ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ಸಾವು, ಎಲ್ಲಿ?

ಭೋಪಾಲ್​: ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಮಧ್ಯ ಪ್ರದೇಶದ ಟಿಕಂಗಢ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಗು ಸೇರಿ ಕುಟುಂಬದ ಐವರ ಮೃತದೇಹಗಳು ಅವರ ನಿವಾಸದಲ್ಲೇ ಪತ್ತೆಯಾಗಿದೆ. ಮೃತರನ್ನು ನಿವೃತ್ತ ರಾಜ್ಯ ಸರ್ಕಾರದ ಉದ್ಯೋಗಿ ಧರಮ್​ದಾಸ್​ ಸೋನಿ (62), ಪತ್ನಿ ಪೂನಾ (55), ದಂಪತಿಯ ಪುತ್ರ ಮನೋಹರ (27), ಸೊಸೆ ಸೋನಂ (25) ಹಾಗೂ ಮನೋಹರ ದಂಪತಿಯ ನಾಲ್ಕು ವರ್ಷದ ಮಗ ಎಂದು ಗುರುತಿಸಲಾಗಿದೆ. ಕುಟುಂಬದವರು ತಮ್ಮ ನಿವಾಸದಿಂದ ಇಂದು ಹೊರಬರದ […]

ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ಸಾವು, ಎಲ್ಲಿ?
Follow us
KUSHAL V
|

Updated on:Aug 23, 2020 | 6:20 PM

ಭೋಪಾಲ್​: ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಮಧ್ಯ ಪ್ರದೇಶದ ಟಿಕಂಗಢ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಗು ಸೇರಿ ಕುಟುಂಬದ ಐವರ ಮೃತದೇಹಗಳು ಅವರ ನಿವಾಸದಲ್ಲೇ ಪತ್ತೆಯಾಗಿದೆ.

ಮೃತರನ್ನು ನಿವೃತ್ತ ರಾಜ್ಯ ಸರ್ಕಾರದ ಉದ್ಯೋಗಿ ಧರಮ್​ದಾಸ್​ ಸೋನಿ (62), ಪತ್ನಿ ಪೂನಾ (55), ದಂಪತಿಯ ಪುತ್ರ ಮನೋಹರ (27), ಸೊಸೆ ಸೋನಂ (25) ಹಾಗೂ ಮನೋಹರ ದಂಪತಿಯ ನಾಲ್ಕು ವರ್ಷದ ಮಗ ಎಂದು ಗುರುತಿಸಲಾಗಿದೆ.

ಕುಟುಂಬದವರು ತಮ್ಮ ನಿವಾಸದಿಂದ ಇಂದು ಹೊರಬರದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಮನೆಯ ಬಾಗಿಲು ಒಳಗಿನಿಂದ ಲಾಕ್​ ಆಗಿರುವುದಾಗಿ ಕಂಡುಬಂದಿದೆ. ಬೀಗ ಮುರಿದು ಒಳಹೊಕ್ಕಾಗ ಮೃತದೇಹಗಳು ಪತ್ತೆಯಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಮನೋಹರ, ಆತನ ಪತ್ನಿ ಸೋನಂ ಮತ್ತು ಮಗುವಿನ ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಕುಟುಂಬದಲ್ಲಿ ಆಸ್ತಿ ವಿವಾದದ ಕುರಿತು ಕಲಹವಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಾಸ್ಪದ ಸನ್ನಿವೇಶದ ಕುರಿತು ತನಿಖೆ ಆರಂಭಿಸಿದ್ದಾರೆ.

Published On - 6:17 pm, Sun, 23 August 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್