ಸಾವಿಗೀಡಾದ ರೈತರಿಗೆ ಸಂದ ಗೌರವ: ಕೃಷಿ ಕಾನೂನು ರದ್ದತಿ ಮಸೂದೆ ಅಂಗೀಕಾರ ಬಗ್ಗೆ ಟಿಕಾಯತ್ ಪ್ರತಿಕ್ರಿಯೆ
ರೈತ ಸಂಘಗಳು ಕೇಂದ್ರದೊಂದಿಗೆ ಮಾತನಾಡದೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ಸ್ಥಳಗಳನ್ನು ಬಿಡುವುದಿಲ್ಲ ಎಂದು ಟಿಕಾಯಕತ್ ನಿನ್ನೆ ಹೇಳಿದ್ದರು. ರೈತ ಸಂಘಗಳು ಈ ಮಾತುಕತೆಗೆ ಮಾರ್ಗಗಳನ್ನು ತೆರೆಯುತ್ತವೆ ಎಂದು ಹೇಳಿದ ಟಿಕಾಯತ್, ರೈತರು ತಮ್ಮನ್ನು ತಲುಪದೆ ತಮ್ಮ ಆಂದೋಲನವನ್ನು ಕೊನೆಗೊಳಿಸಬೇಕೆಂದು ಕೇಂದ್ರ ಬಯಸುತ್ತದೆ ಎಂದಿದ್ದಾರೆ.
ದೆಹಲಿ: ಲೋಕಸಭೆಯು ಸೋಮವಾರ ಸಂಸತ್ತಿನಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 (Farm Laws Repeal Bill, 2021) ಅನ್ನು ಅಂಗೀಕರಿಸುತ್ತಿದ್ದಂತೆ, ಭಾರತೀಯ ಕಿಸಾನ್ ಯೂನಿಯನ್ (BKU) ವಕ್ತಾರ ರಾಕೇಶ್ ಟಿಕಾಯತ್ (Rakesh Tikait)ಇದು ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಾರಂಭವಾದ ಆಂದೋಲನದ ಸಮಯದಲ್ಲಿ ಮರಣ ಹೊಂದಿದ 750 ರೈತರಿಗೆ ಸಂದ ಗೌರವ ಎಂದಿದ್ದಾರೆ. ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ಅಧಿಕೃತವಾಗಿ ಹಿಂಪಡೆಯಲು ಉದ್ದೇಶಿಸಿರುವ ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ಅನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar) ಅವರು ಮಂಡಿಸಿದರು. ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಯಾವುದೇ ಚರ್ಚೆಯಿಲ್ಲದೆ ಮಸೂದೆಯನ್ನು ಅಂಗೀಕರಿಸಲಾಯಿತು. ಕೃಷಿ ಕಾನೂನು ರದ್ದು ಮಾಡುವ ಸರ್ಕಾರದ ಕ್ರಮದ ಬಗ್ಗೆ ಮಾತನಾಡಿದ ಟಿಕಾಯತ್, ರೈತರ ಆಂದೋಲನ ಮುಂದುವರಿಯುತ್ತದೆ. “ಕೃಷಿ ಕಾನೂನು ರದ್ದತಿ ಮಸೂದೆಯು ಆಂದೋಲನದ ಸಮಯದಲ್ಲಿ ಮಡಿದ 750 ರೈತರಿಗೆ ಸಂದ ಗೌರವವಾಗಿದೆ. ಕನಿಷ್ಠ ಬೆಂಬಲ ಬೆಲೆ(MSP) ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ರೈತ ಸಂಘಗಳು ಕೇಂದ್ರದೊಂದಿಗೆ ಮಾತನಾಡದೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ಸ್ಥಳಗಳನ್ನು ಬಿಡುವುದಿಲ್ಲ ಎಂದು ಟಿಕಾಯಕತ್ ನಿನ್ನೆ ಹೇಳಿದ್ದರು. ರೈತ ಸಂಘಗಳು ಈ ಮಾತುಕತೆಗೆ ಮಾರ್ಗಗಳನ್ನು ತೆರೆಯುತ್ತವೆ ಎಂದು ಹೇಳಿದ ಟಿಕಾಯತ್, ರೈತರು ತಮ್ಮನ್ನು ತಲುಪದೆ ತಮ್ಮ ಆಂದೋಲನವನ್ನು ಕೊನೆಗೊಳಿಸಬೇಕೆಂದು ಕೇಂದ್ರ ಬಯಸುತ್ತದೆ ಎಂದಿದ್ದಾರೆ.
ಮೂರು ಕೃಷಿ ಕಾನೂನುಗಳಿಗೆ ಪರಿಹಾರ ಕಂಡುಕೊಂಡಿರುವ ಕೇಂದ್ರವು ಕಳೆದ ವರ್ಷದಲ್ಲಿ ಆಗಿರುವ ಹಾನಿಯ ಬಗ್ಗೆ ಈಗ ಮಾತನಾಡಬೇಕು ಎಂದು ಅವರು ಹೇಳಿದರು. “ಕೇಂದ್ರವು ಮೋಸದ, ಸುಳ್ಳು ಹೇಳಿಕೆಗಳೊಂದಿಗೆ ವಿಷಯವನ್ನು ಇತ್ಯರ್ಥಗೊಳಿಸಲು ಬಯಸಿದರೆ ಸಮಸ್ಯೆ ಕೊನೆಗೊಳ್ಳುವುದಿಲ್ಲ.”
ಏತನ್ಮಧ್ಯೆ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಮಸೂದೆಯ ಮೇಲೆ ಚರ್ಚೆಗೆ ಒತ್ತಾಯಿಸಿದವು. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಆದೇಶ ಇದ್ದಾಗ ಅದು ಸಂಭವಿಸಬಹುದು ಎಂದು ಹೇಳಿದರು.
ಇದನ್ನೂ ಓದಿ: Farm Laws Repeal Bill 2021 ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ಅಂಗೀಕಾರ
ಇದನ್ನೂ ಓದಿ: Farm Laws Repeal Bill 2021 ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ರಾಜ್ಯಸಭೆ ಅಂಗೀಕಾರ