AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest: ಶಂಭು ಗಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೇಶಮ್ ಶಂಭು ಮೋರ್ಚಾದಲ್ಲಿ ವಿಷ ಕುಡಿದಿದ್ದರು. ಇದಾದ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ರಾಜಪುರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಆಮರಣಾಂತ ಉಪವಾಸಕ್ಕೆ ಇಂದು 45ನೇ ದಿನವಾಗಿದೆ.

Farmers Protest: ಶಂಭು ಗಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ
ಪ್ರತಿಭಟನೆ Image Credit source: India Today
ನಯನಾ ರಾಜೀವ್
|

Updated on:Jan 09, 2025 | 12:57 PM

Share

ಶಂಭು ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹಿಂದೆಯೂ ಇದೇ ರೀತಿ ವಿಷ ಸೇವಿಸಿ ರೈತರೊಬ್ಬರು ಸಾವನ್ನಪ್ಪಿದ್ದರು. ಶಂಭು ಗಡಿಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ರೈತರ ಸಂಖ್ಯೆ ಎರಡಕ್ಕೇರಿದೆ. ಮೃತ ರೈತನ ಹೆಸರು ರೇಶಮ್ ಸಿಂಗ್.

ರೇಶಮ್ ಶಂಭು ಮೋರ್ಚಾದಲ್ಲಿ ವಿಷ ಕುಡಿದಿದ್ದರು. ಇದಾದ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ರಾಜಪುರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಅಲ್ಲಿಯೇ ಸಾವನ್ನಪ್ಪಿದರು. ರೇಶಮ್ ಸಿಂಗ್ ಜಗತಾರ್ ಸಿಂಗ್ ಅವರ ಮಗ. ಅವರು ಟಾರ್ಟರಾನ್ ಜಿಲ್ಲೆಯ ಪಹು ವಿಂಡ್ ನಿವಾಸಿಯಾಗಿದ್ದರು.

ರೈತ ಮುಖಂಡ ತೇಜ್ಬೀರ್ ಸಿಂಗ್ ಮಾತನಾಡಿ, ಶಂಭು ಮತ್ತು ಖಾನೌರಿ ಗಡಿಯಲ್ಲಿ 11 ತಿಂಗಳಿನಿಂದ ಆಂದೋಲನ ನಡೆದರೂ ಪರಿಹಾರ ಕಂಡುಕೊಳ್ಳದ ಸರ್ಕಾರದ ವಿರುದ್ಧ ರೇಶಮ್ ಸಿಂಗ್ ಕೋಪಗೊಂಡಿದ್ದರು.

ಮತ್ತಷ್ಟು ಓದಿ: ಕಾಂಗ್ರೆಸ್​ಗಾಗಿಯೇ ನಡೆದಿತ್ತಾ ರೈತರ ಪ್ರತಿಭಟನೆ, ಆದರೂ ಹರ್ಯಾಣದಲ್ಲಿ ಸೋತಿದ್ಹೇಗೆ, ಕಾರಣ ಬಿಚ್ಚಿಟ್ಟ ರೈತ ಮುಖಂಡ

ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಆಮರಣಾಂತ ಉಪವಾಸಕ್ಕೆ ಇಂದು 45ನೇ ದಿನವಾಗಿದೆ. 328 ದಿನಗಳಿಂದ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ಎಂಎಸ್‌ಪಿ ಗ್ಯಾರಂಟಿ ಕಾಯ್ದೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರ ಬೇಡಿಕೆಗಳೇನು? ಭೂಸ್ವಾಧೀನ ಕಾಯ್ದೆ 2013 ಜಾರಿಗೊಳಿಸಬೇಕು ಚಳವಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ರೈತರ ಸಾಲ ಮನ್ನಾ ಮಾಡಿ ಪಿಂಚಣಿ ನೀಡಬೇಕು ಫಸಲ್ ಬಿಮಾ ಯೋಜನೆಗೆ ಸರಕಾರವೇ ಪ್ರೀಮಿಯಂ ಪಾವತಿಸಬೇಕು. ಮೃತ ರೈತರ ಕುಟುಂಬಗಳಿಗೆ ಉದ್ಯೋಗ ಲಖಿಂಪುರ ಘಟನೆಯ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ನಕಲಿ ಬೀಜ ಮತ್ತು ರಸಗೊಬ್ಬರಗಳ ಮೇಲೆ ಕಠಿಣ ಕಾನೂನು ಭೂರಹಿತ ರೈತರ ಮಕ್ಕಳಿಗೆ ಉದ್ಯೋಗ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:56 pm, Thu, 9 January 25

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?