ಇಸ್ಲಾಮಿಕ್ ಮೂಲಭೂತವಾದಿಗಳಿಂದ ಬೆದರಿಕೆಗಳು ಬರುತ್ತಿವೆ, ನನ್ನ ಕುಟುಂಬ ಅಪಾಯದಲ್ಲಿದೆ: ನವೀನ್ ಜಿಂದಾಲ್

| Updated By: ರಶ್ಮಿ ಕಲ್ಲಕಟ್ಟ

Updated on: Jun 12, 2022 | 7:23 PM

"ಇದೀಗ ನನಗೆ ಮತ್ತು ನನ್ನ ಕುಟುಂಬ ಸದಸ್ಯರನ್ನು ಕೊಲ್ಲುವ ಬೆದರಿಕೆಗಳು ಬಂದಿವೆ" ಎಂದು ಅವರು ಟ್ವೀಟ್ ಮಾಡಿದ್ದು "ನಾನು ತಕ್ಷಣ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.

ಇಸ್ಲಾಮಿಕ್ ಮೂಲಭೂತವಾದಿಗಳಿಂದ ಬೆದರಿಕೆಗಳು ಬರುತ್ತಿವೆ, ನನ್ನ ಕುಟುಂಬ ಅಪಾಯದಲ್ಲಿದೆ: ನವೀನ್ ಜಿಂದಾಲ್
ನವೀನ್ ಕುಮಾರ್ ಜಿಂದಾಲ್
Follow us on

ದೆಹಲಿ: ಪ್ರವಾದಿ ಮೊಹಮ್ಮದ್ (Prophet Muhammad) ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಾಗಿ ಬಿಜೆಪಿಯಿಂದ (BJP) ಉಚ್ಚಾಟಿತ ದೆಹಲಿ ಘಟಕದ ಮಾಜಿ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ (Naveen Kumar Jindal) ಅವರು ತಮ್ಮ ಕುಟುಂಬವು “ಇಸ್ಲಾಮಿಕ್ ಮೂಲಭೂತವಾದಿಗಳಿಂದ” ದಾಳಿಗೆ ಒಳಗಾಗುವ ಅಪಾಯದಲ್ಲಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ತನ್ನ ಅಥವಾ ಅವರ ಕುಟುಂಬದ ಸದಸ್ಯರ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳದಂತೆ ಜನರಲ್ಲಿ ವಿನಂತಿಸಿದ ನವೀನ್ ನನ್ನ ವಿನಂತಿಗಳ ಹೊರತಾಗಿಯೂ, ಅನೇಕ ಜನರು ಸಾಮಾಜಿಕ ಮಾಧ್ಯಮದಲ್ಲಿ ನನ್ನ ನಿವಾಸದ ವಿಳಾಸವನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇಸ್ಲಾಮಿಕ್ ಮೂಲಭೂತವಾದಿಗಳಿಂದ ನನ್ನ ಕುಟುಂಬದ ಜೀವಕ್ಕೆ ಅಪಾಯವಿದೆ ಎಂದು ಜಿಂದಾಲ್ ಹಿಂದಿಯಲ್ಲಿ ಬರೆದಿದ್ದಾರೆ. ಟ್ವೀಟ್​​ನಲ್ಲಿ ದೆಹಲಿ ಪೊಲೀಸರನ್ನು ಟ್ಯಾಗ್ ಮಾಡಿದ ಅವರು ತನಗೆ ಕೊಲೆ ಬೆದರಿಕೆಗಳು ಬರುತ್ತಿರುವ ಫೋನ್ ಸಂಖ್ಯೆಯ ಸ್ಕ್ರೀನ್‌ಶಾಟ್ ಅನ್ನು ಸಹ ಹಂಚಿಕೊಂಡಿದ್ದಾರೆ. “ಇದೀಗ ನನಗೆ ಮತ್ತು ನನ್ನ ಕುಟುಂಬ ಸದಸ್ಯರನ್ನು ಕೊಲ್ಲುವ ಬೆದರಿಕೆಗಳು ಬಂದಿವೆ” ಎಂದು ಅವರು ಟ್ವೀಟ್ ಮಾಡಿದ್ದು “ನಾನು ತಕ್ಷಣ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.

ಕಳೆದ ವಾರ ಪ್ರವಾದಿ ಮುಹಮ್ಮದ್ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಕ್ಕಾಗಿ ಜಿಂದಾಲ್ ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ವಕ್ತಾರ ನೂಪುರ್ ಶರ್ಮಾ ಅವರನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕಲಾಯಿತು. ಅವರ ಹೇಳಿಕೆಗಳನ್ನು ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆದಿದ್ದುನೂರಾರು ಜನರು ಅವರ ಬಂಧನಕ್ಕೆ ಒತ್ತಾಯಿಸಿದರು.

ಇದನ್ನೂ ಓದಿ
Nupur Sharma controversy: ನೂಪುರ ಶರ್ಮಾ ಆಕ್ಷೇಪಾರ್ಹ ಮಾತು, ದಿಢೀರ್ ಪ್ರತಿಭಟನೆಯ ಕಾವು ತಣ್ಣಗಾಗ್ತಿದೆ, ದೇಶದಲ್ಲಿ ಇಂದಿನ ಪರಿಸ್ಥಿತಿ ಹೇಗಿದೆ?
ಬಿಜೆಪಿ ನಾಯಕರು ಮಾಡಿದ ಪಾಪಗಳಿಗೆ ಜನಸಾಮಾನ್ಯರು ಯಾಕೆ ಕಷ್ಟಪಡಬೇಕು? ಮಮತಾ ಬ್ಯಾನರ್ಜೀ
ಪ್ರವಾದಿ ಬಗ್ಗೆ ನೂಪುರ್ ಶರ್ಮಾರ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ದೆಹಲಿ ಜಾಮಾ ಮಸೀದಿ ಬಳಿ ಬೃಹತ್ ಪ್ರತಿಭಟನೆ


ಶುಕ್ರವಾರ, ಪುಣೆ ಸಿಟಿ ಪೊಲೀಸರು ಜಿಂದಾಲ್ ಅವರ ಆಕ್ಷೇಪಾರ್ಹ ಹೇಳಿಕೆಗಳಿಗಾಗಿ ಕೊಂಡ್ವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಪ್ರಕರಣ ದಾಖಲಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ