Bharat Bandh: ಫೆಬ್ರವರಿ 16 ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ

ರೈತ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 16 ರಂದು ಗ್ರಾಮೀಣ ಭಾರತ್ ಬಂದ್​ಗೆ ಕರೆ ನೀಡಿದ್ದಾರೆ. ಧರಣಿ ನಿರತ ರೈತರು ಮತ್ತು ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳೆಂದರೆ ರೈತರಿಗೆ ಪಿಂಚಣಿ, ಬೆಳೆಗಳಿಗೆ ಎಂಎಸ್‌ಪಿ, ಹಳೆಯ ಪಿಂಚಣಿ ಯೋಜನೆ ಅನುಷ್ಠಾನ ಮತ್ತು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿರಿಸಿದೆ.

Bharat Bandh: ಫೆಬ್ರವರಿ 16 ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ
ರೈತರುImage Credit source: Hindustan Times
Follow us
ನಯನಾ ರಾಜೀವ್
|

Updated on:Feb 14, 2024 | 10:07 AM

ಹಲವು ಬೇಡಿಕೆಗಳ ಈಡೇರಿಕೆಗಾಗಿ ದೆಹಲಿ ಚಲೋ(Delhi Chalo) ಚಳವಳಿಯನ್ನು ಹಮ್ಮಿಕೊಂಡಿದ್ದ ಸಂಯುಕ್ತ ಕಿಸಾನ್ ಮೋರ್ಚಾ(Samyukta Kisan Morcha) ಇದೀಗ ಫೆಬ್ರವರಿ 16ರಂದು ಗ್ರಾಮೀಣ ಭಾರತ ಬಂದ್​(Bharat Bandh)ಗೆ ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬ್ಯಾನರ್‌ನಡಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ರೈತ ಸಂಘಗಳು ತಮ್ಮ ಇತರ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಲು ಫೆಬ್ರವರಿ 16 ರಂದು ದೇಶಾದ್ಯಂತ ಗ್ರಾಮೀಣ ಭಾರತ್ ಬಂದ್ ಎಂದು ಕರೆಯಲಾಗುವ ಮುಷ್ಕರಕ್ಕೆ ಕರೆ ನೀಡಿವೆ. ಎಸ್‌ಕೆಎಂ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಗ್ರಾಮೀಣ ಭಾರತ್ ಬಂದ್ ಫೆಬ್ರವರಿ 16 ರಂದು ಬೆಳಗ್ಗೆ 6 ರಿಂದ ಸಂಜೆ 4 ರವರೆಗೆ ನಡೆಯಲಿದೆ.

ರೈತರ ಬೇಡಿಕೆಗಳೇನು? ಧರಣಿ ನಿರತ ರೈತರು ಮತ್ತು ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳೆಂದರೆ ರೈತರಿಗೆ ಪಿಂಚಣಿ, ಬೆಳೆಗಳಿಗೆ ಎಂಎಸ್‌ಪಿ, ಹಳೆಯ ಪಿಂಚಣಿ ಯೋಜನೆ ಅನುಷ್ಠಾನ ಮತ್ತು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಹಿಂಪಡೆಯುವುದು. ಉದ್ಯೋಗಿಗಳ ಗುತ್ತಿಗೆ, ಖಾತರಿಯ ಉದ್ಯೋಗ ಇತ್ಯಾದಿಗಳು ಸೇರಿವೆ. ಇನ್ನೂ, ಇತರ ಬೇಡಿಕೆಗಳಲ್ಲಿ ಉದ್ಯೋಗಿಗಳಿಗೆ ಸಂಬಂಧಿಸಿದ ಸಮಸ್ಯೆಗಳಾದ ಆಪರೇಷನಲ್ ಪರ್ಫಾರ್ಮೆನ್ಸ್-ಲಿಂಕ್ಡ್ ಸಂಬಳ (OPS) ಅನುಷ್ಠಾನವನ್ನು ಹಿಂತೆಗೆದುಕೊಳ್ಳುವುದು, ತಿದ್ದುಪಡಿಗಳು ಕಾರ್ಮಿಕ ಕಾನೂನುಗಳು ಮತ್ತು ಇತರ ಹಲವಾರು ಬೇಡಿಕೆಗಳು ಸರ್ಕಾರದ ಮುಂದಿವೆ.

ಮತ್ತಷ್ಟು ಓದಿ: ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಗೆ ಬೆಂಬಲ ನೀಡುತ್ತಿದ್ದೇವೆ: ಕೇಂದ್ರ ಸರ್ಕಾರಕ್ಕೆ ರಾಕೇಶ್ ಟಿಕಾಯತ್ ಎಚ್ಚರಿಕೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (MGNREGS) ಬಲಪಡಿಸಲು, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಮತ್ತು ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ಎಲ್ಲರಿಗೂ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ರೈತರು ಪ್ರಯತ್ನಿಸುತ್ತಿದ್ದಾರೆ.

ಫೆ.16 ರಂದು ಯಾವೆಲ್ಲಾ ಸೇವೆಗಳ ಮೇಲೆ ಪರಿಣಾಮ ಫೆಬ್ರವರಿ 16 ರಂದು ದಿನವಿಡೀ ಭಾರತ್ ಬಂದ್‌ನಲ್ಲಿ, ಸಾರಿಗೆ, ಕೃಷಿ ಚಟುವಟಿಕೆಗಳು, MNREGA ಗ್ರಾಮೀಣ ಕೆಲಸಗಳು, ಖಾಸಗಿ ಕಚೇರಿಗಳು, ಹಳ್ಳಿ ಅಂಗಡಿಗಳು ಮತ್ತು ಗ್ರಾಮೀಣ ಕೈಗಾರಿಕಾ ಮತ್ತು ಸೇವಾ ವಲಯದ ಸಂಸ್ಥೆಗಳು ಮುಚ್ಚಲ್ಪಡುತ್ತವೆ. ಇದಲ್ಲದೆ, ಮುಷ್ಕರದ ಸಮಯದಲ್ಲಿ ಆಂಬ್ಯುಲೆನ್ಸ್‌ಗಳ ಕಾರ್ಯಾಚರಣೆ, ಪತ್ರಿಕೆ ವಿತರಣೆ, ಮದುವೆ, ಮೆಡಿಕಲ್ ಶಾಪ್‌ಗಳು, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಇತ್ಯಾದಿ ತುರ್ತು ಸೇವೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರೈತರು ಕ್ರಿಮಿನಲ್​ಗಳಲ್ಲ: ಸ್ವಾಮಿನಾಥನ್ ಪುತ್ರಿ ಮಧುರಾ ರೈತರು ಕ್ರಿಮಿನಲ್​ಗಳನ್ನು ಅವರೇನೋ ಅಪರಾಧ ಮಾಡಿದ್ದಾರೆ ಎಂಬಂತೆ ಅವರನ್ನು ನೋಡಬೇಡಿ ಎಂದು ಮಧುರಾ ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರ ಹಲವು ಬೇಡಿಕೆಗಳ ಪೈಕಿ ಸ್ವಾಮಿನಾಥನ್ ಸಮಿತಿ ವರದಿ ಜಾರಿ ಪ್ರಮುಖ ಅಂಶವಾಗಿದೆ. ಸ್ವಾಮಿನಾಥನ್ ರ ರೈತರ ರಾಷ್ಟ್ರೀಯ ಆಯೋಗವು ಡಿಸೆಂಬರ್ 2004 ಮತ್ತು 2006 ರ ನಡುವೆ ಒಟ್ಟು ಐದು ವರದಿಗಳನ್ನು ಸಲ್ಲಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:07 am, Wed, 14 February 24

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್