Farm Laws: 3 ಕೃಷಿ ಕಾಯ್ದೆಗಳ ರದ್ಧತಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ

| Updated By: ಸುಷ್ಮಾ ಚಕ್ರೆ

Updated on: Dec 01, 2021 | 8:00 PM

ಕೇಂದ್ರ ಸರ್ಕಾರ ಕೃಷಿ ಕಾನೂನುಗಳ ರದ್ದತಿ ಮಸೂದೆ- 2021ಯನ್ನು ಔಪಚಾರಿಕವಾಗಿ ಹಿಂತೆಗೆದುಕೊಳ್ಳಲು ರಾಷ್ಟ್ರಪತಿಗಳ ಒಪ್ಪಿಗೆ ಬಾಕಿ ಇತ್ತು. ಇಂದು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ರಾಷ್ಟ್ರಪತಿಗಳು ಒಪ್ಪಿಗೆ ಸೂಚಿಸಿದ್ದು, ಕೃಷಿ ಮಸೂದೆಗಳು ರದ್ದಾಗಿವೆ.

Farm Laws: 3 ಕೃಷಿ ಕಾಯ್ದೆಗಳ ರದ್ಧತಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ
ರಾಮನಾಥ ಕೋವಿಂದ್​
Follow us on

ನವದೆಹಲಿ: ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿದ್ದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿತ್ತು. ಈ ಮೂರು ಕಾಯ್ದೆಗಳನ್ನು ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬುಧವಾರ ಸಹಿ ಹಾಕಿದ್ದಾರೆ. ಸೋಮವಾರದಿಂದ ಸಂಸತ್ ಚಳಿಗಾಲದ ಅಧಿವೇಶನ ಶುರುವಾಗಿದ್ದು, ಕಲಾಪದ ಮೊದಲ ದಿನವೇ ಎರಡೂ ಸದನಗಳಲ್ಲಿ ಧ್ವನಿ ಮತಗಳಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ ಅನುಮೋದನೆ ನೀಡಿತ್ತು.

ಕೇಂದ್ರ ಸರ್ಕಾರ ಕೃಷಿ ಕಾನೂನುಗಳ ರದ್ದತಿ ಮಸೂದೆ- 2021ಯನ್ನು ಔಪಚಾರಿಕವಾಗಿ ಹಿಂತೆಗೆದುಕೊಳ್ಳಲು ರಾಷ್ಟ್ರಪತಿಗಳ ಒಪ್ಪಿಗೆ ಬಾಕಿ ಇತ್ತು. ಇಂದು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ರಾಷ್ಟ್ರಪತಿಗಳು ಒಪ್ಪಿಗೆ ಸೂಚಿಸಿದ್ದು, ಕೃಷಿ ಮಸೂದೆಗಳು ರದ್ದಾಗಿವೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳ ವಿರುದ್ಧ ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರು.

ಸೋಮವಾರ ಚಳಿಗಾಲದ ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಉಭಯ ಸದನಗಳಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷಗಳ ಚರ್ಚೆಯ ಬೇಡಿಕೆಯ ನಡುವೆಯೇ ಲೋಕಸಭೆಯಲ್ಲಿ ನಾಲ್ಕು ನಿಮಿಷಗಳಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಈ ಬಗ್ಗೆ ರಾಜ್ಯಸಭೆಯಲ್ಲಿ ಅಲ್ಪಕಾಲದ ಚರ್ಚೆಯ ನಂತರ ಅಂಗೀಕರಿಸಲಾಯಿತು.

ಒಂದು ವರ್ಷಕ್ಕೂ ಹೆಚ್ಚು ಕಾಲ ದೇಶಾದ್ಯಂತ ನಡೆದ ಬೃಹತ್ ರೈತ ಪ್ರತಿಭಟನೆಯ ಹೃದಯಭಾಗದಲ್ಲಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಉತ್ತರ ಪ್ರದೇಶ ಮತ್ತು ಪಂಜಾಬ್‌ನಂತಹ ರಾಜ್ಯಗಳಲ್ಲಿ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 19ರಂದು ವಾಪಾಸ್​ ಪಡೆದುಕೊಳ್ಳುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಕೃಷಿ ಕಾನೂನು ಹಿಂಪಡೆಯುವ ಮಸೂದೆ ಮಂಡನೆಗೆ ಅಡ್ಡಿ: ವಿರೋಧ ಪಕ್ಷಗಳ ಉದ್ದೇಶ ಪ್ರಶ್ನಿಸಿದ ಸಚಿವ ಪ್ರಲ್ಹಾದ್ ಜೋಶಿ

Farm Laws Repeal Bill 2021 ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ರಾಜ್ಯಸಭೆ ಅಂಗೀಕಾರ

Published On - 7:59 pm, Wed, 1 December 21