ಪರಿಹಾರಕ್ಕಾಗಿ ಬೇಡಿಕೆ: 12 ಸರ್ಕಾರಿ ಅಧಿಕಾರಿಗಳನ್ನು ಒತ್ತೆಯಾಳಾಗಿರಿಸಿದ ಪಂಜಾಬ್ ರೈತರು

ರೈತ ಸಂಘದ ಬ್ಯಾನರ್ ಅಡಿಯಲ್ಲಿ 100 ಕ್ಕೂ ಹೆಚ್ಚು ರೈತರ ಗುಂಪು ಸೋಮವಾರ ಲಂಬಿ ಉಪ ತಹಸಿಲ್ ಹೊರಗೆ ಪ್ರತಿಭಟನೆ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಸಂಜೆ ಕಚೇರಿ ಕಟ್ಟಡಕ್ಕೆ ಪ್ರವೇಶಿಸಿ ಮಧ್ಯರಾತ್ರಿಯವರೆಗೆ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡರು

ಪರಿಹಾರಕ್ಕಾಗಿ ಬೇಡಿಕೆ: 12 ಸರ್ಕಾರಿ ಅಧಿಕಾರಿಗಳನ್ನು ಒತ್ತೆಯಾಳಾಗಿರಿಸಿದ ಪಂಜಾಬ್ ರೈತರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 29, 2022 | 8:15 PM

ಚಂಡೀಗಢ: ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ರೈತರ (Farmers) ಗುಂಪೊಂದು 12 ಮಂದಿ ಸರ್ಕಾರಿ ಅಧಿಕಾರಿಗಳನ್ನು ಹಲವು ಗಂಟೆಗಳ ಕಾಲ ಒತ್ತೆಯಾಳಾಗಿಟ್ಟುಕೊಂಡಿರುವ (Hostage) ಘಟನೆ ಮುಕ್ತಸರ್ ಜಿಲ್ಲೆಯ ಲಂಬಿಯಲ್ಲಿ ಉಪ ತಹಸಿಲ್ ಕಚೇರಿಯಲ್ಲಿ ನಡೆದಿದೆ. ಪ್ರತಿಭಟನಾಕಾರರು ಅಧಿಕಾರಿಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ ನಂತರ ಸೋಮವಾರ ತಡರಾತ್ರಿ ನಾಯಬ್ ತಹಸೀಲ್ದಾರ್ ಮತ್ತು ಪಟ್ವಾರಿ ಸೇರಿದಂತೆ ಅಧಿಕಾರಿಗಳನ್ನು ಪೊಲೀಸರು ಬಿಡುಗಡೆಗೊಳಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಪಿಂಕ್ ಬಾಲ್ವರ್ಮ್ (ಕೀಟ)ದಿಂದ ಹತ್ತಿ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.  ರಾಜ್ಯದಲ್ಲಿ ನಡೆದ ಘಟನೆಯ ವಿರುದ್ಧ ಮಂಗಳವಾರ ಕಂದಾಯ ಇಲಾಖೆ (Revenue officials) ಅಧಿಕಾರಿಗಳು ಮುಷ್ಕರ ನಡೆಸಿದರು. ರೈತ ಸಂಘದ ಬ್ಯಾನರ್ ಅಡಿಯಲ್ಲಿ 100 ಕ್ಕೂ ಹೆಚ್ಚು ರೈತರ ಗುಂಪು ಸೋಮವಾರ ಲಂಬಿ ಉಪ ತಹಸಿಲ್ ಹೊರಗೆ ಪ್ರತಿಭಟನೆ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಸಂಜೆ ಕಚೇರಿ ಕಟ್ಟಡಕ್ಕೆ ಪ್ರವೇಶಿಸಿ ಮಧ್ಯರಾತ್ರಿಯವರೆಗೆ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. 12 ಸರ್ಕಾರಿ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸಂದೀಪ್ ಕುಮಾರ್ ಮಲಿಕ್ ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಅಲ್ಲಿನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದರು ಎಂದು ಎಸ್‌ಎಸ್‌ಪಿ ಹೇಳಿದರು. “ಆದರೆ ಅವರು ಅಚಲರಾಗಿದ್ದರು ಮತ್ತು ತಡರಾತ್ರಿಯವರೆಗೂ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿತ್ತು” ಎಂದು ಮಲಿಕ್ ಮಂಗಳವಾರ ದೂರವಾಣಿಯಲ್ಲಿ ಪಿಟಿಐಗೆ ತಿಳಿಸಿದರು.  ಒತ್ತೆಯಾಳುಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ಯುವಂತೆ ಆಡಳಿತವು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಅವರು ಹೇಳಿದರು.

ಅಧಿಕಾರಿಗಳನ್ನು ಬಿಡಿಸಲು ಪೊಲೀಸರು ರೈತರ ಮೇಲೆ ಬಲಪ್ರಯೋಗ ಮಾಡಿದ್ದಾರೆ ಎಂಬ ವರದಿಗಳನ್ನು ಮಲಿಕ್ ನಿರಾಕರಿಸಿದರು.  “ನಾವು ಅಧಿಕಾರಿಗಳನ್ನು ಸಂಯಮದಿಂದ ಮತ್ತು ಶಾಂತಿಯುತ ರೀತಿಯಲ್ಲಿ ಬಿಡುಗಡೆ ಮಾಡಿದ್ದೇವೆ. ಯಾವುದೇ ಬಲಪ್ರಯೋಗ ಮಾಡಿಲ್ಲ. ನೀವು ಧರಣಿ ನಡೆಸಬಹುದು. ಆದರೆ ಕರ್ತವ್ಯ ನಿರ್ವಹಿಸುವ ಸರ್ಕಾರಿ ಅಧಿಕಾರಿಗಳನ್ನು ಒತ್ತೆಯಾಳುಗಳನ್ನಾಗಿರಿಸುವಂತಿಲ್ಲ ಎಂದು ಅಧಿಕಾರಿಗಳನ್ನು ಮುಕ್ತಗೊಳಿಸಲು ತೆರಳುವ ಮೊದಲು ನಾವು ಅವರಿಗೆ (ರೈತರಿಗೆ) ಹಲವು ಬಾರಿ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

ನಂತರ ಅಧಿಕಾರಿಗಳಿಂದ ಲಿಖಿತ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಎಂಟರಿಂದ ಒಂಬತ್ತು ಜನರು ಮತ್ತು ಕೆಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಲಿಕ್ ಹೇಳಿದರು. ಆದಾಗ್ಯೂ, ಪೊಲೀಸರು ಬಲಪ್ರಯೋಗ ಮಾಡಿದರು ಮತ್ತು ಆರರಿಂದ ಏಳು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ಮಂಗಳವಾರ ಲಂಬಿಯಲ್ಲಿ ರೈತ ಮುಖಂಡರೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ:ಇಮ್ರಾನ್ ಖಾನ್ ಸರ್ಕಾರದಿಂದ ಇಬ್ಬರು ಸದಸ್ಯರ ರಾಜೀನಾಮೆ; ಸರ್ಕಾರ ಉಳಿಸಲು ಖಾನ್ ವಾಮಾಚಾರದ ಮೊರೆ ಹೋಗಿದ್ದಾರೆ ಎಂದ ವಿಪಕ್ಷ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ