AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಮಹಾಕುಂಭಕ್ಕೆ ತೆರಳುತ್ತಿದ್ದ ಬಸ್ ಅಪಘಾತ ಎಂದು ಪಾಕಿಸ್ತಾನದ ವಿಡಿಯೋ ವೈರಲ್

ಮಹಾ ಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ ಅಪಘಾತ ಸಂಭವಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ. ತನಿಖೆಯಿಂದ ಈ ವಿಡಿಯೋ ಪಾಕಿಸ್ತಾನದ್ದು ಎಂದು ತಿಳಿದುಬಂದಿದೆ. ಅಲ್ಲಿ ರೈವಿಂಡ್ ತಬ್ಲಿಘಿ ಇಜ್ತೆಮಾದಿಂದ ಹಿಂತಿರುಗುವಾಗ ಬಸ್ ಚರಂಡಿಗೆ ಬಿದ್ದಿದೆ.

Fact Check: ಮಹಾಕುಂಭಕ್ಕೆ ತೆರಳುತ್ತಿದ್ದ ಬಸ್ ಅಪಘಾತ ಎಂದು ಪಾಕಿಸ್ತಾನದ ವಿಡಿಯೋ ವೈರಲ್
Mahakumbh Bus Accident Fact Check
ಪ್ರೀತಿ ಭಟ್​, ಗುಣವಂತೆ
| Updated By: Vinay Bhat|

Updated on: Feb 04, 2025 | 7:40 PM

Share

ಪ್ರಯಾಗ್‌ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಕ್ಕೆ ಅನೇಕ ಫೇಕ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೀಗ ಬಸ್ಸೊಂದು ಚರಂಡಿಗೆ ಬಿದ್ದಿರುವ ವಿಡಿಯೋ ಹರಿದಾಡುತ್ತಿದೆ. ವಿಡಿಯೋದಲ್ಲಿ ಬಸ್ ಸುತ್ತಲೂ ಅನೇಕ ಜನರು ನಿಂತಿದ್ದಾರೆ. ಅನೇಕ ಬಳಕೆದಾರರು ಈ ವಿಡಿಯೋ ಹಂಚಿಕೊಳ್ಳುವ ಮೂಲಕ, ಈ ಬಸ್ ಪ್ರಯಾಗರಾಜ್ ಮಹಾಕುಂಭಕ್ಕೆ ಹೋಗುತ್ತಿದ್ದಾಗ ಚರಂಡಿಗೆ ಬಿದ್ದಿದೆ ಎಂದು ಬರೆದುಕೊಳ್ಳುತ್ತಿದ್ದಾರೆ. ಈ ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಪೋಸ್ಟ್​ನಲ್ಲಿ ಹೇಳಲಾಗಿದೆ.

ಎಕ್ಸ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ಇದು ಮಹಾ ಕುಂಭ ಪ್ರಯಾಗರಾಜ್‌ನದ್ದು ಎಂದು ಹೇಳಿಕೊಂಡು “ವೈರಲ್ ಮಹಾ ಕುಂಭ ಬಸ್ ಚರಂಡಿಗೆ ಬಿದ್ದಿದೆ” ಎಂದು ಬರೆದಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವೈರಲ್ ಆಗುತ್ತಿರುವ ವಿಡಿಯೋಗೂ ಪ್ರಯಾಗ್‌ರಾಜ್ ಮಹಾಕುಂಭಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಡಿಯೋ ಪಾಕಿಸ್ತಾನದ್ದಾಗಿದೆ.

ವೈರಲ್ ವಿಡಿಯೋದ ನಿಜಾಂಶವನ್ನು ತಿಳಿಯಲು ನಾವು ರಿವರ್ಸ್ ಇಮೇಜ್ ಹುಡುಕಾಟದ ಸಹಾಯವನ್ನು ಪಡೆದುಕೊಂಡೆವು. ಆಗ ಈ ವಿಡಿಯೋವನ್ನು ನವೆಂಬರ್ 3, 2024 ರಂದು ಡಾ. ಅಲ್ತಾಫ್ ಬಲೋಚ್ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿರುವುದು ನಾವು ಕಂಡುಕೊಂಡಿದ್ದೇವೆ. “ರೈವಿಂಡ್ ತಬ್ಲಿಘಿ ಜಮಾತ್‌ನಿಂದ ಹಿಂತಿರುಗುವಾಗ ಪ್ರಯಾಣಿಕರ ಬಸ್ ಚರಂಡಿಗೆ ಬಿದ್ದಿತು” ಎಂಬ ಮಾಹಿತಿ ಇದರಲ್ಲಿದೆ.

ಇದಲ್ಲದೆ, ನವೆಂಬರ್ 4, 2024 ರಂದು ಮಿಷನ್ ಸಲೀಮ್ ಖಾದ್ರಿ 92 ಎಂಬ ಫೇಸ್‌ಬುಕ್ ಪುಟದಲ್ಲಿ ಕೂಡ ಇದೇ ವೈರಲ್ ವಿಡಿಯೋ ಅಪ್‌ಲೋಡ್ ಆಗಿರುವುದನ್ನು ನಾವು ಕಂಡುಕೊಂಡಿದ್ದೇವೆ. ಇಲ್ಲೂ ರೈವಿಂಡ್ ಸಭೆಯಿಂದ ಹಿಂತಿರುಗುವಾಗ ಬಸ್ ಚರಂಡಿಗೆ ಬಿದ್ದಿದೆ ಎಂದು ಬರೆಯಲಾಗಿದೆ.

Fact Check: ಶಾರುಖ್ ಖಾನ್-ಸಲ್ಮಾನ್ ಖಾನ್ ಮಹಾಕುಂಭದಲ್ಲಿ ಸ್ನಾನ ಮಾಡಿದ್ದು ನಿಜವೇ?

ಈ ಮಾಹಿತಿಯ ಆಧಾರದ ಮೇಲೆ ನಾವು ಗೂಗಲ್​ನಲ್ಲಿ ಕೀವರ್ಡ್‌ಗಳೊಂದಿಗೆ ಹುಡುಕಿದಾಗ, ಈ ಅಪಘಾತದ ಕುರಿತು ಹಲವು ಸುದ್ದಿ ವರದಿಗಳು ನಮಗೆ ಸಿಕ್ಕವು. ಪಾಕಿಸ್ತಾನಿ ಸುದ್ದಿ ವಾಹಿನಿ ಹಮ್ ನ್ಯೂಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ, ಈ ವಿಡಿಯೋದ ವಿವರಣೆಯನ್ನು “ತಬ್ಲಿಘಿ ಇಜ್ತೆಮಾದಿಂದ ಇತ್ತೀಚಿನ ಸುದ್ದಿ – ಲಾಹೋರ್‌ನಲ್ಲಿ ಬಸ್ ಚರಂಡಿಗೆ ಬಿದ್ದಿದೆ” ಎಂದು ನೀಡಲಾಗಿದೆ.

ಮಾಹಿತಿಯ ಪ್ರಕಾರ, ಈ ವಿಡಿಯೋ ನವೆಂಬರ್ 3, 2024 ರಂದು, ರೈವಿಂಡ್‌ನಲ್ಲಿ ವಾರ್ಷಿಕ ತಬ್ಲಿಘಿ ಇಜ್ತೆಮಾ ಮುಗಿದ ನಂತರ 70 ಜನರನ್ನು ಹೊತ್ತ ಬಸ್ ಕೋಟ್ ಅಡ್ಡು ಪಟ್ಟಣದ ಕಡೆಗೆ ಬರುತ್ತಿತ್ತು. ಈ ಸಮಯದಲ್ಲಿ, ಈ ಬಸ್ಸಿನ ಚಕ್ರ ಜಾರಿ ಬಸ್ ಚರಂಡಿಗೆ ಬಿದ್ದಿತು. ಅಪಘಾತದಲ್ಲಿ ಸುಮಾರು 30 ಜನರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ಬರೆಯಲಾಗಿದೆ.

ಇದಾದ ನಂತರ, ಪ್ರಯಾಗ್‌ರಾಜ್‌ಗೆ ಹೋಗುತ್ತಿದ್ದ ಬಸ್‌ ಅಪಘಾತ ಸಂಭವಿಸಿದೆಯೇ ಎಂದು ನಾವು ಕೀವರ್ಡ್‌ಗಳನ್ನು ಬಳಸಿ ಹುಡುಕಿದೆವು. ಈ ಸಂದರ್ಭ ಇತ್ತೀಚೆಗೆ ಮಹಾ ಕುಂಭಮೇಳದಿಂದ ಹಿಂತಿರುಗುತ್ತಿದ್ದ ಬಸ್ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ 7 ಜನರು ಸಾವನ್ನಪ್ಪಿದ್ದಾರೆ ಎಂದು ನಾವು ಕಂಡುಕೊಂಡೆವು. ಆದರೆ ಈ ವೀಡಿಯೊ ಆ ಘಟನೆಯದ್ದಲ್ಲ.

ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಮಹಾ ಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ ಅಪಘಾತ ಸಂಭವಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ. ತನಿಖೆಯಿಂದ ಈ ವಿಡಿಯೋ ಪಾಕಿಸ್ತಾನದ್ದು ಎಂದು ತಿಳಿದುಬಂದಿದೆ. ಅಲ್ಲಿ ರೈವಿಂಡ್ ತಬ್ಲಿಘಿ ಇಜ್ತೆಮಾದಿಂದ ಹಿಂತಿರುಗುವಾಗ ಬಸ್ ಚರಂಡಿಗೆ ಬಿದ್ದಿದೆ.

ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ