AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ChatGPT ಬಳಸಿ ಪ್ರಾಂಕ್ ಮಾಡೋ ಮುನ್ನ ಎಚ್ಚರ! ಎಐ ಬಳಸಿ ನಕಲಿ ಫ್ಲೈಟ್ ಸೃಷ್ಟಿದಿದ ವ್ಯಕ್ತಿ ಮೇಲೆ ಎಫ್​ಐಆರ್

ಚಾಟ್‌ಜಿಪಿಟಿ (ChatGPT) ಬಳಸಿ ನಕಲಿ ವಿಮಾನ ಟಿಕೆಟ್ ಸೃಷ್ಟಿಸಿದ ಆರೋಪದ ಮೇಲೆ ಶಂಶಾಬಾದ್ ವಿಮಾನ ನಿಲ್ದಾಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ನೇಹಿತನೊಬ್ಬ ತಮಾಷೆಗಾಗಿ ನಿರ್ಮಿಸಿಕೊಟ್ಟಿದ್ದ ಈ ನಕಲಿ ಟಿಕೆಟ್ ಹಿಡಿದು ಗೋವಾಕ್ಕೆ ಹೊರಟಿದ್ದ ಪ್ರಯಾಣಿಕ ಭದ್ರತಾ ಸಿಬ್ಬಂದಿಯ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. AI ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸುವುದು ಗಂಭೀರ ಅಪರಾಧವಾಗಿದ್ದು, ಪೊಲೀಸರು ಫೋರ್ಜರಿ ಕಾಯ್ದೆಯಡಿ ನಕಲಿ ಟಿಕೆಟ್ ಸೃಷ್ಟಿಸಿದ ಸ್ನೇಹಿತನ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ChatGPT ಬಳಸಿ ಪ್ರಾಂಕ್ ಮಾಡೋ ಮುನ್ನ ಎಚ್ಚರ! ಎಐ ಬಳಸಿ ನಕಲಿ ಫ್ಲೈಟ್ ಸೃಷ್ಟಿದಿದ ವ್ಯಕ್ತಿ ಮೇಲೆ ಎಫ್​ಐಆರ್
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Aug 04, 2026 | 1:13 PM

Share

ಮುಖ್ಯಾಂಶಗಳು

  • ಚಾಟ್‌ಜಿಪಿಟಿ ಬಳಸಿ ನಕಲಿ ಫ್ಲೈಟ್ ಟಿಕೆಟ್ ಸೃಷ್ಟಿಸಿದ ಆರೋಪದ ಮೇಲೆ ಪ್ರಕರಣ ದಾಖಲು.
  • ಶಂಶಾಬಾದ್ ವಿಮಾನ ನಿಲ್ದಾಣದ ಅಧಿಕಾರಿಗಳು ತಪಾಸಣೆ ನಡೆಸಿ ನಕಲಿ ಟಿಕೆಟ್ ಪತ್ತೆ ಮಾಡಿದರು.
  • ಸ್ನೇಹಿತನ ವಿರುದ್ಧ ಫೋರ್ಜರಿ ಹಾಗೂ ವಂಚನೆ ಕಾಯ್ದೆಯಡಿ ಶಂಶಾಬಾದ್ ಪೊಲೀಸರು ಕೇಸ್ ಜಡಿದರು.

ಹೈದರಾಬಾದ್, ಆಗಸ್ಟ್ 04: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವಾದ ಚಾಟ್‌ಜಿಪಿಟಿ (ChatGPT) ತಮಾಷೆಗೆ ಅಥವಾ ದುರ್ಬಳಕೆಗೆ ಬಳಸಿಕೊಂಡರೆ ಎಂತಹ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಚಾಟ್‌ಜಿಪಿಟಿ ಬಳಸಿ ನಕಲಿ ವಿಮಾನ ಟಿಕೆಟ್ (Fake Flight Ticket) ಸೃಷ್ಟಿಸಿದ ಆರೋಪದ ಮೇಲೆ ಶಂಶಾಬಾದ್ ಪೊಲೀಸರು ಫೋರ್ಜರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏನಿದು ಘಟನೆ?

ಅಸ್ಲಂ ಎಂಬ ವ್ಯಕ್ತಿ ಹೈದರಾಬಾದ್‌ನ ಶಂಶಾಬಾದ್ (ರಾಜೀವ್ ಗಾಂಧಿ ಇಂಟರ್ನ್ಯಾಷನಲ್) ವಿಮಾನ ನಿಲ್ದಾಣದಿಂದ ಗೋವಾಕ್ಕೆ ಪ್ರಯಾಣಿಸಲು ಆಗಮಿಸಿದ್ದ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ಟಿಕೆಟ್ ಪರಿಶೀಲಿಸುವಾಗ ದಾಖಲೆಯಲ್ಲಿದ್ದ ಕೆಲ ವ್ಯತ್ಯಾಸಗಳನ್ನು ಗಮನಿಸಿ ಅನುಮಾನ ವ್ಯಕ್ತಪಡಿಸಿದ್ದಾರೆ. ತೀವ್ರ ತಪಾಸಣೆ ನಡೆಸಿದಾಗ ಅದು ನಕಲಿ ಟಿಕೆಟ್ ಎಂಬುದು ಸ್ಪಷ್ಟವಾಗಿದೆ.

ವಿಚಾರಣೆ ವೇಳೆ ಅಸ್ಲಂ, ಈ ಟಿಕೆಟ್‌ ಅನ್ನು ತಮ್ಮ ಸ್ನೇಹಿತ ಚಾಟ್‌ಜಿಪಿಟಿ (ChatGPT) ಮೂಲಕ ಕ್ರಿಯೇಟ್ ಮಾಡಿ ಕೊಟ್ಟಿದ್ದಾಗಿ ತಿಳಿಸಿದ್ದಾನೆ. ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿದ ದೂರಿನನ್ವಯ ಶಂಶಾಬಾದ್ ಪೊಲೀಸರು ದಾಖಲೆ ನಕಲು (Forgery) ಮತ್ತು ವಂಚನೆ ಕಾಯ್ದೆಯಡಿ ನಕಲಿ ಟಿಕೆಟ್ ತಯಾರಿಸಿದ ಸ್ನೇಹಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

AI ಬಳಸುವಾಗ ಎಚ್ಚರ

ಚಾಟ್‌ಜಿಪಿಟಿ ಅಥವಾ ಇತರೆ AI ಟೂಲ್‌ಗಳನ್ನು ಬಳಸಿ ನಕಲಿ ಟಿಕೆಟ್‌ಗಳು, ಗುರುತಿನ ಚೀಟಿಗಳು ಅಥವಾ ಯಾವುದೇ ಅಧಿಕೃತ ದಾಖಲೆಗಳನ್ನು ಸೃಷ್ಟಿಸುವುದು ಅಥವಾ ಬಳಸುವುದು ಭಾರತೀಯ ದಂಡ ಸಂಹಿತೆ (IPC/BNS) ಮತ್ತು ಮಾಹಿತಿ ತಂತ್ರಜ್ಞಾನ (IT) ಕಾಯ್ದೆಯಡಿ ಗಂಭೀರ ಅಪರಾಧವಾಗಿದೆ. ತಮಾಷೆ ಅಥವಾ ‘ಪ್ರಾಂಕ್’ ಹೆಸರಿನಲ್ಲಿ ಇಂತಹ ಕೃತ್ಯ ಎಸಗಿದರೂ ಜೈಲು ಶಿಕ್ಷೆ ಮತ್ತು ದಂಡ ಎದುರಿಸಬೇಕಾಗಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್