AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಕ್ಕಿ ಜ್ವರ ಹಬ್ಬಿಸಲು ರೈತ ಪ್ರತಿಭಟನಾಕಾರರು ಬಿರಿಯಾನಿ ತಿನ್ನುತ್ತಿದ್ದಾರೆ: ಬಿಜೆಪಿ ಶಾಸಕನ ಹೇಳಿಕೆಗೆ ಆಕ್ರೋಶ

ರಾಜಸ್ಥಾನದ ರಾಮಗಂಜ್​ ಮಂಡಿ ಶಾಸಕ ಮದನ್​ ದಿಲವಾರ್​ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಅವರು ರೈತರನ್ನು ಹಾಗೂ ಅವರ ಪ್ರತಿಭಟನೆಯನ್ನು ತೆಗಳಿದ್ದಾರೆ.

ಹಕ್ಕಿ ಜ್ವರ ಹಬ್ಬಿಸಲು ರೈತ ಪ್ರತಿಭಟನಾಕಾರರು ಬಿರಿಯಾನಿ ತಿನ್ನುತ್ತಿದ್ದಾರೆ: ಬಿಜೆಪಿ ಶಾಸಕನ ಹೇಳಿಕೆಗೆ ಆಕ್ರೋಶ
ಮದನ್​ ದಿಲಾವರ್
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 6:55 PM

Share

ಜೈಪುರ: ಪ್ರತಿಭಟನಾನಿರತ ರೈತರು ಪಕ್ಷಿ ಜ್ವರವನ್ನು ಹಬ್ಬಿಸಲು ಕೋಳಿ ಬಿರಿಯಾನಿ ತಿನ್ನುತ್ತಿದ್ದಾರೆ. ಪಕ್ಷಿ ಜ್ವರ ರಾಷ್ಟ್ರವ್ಯಾಪಿ ಪಸರಿಸಲು ಇದು ಕಾರಣವಾಗಬಹುದು ಎನ್ನುವ ರಾಜಸ್ಥಾನ ಬಿಜೆಪಿ ಶಾಸಕನ ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ರಾಜಸ್ಥಾನದ ರಾಮಗಂಜ್​ ಮಂಡಿ ಶಾಸಕ ಮದನ್​ ದಿಲಾವರ್​ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಅವರು ರೈತರನ್ನು ಹಾಗೂ ಅವರ ಪ್ರತಿಭಟನೆಯನ್ನು ತೆಗಳಿದ್ದಾರೆ.

ರೈತ ಪ್ರತಿಭಟನಾಕಾರರು ಬಿರಿಯಾನಿ ಆಸ್ವಾದಿಸುತ್ತಿದ್ದಾರೆ. ನಿತ್ಯ ಸಾಕಷ್ಟು ಒಣ ಹಣ್ಣುಗಳನ್ನು ತಿನ್ನುತ್ತಿದ್ದಾರೆ. ಹೀಗಾಗಿ, ಪ್ರತಿಭಟನೆಯನ್ನು ಅವರು ಸಂಪೂರ್ಣವಾಗಿ ಆನಂದದಿಂದ ಕಳೆಯುತ್ತಿದ್ದಾರೆ. ಇದು ಅವರಿಗೆ ಒಂದು ರೀತಿ ಪಿಕ್​ನಿಕ್​ ಇದ್ದಂತೆ. ಪ್ರತಿಭಟನಾಕಾರರ ಮಧ್ಯೆ ಸಾಕಷ್ಟು ಭಯೋತ್ಪಾದಕರೂ, ಕಳ್ಳರು, ದರೋಡೆಕೋರರು ಇರಬಹುದು. ಅವರು ರೈತರ ಶತ್ರುಗಳಾಗಬಹುದು ಎಂದು ದಿಲಾವರ್ ಅಭಿಪ್ರಾಯಪಟ್ಟಿದ್ದಾರೆ.

ರೈತರ ಪ್ರತಿಭಟನೆಯಿಂದ ಹಕ್ಕಿ ಜ್ವರ ಹೆಚ್ಚಲಿದೆ ಎನ್ನುವುದನ್ನು ಒತ್ತಿ ಹೇಳಿರುವ ಮದನ್, ಮುಂದಿನ ಕೆಲ ದಿನಗಳಲ್ಲಿ ಪ್ರತಿಭಟನಾ ಸ್ಥಳದಿಂದ ರೈತರನ್ನು ತೆರವು ಮಾಡದಿದ್ದರೆ ತುಂಬಾನೇ ಕಷ್ಟವಾಗಲಿದೆ. ಪ್ರತಿಭಟನಾಕಾರರಿಂದ ಹಕ್ಕಿಜ್ವರ ಹೆಚ್ಚಲಿದೆ ಎಂದು ಹೇಳಿದ್ದಾರೆ.

ಇನ್ನು, ಈ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಮದನ್​ ಹೇಳಿಕೆಯಿಂದ ಬಿಜೆಪಿ ನಾಯಕರ ಆಲೋಚನೆ ಏನು ಎನ್ನುವುದು ಗೊತ್ತಾಗುತ್ತಿದೆ ಎಂದು ಜರಿದಿದ್ದಾರೆ. ಶುಕ್ರವಾರ ರೈತರು ಹಾಗೂ ಕೇಂದ್ರ ಸರ್ಕಾರ ಸಭೆ ನಡೆಸಿತ್ತು. ಆದರೆ, ಸಭೆ ಯಶಸ್ವಿ ಆಗಿಲ್ಲ.

Tv9 Kannada Facebook live | ರಾಜ್ಯದಲ್ಲಿ ಹಕ್ಕಿ ಜ್ವರ ಆತಂಕ: ಮುಂಜಾಗ್ರತಾ ಕ್ರಮಗಳೇನು?- ಇಲ್ಲಿದೆ ತಜ್ಞರ ಉತ್ತರ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್