ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕನಿಗೆ ಥಳಿಸುತ್ತಿರುವ ಕೇರಳದ ಹುಡುಗಿಯರು; ವೈರಲ್ ವಿಡಿಯೊದ ಸತ್ಯಾಸತ್ಯತೆ ಹೀಗಿದೆ

Fact Check: ಹಿಂದೂ ಹುಡುಗಿಯರ ಒಗ್ಗಟ್ಟು, ಕೇರಳದಲ್ಲಿ ಮುಸ್ಲಿಂ ವ್ಯಕ್ತಿ ಹಿಂದೂ ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸಿದಾಗ ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಶೇರ್ ಆಗುತ್ತಿರುವ ಈ ವಿಡಿಯೊದ ಫ್ಯಾಕ್ಟ್ ಚೆಕ್ ಇಲ್ಲಿದೆ

ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕನಿಗೆ ಥಳಿಸುತ್ತಿರುವ ಕೇರಳದ ಹುಡುಗಿಯರು; ವೈರಲ್ ವಿಡಿಯೊದ ಸತ್ಯಾಸತ್ಯತೆ ಹೀಗಿದೆ
ವೈರಲ್ ಆಗಿರುವ ಕೇರಳದ ವಿಡಿಯೊ ಟ್ವೀಟ್ ಮಾಡಿರುವುದು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 25, 2023 | 5:08 PM

ಮಹಿಳೆಯರ ಗುಂಪೊಂದು ವ್ಯಕ್ತಿಯೊಬ್ಬನಿಗೆ ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. 1 ನಿಮಿಷದ 45 ಸೆಕೆಂಡ್‌ಗಳ ಈ ವಿಡಿಯೊದಲ್ಲಿ ಮಹಿಳೆಯರು ವ್ಯಕ್ತಿಯನ್ನು ಬೆನ್ನಟ್ಟಿ ದೊಣ್ಣೆಯಿಂದ ಥಳಿಸುತ್ತಿರುವುದನ್ನು ಕಾಣಬಹುದು. ಬಳಿಕ ಅಲ್ಲಿದ್ದ ಕಾರಿನ ಮೇಲೂ ದಾಳಿ ಮಾಡಿದ್ದಾರೆ. ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ವ್ಯಕ್ತಿಗೆ ಥಳಿಸುತ್ತಿರುವ ಹಿಂದೂ ಮಹಿಳೆಯರು ಎಂಬ ಬರಹದೊಂದಿಗೆ ಇದು ವ್ಯಾಪಕವಾಗಿ ಶೇರ್ ಆಗುತ್ತಿದೆ. ಟ್ವಿಟರ್ (Twitter) ಬಳಕೆದಾರರು ಈ ವಿಡಿಯೊವನ್ನು “ಹಿಂದೂ ಹುಡುಗಿಯರ ಒಗ್ಗಟ್ಟು, ಕೇರಳದಲ್ಲಿ (Kerala) ಮುಸ್ಲಿಂ ವ್ಯಕ್ತಿ ಹಿಂದೂ ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸಿದಾಗ.. ಜೈ ಹಿಂದ್…!” ಎಂದು ಟ್ವೀಟ್ ಮಾಡಿದ್ದಾರೆ.ಈ ವಿಡಿಯೊವನ್ನು ಹಂಚಿಕೊಂಡ ಫೇಸ್​​ಬುಕ್ ಬಳಕೆದಾರರು “ಕೇರಳದಲ್ಲಿ ಅನುಚಿತವಾಗಿ ವರ್ತಿಸಿದ ಮುಸ್ಲಿಂ ವ್ಯಕ್ತಿಗೆ ಹಿಂದೂ ಹುಡುಗಿಯರು ಬಾರಿಸಿದ್ದಾರೆ. ಕೇರಳದಲ್ಲಿ ಜಾಗೃತಿ ಪ್ರಾರಂಭವಾಗಿದೆ. ಬೆಂಕಿ ಉರಿಯುತ್ತಿರಲಿ ಎಂದು ಆಶಿಸೋಣ. ಲವ್ ಜಿಹಾದ್ ಅನ್ನು ತಡೆಯಲು ಇದು ಸರಿಯಾದ ಮಾರ್ಗವಾಗಿದೆ. ನಮ್ಮ ಹುಡುಗಿಯರು ಮುಸ್ಲಿಮರಿಗೆ ಅವರ ದುರ್ಗಾ ಅವತಾರ್ ತೋರಿಸಬೇಕು. ಮಾತೃಶಕ್ತಿ ಜಾಗ್ ಉಠೀ” ಎಂದಿದ್ದಾರೆ.

ಇದೇ ರೀತಿಯ ಹೇಳಿಕೆಯೊಂದಿಗೆ ಇದನ್ನು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್ ಚೆಕ್

ಈ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿದ ಲಾಜಿಕಲ್ ಇಂಡಿಯನ್ ವೈರಲ್ ವಿಡಿಯೊ ತಪ್ಪಾದ ಬರಹದೊಂದಿಗೆ ಶೇರ್ ಆಗುತ್ತಿದೆ ಎಂದು ವರದಿ ಮಾಡಿದೆ. ವೈರಲ್ ಆಗಿರುವ ವಿಡಿಯೊದಲ್ಲಿ ಥಳಿತಕ್ಕೊಳಗಾದ ವ್ಯಕ್ತಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವನು. InVid ಟೂಲ್ ಬಳಸಿ ವೈರಲ್ ವಿಡಿಯೊದಿಂದ ವಿವಿಧ ಕೀ ಫ್ರೇಮ್‌ಗಳನ್ನು ತೆಗೆದು Google ರಿವರ್ಸ್ ಇಮೇಜ್ ಹುಡುಕಾಟವನ್ನು ಮಾಡಿದಾಗ 2023 ಜನವರಿ 8ರಂದು HW ನ್ಯೂಸ್‌ನ ವರದಿ ಸಿಕ್ಕಿದೆ. ಈ ವರದಿಯ ಪ್ರಕಾರ ಕೇರಳದ ತ್ರಿಶೂರ್ ಜಿಲ್ಲೆಯ ಆಲೂರ್ ಪೊಲೀಸರು, ವ್ಯಕ್ತಿ ಮತ್ತು ಅವನ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಹನ್ನೊಂದು ಮಹಿಳೆಯರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಿಳೆಯರ ಮಾರ್ಫ್ ಮಾಡಿದ ಫೋಟೋಗಳನ್ನು ಈತ ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಳ್ಳುತ್ತಿದ್ದಾನೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಶಾಜಿ ಎಂದು ಗುರುತಿಸಲಾದ ವ್ಯಕ್ತಿ ಮತ್ತು ಅವರ ಕುಟುಂಬ ಇತ್ತೀಚೆಗೆ ಚರ್ಚ್‌ಗೆ ಹೋಗುವುದನ್ನು ನಿಲ್ಲಿಸಿದ್ದರು. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರ ಪ್ರಕಾರ 50 ಕ್ಕೂ ಹೆಚ್ಚು ಮಹಿಳೆಯರು ಶಾಜಿ ಅವರ ಕಾರನ್ನು ತಡೆದು ಶಾಜಿ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: Lakhimpur Kheri Case: ಕೇಂದ್ರ ಸಚಿವರ ಪುತ್ರನಿಗೆ ಜಾಮೀನು ನೀಡಿದ ಸುಪ್ರೀಂ

2023 ಜನವರಿ 7ರ ಇಂಡಿಯಾ ಟುಡೇ ವರದಿ ಪ್ರಕಾರ, ಪಾದ್ರಿಯ ಫೋಟೋವನ್ನು ಮಾರ್ಫಿಂಗ್ ಮಾಡಿದ ವ್ಯಕ್ತಿಯ ಮೇಲೆ ಮಹಿಳೆಯರು ಹಲ್ಲೆ ನಡೆಸಿದ್ದಾರೆ. ಕೇರಳದ ತ್ರಿಶೂರ್‌ನಲ್ಲಿರುವ ಎಂಪರರ್ ಇಮ್ಯಾನುಯೆಲ್ ರಿಟ್ರೀಟ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ. ಶಾಜಿ, ಅವರ ಪತ್ನಿ ಆಶ್ಲಿನ್, ಅವರ ಮಗ ಸಜನ್ ಮತ್ತು ಅವರ ಸಂಬಂಧಿಕರಾದ ಎಡ್ವಿನ್ ಮತ್ತು ಅನ್ವಿನ್ ಅವರನ್ನು ಕಾರಿನಿಂದ ಎಳೆದು ಥಳಿಸಲಾಗಿದೆ. ವ್ಯಕ್ತಿ ತಾನು ಈ ಹಿಂದೆ ಭಾಗವಾಗಿದ್ದ ಚರ್ಚ್‌ನ ಪಾದ್ರಿಯ ಚಿತ್ರವನ್ನು ಮಾರ್ಫ್ ಮಾಡಿ ಅದನ್ನು ವಿವಿಧ ವೇದಿಕೆಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಲಾಗಿದೆ.

ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ತಂಡವು ಆಲೂರ್ ಪೋಲೀಸ್ ಮತ್ತು ಹಿರಿಯ ಅಧಿಕಾರಿಯನ್ನು ಸಂಪರ್ಕಿಸಿದ್ದು ಅವರು ಈ ರೀತಿ ಹೇಳಿದ್ದಾರೆ. ಈ ವ್ಯಕ್ತಿ ಮಹಿಳೆಯ ಮಾರ್ಫ್ ಮಾಡಿದ ಚಿತ್ರಗಳನ್ನು ಶೇರ್ ಮಾಡುತ್ತಿರುವ ಬಗ್ಗೆ ನಮಗೆ ದೂರು ಬಂದಿದೆ. ಆ ಚಿತ್ರಗಳನ್ನು ವಿದೇಶಿ ಐಪಿ ವಿಳಾಸದಿಂದ ಅಪ್‌ಲೋಡ್ ಮಾಡಲಾಗಿದೆ. ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ನಂತರ ಇದು ಸಮುದಾಯದ ಸಮಸ್ಯೆಯಾಯಿತು. ಪುರುಷ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವನಾಗಿದ್ದು, ಈ ಪ್ರಕರಣದಲ್ಲಿ ಯಾವುದೇ ಹಿಂದೂ-ಮುಸ್ಲಿಂ ಕೋನವಿಲ್ಲ. ನಮ್ಮ ತನಿಖೆಗಳ ಪ್ರಕಾರ, ಅಸಭ್ಯವಾಗಿ ವರ್ತಿಸಿದ್ದಕ್ಕಾಗಿ ಮುಸ್ಲಿಂ ವ್ಯಕ್ತಿಗೆ ಹಿಂದೂ ಮಹಿಳೆಯರು ಥಳಿಸಿದ್ದಾರೆ ಎಂಬ ಆರೋಪ ಸುಳ್ಳು, ವೈರಲ್ ವಿಡಿಯೊದಲ್ಲಿರುವ ವ್ಯಕ್ತಿಯ ಹೆಸರು ಶಾಜಿ, ಆತಬ್ಬ ಕ್ರಿಶ್ಚಿಯನ್. ಈ ಪ್ರಕರಣದಲ್ಲಿ ಯಾವುದೇ ರೀತಿಯ ಹಿಂದೂ- ಮುಸ್ಲಿಂ ಧರ್ಮದ ವಿಷಯವಿಲ್ಲ ಎಂದಿದ್ದಾರೆ.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Wed, 25 January 23

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ