ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯೋಗಿ ಸರ್ಕಾರ ನಕಲಿ ಎನ್​​ಕೌಂಟರ್ ನಡೆಸಿದೆ: ಅಖಿಲೇಶ್ ಯಾದವ್

ನಕಲಿ ಎನ್‌ಕೌಂಟರ್‌ಗಳ ಮೂಲಕ ಬಿಜೆಪಿ ಸರ್ಕಾರವು ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಬಿಜೆಪಿಗೆ ನ್ಯಾಯಾಲಯಗಳ ಮೇಲೆ ನಂಬಿಕೆ ಇಲ್ಲ. ಇಂದಿನ ಮತ್ತು ಇತ್ತೀಚಿನ ಎನ್‌ಕೌಂಟರ್‌ಗಳ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಮತ್ತು ಅಪರಾಧಿಗಳನ್ನು ಬಿಡಬಾರದು.

ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯೋಗಿ ಸರ್ಕಾರ ನಕಲಿ ಎನ್​​ಕೌಂಟರ್ ನಡೆಸಿದೆ: ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Follow us
|

Updated on:Apr 13, 2023 | 6:42 PM

ಲಖನೌ: ಗ್ಯಾಂಗ್​​ಸ್ಟರ್, ರಾಜಕಾರಣಿ ಅತೀಕ್ ಅಹ್ಮದ್ ಅವರ ಪುತ್ರ ಮತ್ತು ಆತನ ಸಹಚರನನ್ನು ಝಾನ್ಸಿಯಲ್ಲಿ ಕೊಲ್ಲಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ನಕಲಿ ಎನ್‌ಕೌಂಟರ್ (Fake Encounter) ನಡೆಸಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಗುರುವಾರ ಆರೋಪಿಸಿದ್ದಾರೆ. ಉತ್ತರ ಪ್ರದೇಶವನ್ನು (Uttar Pradesh) ಕಾಡುತ್ತಿರುವ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಆಡಳಿತ ಪಕ್ಷ ಯತ್ನಿಸುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರಕ್ಕೆ ನ್ಯಾಯಾಲಯಗಳಲ್ಲಿ ನಂಬಿಕೆಯಿಲ್ಲ. ಅದು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುತ್ತಿದೆ. ಅಧಿಕಾರದಲ್ಲಿರುವವರು ಯಾರು ಸರಿ ಅಥವಾ ತಪ್ಪು ಎಂದು ತೀರ್ಪು ನೀಡುವುದು ಮತ್ತು ಯಾರು ಬದುಕಬೇಕು ಅಥವಾ ಸಾಯಬೇಕು ಎಂದು ನಿರ್ಧರಿಸುವುದು ಸರಿಯಲ್ಲ ಎಂದಿದ್ದಾರೆ ಅಖಿಲೇಶ್.

ನಕಲಿ ಎನ್‌ಕೌಂಟರ್‌ಗಳ ಮೂಲಕ ಬಿಜೆಪಿ ಸರ್ಕಾರವು ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಬಿಜೆಪಿಗೆ ನ್ಯಾಯಾಲಯಗಳ ಮೇಲೆ ನಂಬಿಕೆ ಇಲ್ಲ. ಇಂದಿನ ಮತ್ತು ಇತ್ತೀಚಿನ ಎನ್‌ಕೌಂಟರ್‌ಗಳ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಮತ್ತು ಅಪರಾಧಿಗಳನ್ನು ಬಿಡಬಾರದು. ಅಧಿಕಾರದಲ್ಲಿರುವವರಿಗೆ ಯಾವುದು ಸರಿ ಅಥವಾ ತಪ್ಪು ಎಂದು ನಿರ್ಧರಿಸುವ ಹಕ್ಕಿಲ್ಲ. ಬಿಜೆಪಿ ಸಾಮರಸ್ಯಕ್ಕೆ ವಿರುದ್ಧವಾಗಿದೆ ಎಂದು ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ವಾಂಟೆಡ್ ಆಗಿದ್ದ ಅತೀಕ್ ಅಹ್ಮದ್ ಅವರ ಪುತ್ರ ಅಸಾದ್ ಮತ್ತು ಸಹಚರನ ಹತ್ಯೆಯ ಕುರಿತು ಮಾಜಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಅಸಾದ್ ಮತ್ತು ಗುಲಾಮ್ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಝಾನ್ಸಿಯಲ್ಲಿ ವಿಶೇಷ ಕಾರ್ಯಪಡೆ ತಂಡವು ಅವರನ್ನು ತಡೆದಿತು. ಅವರು ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದು ಪ್ರತೀಕಾರದ ಗುಂಡಿನ ದಾಳಿಯಲ್ಲಿ ಕೊಲ್ಲಲ್ಪಟ್ಟರು. ಇವರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿGajendra Singh Shekhawat: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬಂಧನಕ್ಕೆ ರಾಜಸ್ಥಾನ ಹೈಕೋರ್ಟ್ ತಡೆಯಾಜ್ಞೆ

ಅದೇ ಕೊಲೆ ಪ್ರಕರಣದಲ್ಲಿ ಅಹ್ಮದ್‌ನನ್ನು ಪ್ರಯಾಗ್‌ರಾಜ್‌ನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ದಿನದಂದು ಎನ್‌ಕೌಂಟರ್ ನಡೆದಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. 2005ರಲ್ಲಿ ಆಗಿನ ಬಿಎಸ್‌ಪಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್‌ ಪಾಲ್‌ ಮತ್ತು ಆತನ ಇಬ್ಬರು ಪೊಲೀಸ್‌ ಭದ್ರತಾ ಸಿಬ್ಬಂದಿಯನ್ನು ಈ ವರ್ಷದ ಫೆಬ್ರುವರಿ 24ರಂದು ಪ್ರಯಾಗ್‌ರಾಜ್‌ನ ಧೂಮಂಗಂಜ್‌ ಪ್ರದೇಶದಲ್ಲಿನ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Thu, 13 April 23

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್