ನಕಲಿ ಶಿವಸೇನೆಯವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ: ನರೇಂದ್ರ ಮೋದಿ

ಲೋಕಸಭಾ ಚುನಾವಣೆ ನಡುವೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಹಾರಾಷ್ಟ್ರದಲ್ಲಿ ಬೃಹರ್ ರ್ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್​ ಜತೆಗೆ ಶಿವಸೇನೆಯನ್ನು ತರಾಟೆಗೆ ತೆಗೆದುಕೊಂಡರು.

Follow us
ನಯನಾ ರಾಜೀವ್
|

Updated on: May 10, 2024 | 2:14 PM

‘‘ನಕಲಿ ಶಿವಸೇನೆ(Shiv Sena)ಯವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ’’ ಎಂದು ನರೇಂದ್ರ ಮೋದಿ ಕಿಡಿ ಕಾರಿದ್ದಾರೆ. ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(Narendra Modi), ಕಾಂಗ್ರೆಸ್​(Congress) ಒಂದೆಡೆ ಪ್ರಧಾನಿ ಮೋದಿ ನಿಮ್ಮನ್ನು ಸಮಾಧಿ ಮಾಡುತ್ತಾರೆ ಎಂದು ಹೇಳಿಕೆ ನೀಡುತ್ತಾರೆ ಇನ್ನೊಂದೆಡೆ ನಕಲಿ ಶಿವಸೇನೆಯವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದೆ. ಮೋದಿಯನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ ಎಂದರು.

ನಕಲಿ ಶಿವಸೇನೆಯ ರಾಜಕೀಯ ಭವಿಷ್ಯ ನೆಲಕಚ್ಚಿದೆ. ದೇಶದ ತಾಯಂದಿರು ಮತ್ತು ಸಹೋದರಿಯರು ಮೋದಿಯನ್ನು ರಕ್ಷಿಸುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಶಿವಸೇನೆಯ ನಕಲಿ ಸದಸ್ಯರು ಬಾಂಬ್ ಸ್ಫೋಟದ ಅಪರಾಧಿಗಳನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ.

ಮೇವು ಹಗರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಬಿಹಾರದಲ್ಲಿ ತಿರುಗಾಡುತ್ತಿದ್ದಾರೆ ಎಂದರು. ಈ ಜನರು ಬಾಳಾಸಾಹೇಬ್ ಠಾಕ್ರೆ ಅವರನ್ನು ನೋಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು.

ನಾನು ಕಾಂಗ್ರೆಸ್​ನಂತಹ ರಾಜಮನೆತನದಂತಹ ದೊಡ್ಡ ಕುಟುಂಬದಿಂದ ಬಂದವನಲ್ಲ, ನಾನು ಬಡತನದಲ್ಲಿ ಬೆಳೆದೆ. ನೀವು ಎಷ್ಟು ಕಷ್ಟ ಅನುಭವಿಸಿದ್ದೀರಿ ಎಂಬುದು ನನಗೆ ತಿಳಿದಿದೆ. ಅನೇಕ ಬುಡಕಟ್ಟು ಕುಟುಂಬಗಳಿಗೆ ಶಾಶ್ವತ ಮನೆಗಳಿರಲಿಲ್ಲ, ದೇಶಕ್ಕೆ ಸ್ವಾತಂತ್ರ್ಯ ಬಂದು 60 ವರ್ಷ ಕಳೆದರೂ ಹಳ್ಳಿಗಳಿಗೆ ವಿದ್ಯುತ್ ಬಂದಿರಲಿಲ್ಲ.

ಮತ್ತಷ್ಟು ಓದಿ:26/11 Mumbai Terror Attack: ಹೇಮಂತ್ ಕರ್ಕರೆಯನ್ನು ಕೊಂದಿದ್ದು ಪೊಲೀಸರು, ಕಸಬ್​ ನಿರಪರಾಧಿ ಎಂದ ಕಾಂಗ್ರೆಸ್​ ನಾಯಕ

ಪ್ರತಿ ಬಡವರು, ಬುಡಕಟ್ಟು ಜನಾಂಗದವರಿಗೂ ಮನೆ ನೀಡಲಾಗುವುದು, ಪ್ರತಿ ಬುಡಕಟ್ಟು ಜನಾಂಗದವರ ಮನೆಗೆ ನೀರು, ಪ್ರತಿ ಹಳ್ಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಮೋದಿ ಹೇಳಿದರು.

ಸಂಜಯ್ ರಾವತ್ ಏನು ಹೇಳಿದ್ದರು? ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟ್ರದಲ್ಲಿ ಮತ್ತು ಔರಂಗಜೇಬ್ ಗುಜರಾತ್‌ನಲ್ಲಿ ಜನಿಸಿದರು. ಪ್ರಧಾನಿ ಮತ್ತು ಗೃಹ ಸಚಿವರನ್ನು ಕೈಗಾರಿಕೋದ್ಯಮಿಗಳು ಎಂದು ಬಣ್ಣಿಸಿದ ರಾವತ್, ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೂಡ ಗುಜರಾತ್‌ನಲ್ಲಿ ಜನಿಸಿದರು ಎಂದು ಹೇಳಿದ್ದರು.

ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟ್ರದಲ್ಲಿ ಜನಿಸಿದರು, ಆದ್ದರಿಂದ ಮಹಾರಾಷ್ಟ್ರಕ್ಕೆ ತನ್ನದೇ ಆದ ಇತಿಹಾಸವಿದೆ. ಈ ಔರಂಗಜೇಬ್ ಹುಟ್ಟಿದ್ದು ಗುಜರಾತ್ ನಲ್ಲಿ, ಇತಿಹಾಸ ನೋಡಿ. ಒಮ್ಮೆ ನಾವು ಔರಂಗಜೇಬನನ್ನು ಮಹಾರಾಷ್ಟ್ರದಿಂದ ಓಡಿಸಿದ್ದೇವೆ ಎಂಬುದನ್ನು ನೆನಪಿನಲ್ಲಿಡಿ. ಔರಂಗಜೇಬ್ 27 ವರ್ಷಗಳ ಕಾಲ ಮಹಾರಾಷ್ಟ್ರವನ್ನು ವಶಪಡಿಸಿಕೊಳ್ಳಲು ಹೋರಾಡುತ್ತಲೇ ಇದ್ದ. ಕೊನೆಗೆ ಅದೇ ಔರಂಗಜೇಬನನ್ನು ಸಮಾಧಿ ಮಾಡಿದೆವು ಎಂದು ಹೇಳಿದ್ದಾರೆ.

ಹೇಮಂತ್ ಕರ್ಕರೆಯನ್ನು ಕೊಂದಿದ್ದು ಕಸಬ್ ಅಲ್ಲ

ಹೇಮಂತ್ ಕರ್ಕರೆಯನ್ನು ಕೊಂದಿದ್ದು ಕಸಬ್​ ಅಲ್ಲ ಆರ್​ಎಸ್​ಎಸ್​ ಸಂಬಂಧಿತ ಪೊಲೀಸರು ಎಂದಿದ್ದ ವಿಜಯ್ ವಾಡೆತ್ತಿವಾರ್ ಮುಂಬೈ ಉಗ್ರ ದಾಳಿಯಲ್ಲಿ ಹೇಮಂತ್ ಕರ್ಕರೆಯನ್ನು ಕೊಂದಿದ್ದು ಕಸಬ್ ಅಲ್ಲ ಆರ್​ಎಸ್​ಎಸ್​ಗೆ ಸಂಬಂಧಿಸಿದ್ದ ಪೊಲೀಸರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅದಕ್ಕೆ ಸಂಜಯ್ ರಾವತ್ ಕಸಬ್​ನ ಬುಲೆಟ್ ಕರ್ಕೆರೆಗೆ ತಗುಲಿತೋ ಇಲ್ಲವೋ ತಿಳಿದಿಲ್ಲ ಆದರೆ ಹೇಮಂತ್ ರಣರಂಗದಲ್ಲಿದ್ದರು ಎಂದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್