AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಅಮೆರಿಕಕ್ಕೆ ಹೋದರೂ ಬಿಡದ ರಾಕೇಶ್ ಟಿಕಾಯತ್​; ಪ್ರಧಾನಿ ವಿರುದ್ಧ ಜೋ ಬೈಡನ್​ ಬಳಿಯೇ ದೂರು

ಮೂರು ಕೃಷಿ ಕಾಯ್ದೆಗಳ ಬಗ್ಗೆ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಗೊಂದಲ ಸರಿಯಾಗುವವರೆಗೂ ನಾವು ಅನುಷ್ಠಾನಕ್ಕೆ ತರುವುದಿಲ್ಲ ಎಂಬ ಭರವಸೆಯನ್ನೂ ನೀಡಿದೆ.

ಮೋದಿ ಅಮೆರಿಕಕ್ಕೆ ಹೋದರೂ ಬಿಡದ ರಾಕೇಶ್ ಟಿಕಾಯತ್​; ಪ್ರಧಾನಿ ವಿರುದ್ಧ ಜೋ ಬೈಡನ್​ ಬಳಿಯೇ ದೂರು
ರಾಕೇಶ್​ ಟಿಕಾಯತ್​
TV9 Web
| Updated By: Lakshmi Hegde|

Updated on:Sep 24, 2021 | 2:44 PM

Share

ದೆಹಲಿ:  ಪ್ರಧಾನಿ ನರೇಂದ್ರ ಮೋದಿಯವರು ಯುಎಸ್​ ಪ್ರವಾಸ (PM Modi US Visit)ದಲ್ಲಿದ್ದಾರೆ. ನಿನ್ನೆ (ಸೆ.23)ಯೇ ಅಮೆರಿಕಕ್ಕೆ ತೆರಳಿರುವ ಅವರು ಯುಎಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಜಪಾನ್​ ಪ್ರಧಾನಿ ಯೋಶಿಹಿದೆ ಸುಗಾರನ್ನು ಭೇಟಿಯಾಗಿದ್ದಾರೆ. ಇಂದು ಕ್ವಾಡ್​ ಶೃಂಗಸಭೆ (Quad Summit)ಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಯುಎಸ್​ ಪ್ರವಾಸದಲ್ಲಿರುವಾಗ ಇತ್ತ ರೈತ ಮುಖಂಡ ರಾಕೇಶ್​ ಟಿಕಾಯತ್​ ಟ್ವೀಟ್​ ಮಾಡಿ, ಯುಎಸ್ ಅಧ್ಯಕ್ಷ ಜೋ ಬೈಡನ್​ರನ್ನು ಟ್ಯಾಗ್​ ಮಾಡಿ, ತಮ್ಮ ಪ್ರತಿಭಟನೆಯ ಬಗ್ಗೆ ಹೇಳಿದ್ದಾರೆ.  

‘ಡಿಯರ್​ ಪ್ರೆಸಿಡೆಂಟ್​ ಆಫ್​ ಯುಎಸ್​ (@POTUS), ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಅನುಷ್ಠಾನಕ್ಕೆ ತಂದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಾವು ಭಾರತೀಯ ರೈತರು ಕಳೆದ 11 ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ಈ 11 ತಿಂಗಳುಗಳಲ್ಲಿ 700 ರೈತರು ಮೃತಪಟ್ಟಿದ್ದಾರೆ. ನಾವು ಉಳಿಯಬೇಕೆಂದರೆ ಈ ಕರಾಳ ಕಾನೂನುಗಳನ್ನು ಹಿಂಪಡೆಯಬೇಕು. ನಿಮ್ಮನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾದಾಗ ಈ ಬಗ್ಗೆ ಅವರಿಗೆ ಹೇಳಿ. ನಮ್ಮ ಆತಂಕವನ್ನು ನೀವಾದರೂ ಅವರಿಗೆ ತಿಳಿಸಿ’ ಎಂದು ರಾಕೇಶ್​ ಟಿಕಾಯತ್​ ಟ್ವೀಟ್​ ಮಾಡಿದ್ದಾರೆ.  

ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೊಳಿಸಿದ ಕೃಷಿ ಕಾನೂನುಗಳು ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ತೆಗೆದುಹಾಕುತ್ತವೆ. ಈ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ರೈತರು ದೆಹಲಿಯ ಗಡಿ ಭಾಗಗಳಲ್ಲಿ ಬಹುತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 11 ಸುತ್ತಿನ ಮಾತುಕತೆಯೂ ವಿಫಲವಾಗಿದೆ. ಹೀಗೆ ಪ್ರತಿಭಟನೆ ನಡೆಸುತ್ತಿರುವ ರೈತಸಂಘಟನೆಗಳಲ್ಲಿ ಪ್ರಮುಖವಾದದ್ದು ಭಾರತೀಯ ಕಿಸಾನ್​ ಯೂನಿಯನ್​ (BKU). ಇದರ ವಕ್ತಾರರಾಗಿರುವ ರಾಕೇಶ್​ ಟಿಕಾಯತ್​ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಮೂರು ಕೃಷಿ ಕಾಯ್ದೆಗಳ ಬಗ್ಗೆ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಗೊಂದಲ ಸರಿಯಾಗುವವರೆಗೂ ನಾವು ಅನುಷ್ಠಾನಕ್ಕೆ ತರುವುದಿಲ್ಲ ಎಂಬ ಭರವಸೆಯನ್ನೂ ನೀಡಿದೆ. ಆದರೆ ರೈತಸಂಘಟನೆಗಳು ಮಾತು ಕೇಳುತ್ತಿಲ್ಲ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ವಿನಃ ನಾವು ಪ್ರತಿಭಟನೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ನಿನ್ನೆಯಿಂದ ಪ್ರಧಾನಿ ಮೋದಿ ಯುಎಸ್​ ಪ್ರವಾಸ ಹಮ್ಮಿಕೊಂಡಿದ್ದು, ಇಂದು ಸಂಜೆ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಅಮೆರಿಕದ ಅಧ್ಯಕ್ಷ ಜೋ ಬೈಡನ್​​ ಜತೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ.

ಇದನ್ನೂ ಓದಿ: PM Modi US Visit: ಕಮಲಾ ಹ್ಯಾರಿಸ್​ಗೆ ಭಾವನಾತ್ಮಕ ಉಡುಗೊರೆ ನೀಡಿದ ಪ್ರಧಾನಿ ಮೋದಿ; ತಾತ ಗೋಪಾಲನ್​ರನ್ನು ನೆನಪಿಸಿದ ಗಿಫ್ಟ್​

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಬೈಕ್​ನಲ್ಲಿ ಬಂದವರಿಂದ ಮನೆ ಮುಂದೆ ನಿಲ್ಲಿಸಿದ್ದ 17 ಕಾರಿನ ಗಾಜುಗಳು ಪುಡಿ ಪುಡಿ 

(Farmer leader Rakesh Tikait Tweet and Tags Joe Biden Before Indian PM Narendra Modi Meet)

Published On - 2:41 pm, Fri, 24 September 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ