AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 8ನೇ ಸುತ್ತಿನ ಸಭೆ: ದೆಹಲಿ ಚಲೋ ಹಿಂದೆ ಬೇರಾವುದೋ ಉದ್ದೇಶವಿದೆ ಎಂದ ಪಂಜಾಬ್ ಬಿಜೆಪಿ ನಾಯಕ

ಇಂದು ಮಧ್ಯಾಹ್ನ ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ 8ನೇ ಸುತ್ತಿನ ಸಭೆ ನಡೆಯಲಿದೆ. ಈ ಮಧ್ಯೆ ಪಂಜಾಬ್ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಇಂದು 8ನೇ ಸುತ್ತಿನ ಸಭೆ: ದೆಹಲಿ ಚಲೋ ಹಿಂದೆ ಬೇರಾವುದೋ ಉದ್ದೇಶವಿದೆ ಎಂದ ಪಂಜಾಬ್ ಬಿಜೆಪಿ ನಾಯಕ
ಸುರ್ಜಿತ್ ಕುಮಾರ್ ಜ್ಞಾನಿ
guruganesh bhat
| Edited By: |

Updated on: Jan 08, 2021 | 11:07 AM

Share

ದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ ಇಂದು 8ನೇ ಸುತ್ತಿನ ಸಭೆ ನಡೆಯಲಿದೆ. ಈ ನಡುವೆ ಪಂಜಾಬ್​ನ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

‘ರೈತ ನಾಯಕರು ಯಾವುದೇ ಪರಿಹಾರಕ್ಕೆ ಸಿದ್ಧವಿಲ್ಲ. ಕೇಂದ್ರ ಸರ್ಕಾರ ನೀಡಿದ ಯಾವುದೇ ಪ್ರಸ್ತಾಪವನ್ನೂ ಒಪ್ಪದ ರೈತ ಒಕ್ಕೂಟಗಳ ಪ್ರತಿಭಟನೆ ಹಿಂದೆ ಬೇರೆ ಯಾವುದೋ ಉದ್ದೇಶವಿದ್ದಂತೆ ತೋರುತ್ತದೆ’ ಎಂದು ಪಂಜಾಬ್ ಬಿಜೆಪಿ ನಾಯಕ ಸುರ್ಜಿತ್ ಕುಮಾರ್ ಜ್ಞಾನಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಸುದೀರ್ಘ ಎರಡು ಘಂಟೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಮಸ್ಯೆ ಪರಿಹರಿಸುತ್ತಾರೆ ಪಂಜಾಬ್ ಬಿಜೆಪಿಯ ಕಿಸಾನ್ ಕೋರ್ಡಿನೇಶನ್ ಕಮಿಟಿಯ ಅಧ್ಯಕ್ಷರೂ ಆಗಿರುವ ಪಂಜಾಬ್ ಬಿಜೆಪಿ ನಾಯಕ ಸುರ್ಜಿತ್ ಕುಮಾರ್ ಜ್ಞಾನಿ ಕೃಷಿ ಕಾಯ್ದೆಗಳು ಮಂಡನೆಯಾಗುವ ಮುನ್ನ ರೈತರ ಜೊತೆ ಸಂವಾದ ನಡೆಸಿದ್ದರು. ‘ಪ್ರಧಾನಿ ನರೇಂದ್ರ ಮೋದಿಯವರು ಈ ಸಮಸ್ಯೆಯನ್ನು ಪರಿಹರಿಸುತ್ತಾರೆ. ಪಂಜಾಬ್​ನ ಉದ್ದಗಲಕ್ಕೂ ಓಡಾಡಿರುವ ಅವರಿಗೆ ರೈತರ ಸಮಸ್ಯೆಗಳ ಬಗ್ಗೆ ಅರಿವಿದೆ. ಪ್ರಧಾನಿಯವರ ಜೊತೆಗಿನ ಮಾತುಕತೆಯ ವಿವರವನ್ನು ತಕ್ಷಣವೇ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.

ಟ್ರ್ಯಾಕ್ಟರ್​ಗಳ ಗುಡುಗು ಕೇಂದ್ರ ಸರ್ಕಾರಕ್ಕೆ ಕೇಳುವುದೇ? ರೈತ ಚಳುವಳಿಕಾರರ ಪ್ರಶ್ನೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ