಕ್ಕೆ ಬಂದು ಢಿಕ್ಕಿ ಹೊಡೆದಿತ್ತು.

ಢಿಕ್ಕಿ ಹೊಡೆದ ಪರಿಣಾಮ ಜಮ್ಮು ಮತ್ತು ಕಾಶ್ಮೀರದಲ್ಲಿ 40 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಎರಡು ಬಸ್ ಗಳು ಹೊತ್ತು ಉರಿದಿತ್ತು. ಈ ದಾಳಿಯಿಂದಾಗಿ 40 ಯೋಧರು ಕೊನೆಯುಸಿರೆಳೆದು ಕೊಂಡಿದ್ದು, ಕೆಲ ಸೈನಿಕರಿಗೆ ಗಂಭೀರ ಗಾಯಗಳಾಗಿತ್ತು. ಪುಲ್ವಾಮ ದಾಳಿಯ ಬಳಿಕ ಜೈಶ್-ಇ-ಮೊಹಮ್ಮದ್ ಸಂಘಟನೆ ವೀಡಿಯೋವೊಂದನ್ನು ಬಿಡುಗಡೆ ಮಾಡಿತ್ತು. ಈ ದಾಳಿಯ ಪರಿಣಾಮವಾಗಿ ಭಾರತಕ್ಕೆ ಪಾಕ್ ಗೆ ಪ್ರತ್ಯುತ್ತರವನ್ನು ನೀಡಿತ್ತು. ಹನ್ನೆರಡು ದಿನಗಳ ಬಳಿಕ ಭಾರತೀಯ ವಾಯುಪಡೆಯ ಜೆಟ್‌ಗಳು ಪಾಕಿಸ್ತಾನದ ಖೈಬರ್ ಪಖ್ತುನ್‌ಖ್ವಾದಲ್ಲಿರುವ ಬಾಲಾಕೋಟ್‌ನಲ್ಲಿರುವ ಜೆಇಎಂ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿತು. ಭಾರತವು ನಡೆಸಿದ ಈ ದಾಳಿಯಲ್ಲಿ 250 ಪಾಕ್ ಉಗ್ರರು ಬಲಿಪಡೆದು ಪ್ರತ್ಯುತ್ತರವನ್ನು ನೀಡಿತ್ತು.

ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Thu, 13 February 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!