ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದ ಪ್ರಧಾನಿ; ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ, ನಡ್ಡಾಗೆ ಸನ್ಮಾನ

ಈ ಬಾರಿಯ ಚುನಾವಣೆಯಲ್ಲಿ ಸಂಸದರು ಮತ್ತು ಶಾಸಕರ ಮಕ್ಕಳಿಗೆ ಬಿಜೆಪಿಯಿಂದ ಟಿಕೆಟ್ ಸಿಗದಿರುವುದಕ್ಕೆ ನಾನೇ ಜವಾಬ್ದಾರಿ. ಬಿಜೆಪಿ ಎಂದಿಗೂ ಕುಟುಂಬ ರಾಜಕಾರಣಕ್ಕೆ ಪ್ರೋತ್ಸಾಹ ಕೊಡುವುದಿಲ್ಲ ಎಂದು ನರೇಂದ್ರ ಮೋದಿ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದ ಪ್ರಧಾನಿ; ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ, ನಡ್ಡಾಗೆ ಸನ್ಮಾನ
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ನರೇಂದ್ರ ಮೋದಿ, ಜೆ.ಪಿ. ನಡ್ಡಾಗೆ ಸನ್ಮಾನ
Follow us
| Updated By: ಸುಷ್ಮಾ ಚಕ್ರೆ

Updated on: Mar 15, 2022 | 1:49 PM

ನವದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ (BJP) ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಇಂದು ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರನ್ನು ಸನ್ಮಾನಿಸಲಾಯಿತು. ಹಾಗೇ, ಬಿಜೆಪಿ ಸಂಸದರು ಎದ್ದು ನಿಂತು ಚಪ್ಪಾಳೆ ತಟ್ಟಿ, ಜೈಕಾರ ಹಾಕುವ ಮೂಲಕ ಜೆ.ಪಿ. ನಡ್ಡಾ ಮತ್ತು ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಬಿಜೆಪಿಯು ಕುಟುಂಬ ರಾಜಕಾರಣದ ವಿರುದ್ಧವಾಗಿದೆ ಎಂದು ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ (Family Politics) ಅವಕಾಶವಿಲ್ಲ. ಬೇರೆ ರಾಜಕೀಯ ಪಕ್ಷಗಳಲ್ಲಿರುವ ವಂಶ ಪಾರಂಪರಿಕ ರಾಜಕಾರಣವನ್ನು ಕೂಡ ಬಿಜೆಪಿ ವಿರೋಧಿಸುತ್ತದೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಸಂಸದರ ಮಕ್ಕಳಿಗೆ ಟಿಕೆಟ್ ಸಿಗದಿರಲು ನಮ್ಮ ಪಕ್ಷದ ಈ ನಿಲುವೇ ಕಾರಣ ಎಂದು ಹೇಳಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಸಂಸದರು ಮತ್ತು ಶಾಸಕರ ಮಕ್ಕಳಿಗೆ ಬಿಜೆಪಿಯಿಂದ ಟಿಕೆಟ್ ಸಿಗದಿರುವುದಕ್ಕೆ ನಾನೇ ಜವಾಬ್ದಾರಿ. ಬಿಜೆಪಿ ಎಂದಿಗೂ ಕುಟುಂಬ ರಾಜಕಾರಣಕ್ಕೆ ಪ್ರೋತ್ಸಾಹ ಕೊಡುವುದಿಲ್ಲ. ವಂಶಾಡಳಿತ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾದ ಕಾರಣ ಅದರ ವಿರುದ್ಧ ಹೋರಾಡಬೇಕು ಎಂದು ನರೇಂದ್ರ ಮೋದಿ ತಮ್ಮ ಪಕ್ಷದ ಸಂಸದರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ಸಿನಿಮಾಗಳನ್ನು ಹೆಚ್ಚಾಗಿ ಮಾಡಬೇಕು. ಈ ಸಿನಿಮಾ ಒಂದು ಅದ್ಭುತವಾದ ಸಿನಿಮಾ ಎಂಬುದರಲ್ಲಿ ಸಂದೇಹವಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ನಿರ್ಣಾಯಕವಾಗಿರುವ ಉತ್ತರ ಪ್ರದೇಶ ಸೇರಿದಂತೆ ನಾಲ್ಕರಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಂಡಿದೆ. ಬಿಜೆಪಿಯು ಕಡಿಮೆ ಮತಗಳನ್ನು ಪಡೆದಿರುವ ಕ್ಷೇತ್ರಗಳಲ್ಲಿ ಅದರ ಹಿಂದಿನ ಕಾರಣಗಳನ್ನು ಗುರುತಿಸುವಂತೆ ಮೋದಿ ಸಂಸದರಿಗೆ ಸೂಚನೆ ನೀಡಿದ್ದಾರೆ.

ಈ ಬಿಜೆಪಿ ಸಂಸದೀಯ ಸಭೆಯ ಆರಂಭದಲ್ಲಿ ಬಿಜೆಪಿ ಸಂಸದರು ಫೆಬ್ರವರಿ 6ರಂದು ನಿಧನರಾದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಎರಡು ನಿಮಿಷಗಳ ಕಾಲ ಮೌನ ಆಚರಿಸಿದರು. ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಬಲಿಯಾದ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮತ್ತು ಕರ್ನಾಟಕದಲ್ಲಿ ಹಿಜಾಬ್ ವಿವಾದದ ಮಧ್ಯೆ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರಿಗೂ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಇದನ್ನೂ ಓದಿ: Yogi meets Modi ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ಯೋಗಿ ಆದಿತ್ಯನಾಥ, ಉತ್ತರಪ್ರದೇಶದ ನೂತನ ಸರ್ಕಾರದ ಬಗ್ಗೆ ಚರ್ಚೆ

ಪಂಜಾಬ್​​ನಲ್ಲಿ ಗೆದ್ದ ಆಮ್​ ಆದ್ಮಿ ಪಾರ್ಟಿಗೆ ಹರ್ಯಾಣದ ಹಲವು ಬಿಜೆಪಿ, ಕಾಂಗ್ರೆಸ್​ ನಾಯಕರ ಸೇರ್ಪಡೆ; ಕೇಜ್ರಿವಾಲ್​​ಗೆ ಜಾಕ್​ಪಾಟ್​

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ