Fact Check: ನೇಪಾಳ-ಟಿಬೆಟ್‌ನಲ್ಲಿ ಭೂಕಂಪ ಎಂದು ಮನೆಗಳು ಕುಸಿದು ಬೀಳುವ ಜಪಾನ್​ನ ವಿಡಿಯೋ ವೈರಲ್

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಈ ವೈರಲ್ ಪೋಸ್ಟ್ ತಪ್ಪುದಾರಿಗೆಳೆಯುವಂತಿದೆ ಎಂದು ಕಂಡುಬಂದಿದೆ. ಜಪಾನ್ನಲ್ಲಿ ಜನವರಿ 2024 ರಂದು ಭೂಕಂಪ ಸಂಭವಿಸಿದಾಗ ಅನೇಕ ಮನೆಗಳು ಕುಸಿದು ಬಿದ್ದ ವಿಡಿಯೋ ಇದಾಗಿದೆ. ನೇಪಾಳ-ಟಿಬೆಟ್‌ನಲ್ಲಿ ಸಂಭವಿಸಿದ ಭೂಕಂಪಕ್ಕೂ ಈ ವಿಡಿಯೋಕ್ಕು ಯಾವುದೇ ಸಂಬಂಧವಿಲ್ಲ.

Fact Check: ನೇಪಾಳ-ಟಿಬೆಟ್‌ನಲ್ಲಿ ಭೂಕಂಪ ಎಂದು ಮನೆಗಳು ಕುಸಿದು ಬೀಳುವ ಜಪಾನ್​ನ ವಿಡಿಯೋ ವೈರಲ್
Nepal Earthquake Fact Check (3)
Follow us
ಪ್ರೀತಿ ಭಟ್​, ಗುಣವಂತೆ
| Updated By: Vinay Bhat

Updated on: Jan 11, 2025 | 4:22 PM

ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭಾರೀ ಭೂಕಂಪದ ನಂತರ, ಹಳೆಯ ಘಟನೆಗಳಿಗೆ ಸಂಬಂಧಿಸಿದ ಅನೇಕ ವಿಡಿಯೋಗಳು ಮತ್ತು ಫೋಟೋಗಳು ವೈರಲ್ ಆಗುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಒಂದನ್ನು ಶೇರ್ ಮಾಡುತ್ತಿದ್ದು, ಭೂಕಂಪನದಿಂದಾಗಿ ರಸ್ತೆ ಬದಿಯಲ್ಲಿ ನಿರ್ಮಿಸಿರುವ ಮನೆಗಳು ಕುಸಿದು ಬೀಳುತ್ತಿರುವ ದೃಶ್ಯ ಕಂಡು ಬಂದಿದೆ. ವಿಡಿಯೋವನ್ನು ಹಂಚಿಕೊಳ್ಳುವಾಗ, ಬಳಕೆದಾರರು ಇತ್ತೀಚೆಗೆ ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೂಕಂಪದ ದೃಶ್ಯ ಎಂದು ಹೇಳಿಕೊಳ್ಳುತ್ತಿದ್ದಾರೆ.

ವೈರಲ್ ಆಗುತ್ತಿರುವುದು ಏನು?:

ವೈರಲ್ ಪೋಸ್ಟ್ ಅನ್ನು ಹಂಚಿಕೊಳ್ಳುವಾಗ, ಫೇಸ್‌ಬುಕ್ ಬಳಕೆದಾರರೊಬ್ಬರು, ‘‘ಯಾ ಅಲ್ಲಾ ರಹಮ್. ನೇಪಾಳ-ಟಿಬೆಟ್ ಗಡಿಯಲ್ಲಿ 7.1 ತೀವ್ರತೆಯ ಭೂಕಂಪನವಾಗಿದೆ. ನೇಪಾಳ-ಟಿಬೆಟ್ ಗಡಿಯಲ್ಲಿ 7.1 ತೀವ್ರತೆಯ ಭೂಕಂಪ, 95 ಸಾವು” ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಈ ವೈರಲ್ ಪೋಸ್ಟ್ ತಪ್ಪುದಾರಿಗೆಳೆಯುವಂತಿದೆ ಎಂದು ಕಂಡುಬಂದಿದೆ. ಜಪಾನ್​ನಲ್ಲಿ ಜನವರಿ 2024 ರಂದು ಭೂಕಂಪ ಸಂಭವಿಸಿದಾಗ ಅನೇಕ ಮನೆಗಳು ಕುಸಿದು ಬಿದ್ದ ವಿಡಿಯೋ ಇದಾಗಿದೆ. ನಿಜಾಂಶವನ್ನು ತಿಳಿಯಲು ನಾವು ಮೊದಲು ವಿಡಿಯೋದಿಂದ ಕೀಫ್ರೇಮ್‌ಗಳನ್ನು ಹೊರತೆಗೆದು ಅವುಗಳನ್ನು ಗೂಗಲ್ ಲೆನ್ಸ್‌ನೊಂದಿಗೆ ಹುಡುಕಿದ್ದೇವೆ. ಆಗ ಈ ಚಿತ್ರವನ್ನು ಅನೇಕ ಸುದ್ದಿ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡುಕೊಂಡಿದ್ದೇವೆ.

ವೈರಲ್ ವಿಡಿಯೋವನ್ನು ಫೆಬ್ರವರಿ 2, 2024 ರಂದು ಜಪಾನ್ ಮೂಲದ ಸುದ್ದಿ ವೆಬ್‌ಸೈಟ್ ಹೊಕುರಿಕು ಶಿಂಬುನ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಇಲ್ಲಿ ವಿಡಿಯೋ ಜಪಾನ್‌ನ ನಗರವೊಂದರದ್ದು ಎನ್ನಲಾಗಿದೆ.

ಇದರ ಆಧಾರದ ಮೇಲೆ, ನಾವು ಹೆಚ್ಚಿನ ತನಿಖೆಯನ್ನು ನಡೆಸಿದ್ದೇವೆ. ಆಗ ಜಪಾನೀ ಸುದ್ದಿ ವೆಬ್‌ಸೈಟ್ chunichi.co ನಲ್ಲಿ ಈ ವೈರಲ್ ವಿಡಿಯೋವನ್ನು ಕಂಡುಕೊಂಡಿದ್ದೇವೆ. ಜನವರಿ 4, 2024 ರಂದು ಪ್ರಕಟವಾದ ಸುದ್ದಿಯ ಜೊತೆಗೆ ಇಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ಜಪಾನ್‌ನಲ್ಲಿ 7.6 ತೀವ್ರತೆಯ ಭೂಕಂಪದ ನಂತರ ಅನೇಕ ವಿಡಿಯೋಗಳು ವೈರಲ್ ಆಗಿವೆ. ಇದು ಇಶಿಕಾವಾ ಪ್ರಿಫೆಕ್ಚರ್‌ನ ತಕಡಾಟೆಚೊ ನಗರದಿಂದ ಬಂದಿದೆ, ಇದರಲ್ಲಿ ಕಟ್ಟಡಗಳು ನೆಲಕ್ಕೆ ಉರುಳುತ್ತಿರುವುದನ್ನು ಕಾಣಬಹುದು.

Fact Check: ಹೊಸ ನಿಯಮ, ವಾಟ್ಸ್ಆ್ಯಪ್​ನಲ್ಲಿ​ ಹೀಗೆ ಮೆಸೇಜ್ ಮಾಡಿದ್ರೆ ವಾರೆಂಟ್ ಇಲ್ಲದೆ ಬಂಧನ?

ಯುಎಸ್ ಸರ್ಕಾರದ ಜಿಯೋಲಾಜಿಕಲ್ ಸೊಸೈಟಿ ಪ್ರಕಾರ, ನೇಪಾಳ-ಟಿಬೆಟ್ ಗಡಿಯಲ್ಲಿ ಸುಮಾರು 7.1 ತೀವ್ರತೆಯ ಭೂಕಂಪ ಸಂಭವಿಸಿದೆ. ಅದೇ ಸಮಯದಲ್ಲಿ, ಜನವರಿ 10, 2025 ರ ಸುದ್ದಿಯ ಪ್ರಕಾರ, ಈ ಭೂಕಂಪದಿಂದಾಗಿ ಇದುವರೆಗೆ 126 ಜನರು ಸಾವನ್ನಪ್ಪಿದ್ದಾರೆ ಮತ್ತು 337 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಟಿವಿ9 ಕನ್ನಡ ತನ್ನ ತನಿಖೆಯಲ್ಲಿ ವೈರಲ್ ವಿಡಿಯೋ ಜಪಾನ್‌ನಿಂದ ಕಂಡುಬಂದಿದೆ ಎಂದು ಖಚಿತವಾಗಿ ಹೇಳುತ್ತದೆ. ಜನವರಿ 2024 ರಲ್ಲಿ ಜಪಾನ್‌ನಲ್ಲಿ ಭೂಕಂಪ ಸಂಭವಿಸಿದಾಗ ಅನೇಕ ಮನೆಗಳು ಕುಸಿದು ಬಿದ್ದಿದ್ದವು, ಇದು ಅದೇ ವಿಡಿಯೋ ಆಗಿದೆ. ನೇಪಾಳ-ಟಿಬೆಟ್‌ನಲ್ಲಿ ಸಂಭವಿಸಿದ ಭೂಕಂಪಕ್ಕೂ ಈ ವಿಡಿಯೋಕ್ಕು ಯಾವುದೇ ಸಂಬಂಧವಿಲ್ಲ.

ಮತ್ತೊಂದು ವಿಡಿಯೋ ವೈರಲ್:

ಇನ್​ಸ್ಟಾಗ್ರಾಮ್ ಬಳಕೆದಾರರೊಬ್ಬರು ಜನವರಿ 7, 2025 ರಂದು ಸಿಸಿಟಿವಿ ದೃಶ್ಯಾವಳಿಯ ವೀಡಿಯೊವನ್ನು ಹಂಚಿಕೊಂಡು, ‘‘ನೇಪಾಳದಲ್ಲಿ 7.0 ತೀವ್ರತೆಯ ಭೂಕಂಪ, ದೆಹಲಿಯಿಂದ ಪಾಟ್ನಾದ ವರೆಗೂ ಪರಿಣಾಮ’’ ಎಂದು ಬರೆದುಕೊಂಡಿದ್ದರು. ಆದರೆ, ಈ ವೈರಲ್ ವಿಡಿಯೋಕ್ಕೂ ಜನವರಿ 7 ರಂದು ಸಂಭವಿಸಿದ ಭೂಕಂಪಕ್ಕೂ ಯಾವುದೇ ಸಂಬಂಧವಿಲ್ಲ. ಇದು ನೇಪಾಳದ ರಾಜಧಾನಿ ಕಠ್ಮಂಡುವಿನ ತ್ರಿಪುರೇಶ್ವರ ಚೌಕ್‌ನಲ್ಲಿ 2015 ರಲ್ಲಿ ಸಂಭವಿಸಿದ ಭೂಕಂಪವಾಗಿದೆ.

ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ