AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಸ್ಸಾರ್​​ನಲ್ಲಿ ಹಿರಿಯ ಪೊಲೀಸ್​ ಅಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾದ ರೈತರು; ನಿಯಂತ್ರಣಕ್ಕೆ ಸಿದ್ಧರಾಗಿರುವ ಭದ್ರತಾ ಸಿಬ್ಬಂದಿ

ಕೊಲೆ ಯತ್ನ, ಗಲಭೆ, ಕಾನೂನು ವಿರೋಧಿ ಚಟುವಟಿಕೆ, ಕೊರೊನಾ ಸೋಂಕು ಹರಡಿದ್ದು..ಹೀಗೆ ಹಲವು ಕಾರಣಗಳಿಗೆ ಸುಮಾರು 350 ಮಂದಿಯ ವಿರುದ್ಧ ಹಿಸ್ಸಾರ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ.

ಹಿಸ್ಸಾರ್​​ನಲ್ಲಿ ಹಿರಿಯ ಪೊಲೀಸ್​ ಅಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾದ ರೈತರು; ನಿಯಂತ್ರಣಕ್ಕೆ ಸಿದ್ಧರಾಗಿರುವ ಭದ್ರತಾ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 23, 2021 | 7:23 PM

Share

ಚಂಡಿಗಡ್​​: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವೆಂಬರ್​​ನಿಂದಲೂ ದೆಹಲಿಯ ಗಡಿಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪ್ರತಿಭಟನೆ ನಡೆಸುತ್ತಿರುವ ಸುಮಾರು 350 ಮಂದಿಯ ವಿರುದ್ಧ ಹರ್ಯಾಣದ ಹಿಸ್ಸಾರ್​​ ಪೊಲೀಸರು ಕ್ರಿಮಿನಲ್​ ಪ್ರಕರಣ ದಾಖಲು ಮಾಡಿದ್ದಾರೆ. ಈ ಕ್ರಿಮಿನಲ್​ ಪ್ರಕರಣವನ್ನು ವಾಪಸ್​ ಪಡೆಯುವಂತೆ ಒತ್ತಾಯಿಸಿ ನಾಳೆ ಹರ್ಯಾಣದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯೋಜನೆ ರೂಪಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಅಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕೊಲೆ ಯತ್ನ, ಗಲಭೆ, ಕಾನೂನು ವಿರೋಧಿ ಚಟುವಟಿಕೆ, ಕೊರೊನಾ ಸೋಂಕು ಹರಡಿದ್ದು..ಹೀಗೆ ಹಲವು ಕಾರಣಗಳಿಗೆ ಸುಮಾರು 350 ಮಂದಿಯ ವಿರುದ್ಧ ಹಿಸ್ಸಾರ್ ಠಾಣೆಯಲ್ಲಿ ಕ್ರಿಮಿನಲ್​ ಕೇಸ್​ ದಾಖಲಾಗಿದೆ. ಇದನ್ನು ವಾಪಸ್​ ಪಡೆಯಲು ಆಗ್ರಹಿಸಿ ನಾಳೆ (ಮೇ 24) ಹಿಸಾರ್​ ವಲಯದ ಐಜಿ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯೋಜನೆ ರೂಪಿಸಿದ್ದಾರೆ. ಅವರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು, ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಲುವಾಗಿ ಇಂದು ರ್ಯಾಪಿಡ್​ ಆ್ಯಕ್ಷನ್​ ಫೋರ್ಸ್​ (RAF)ನ ಸುಮಾರು 3000 ಸಿಬ್ಬಂದಿ ಹಿಸ್ಸಾರ್​​ಗೆ ತೆರಳಿದ್ದಾರೆ.

ನಾಳೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇಲ್ಲಿಗೆ ಬಾರದಂತೆ ತಡೆಯಲು ನಾವು ರೈತ ಮುಖಂಡರಿಗೆ ತಿಳಿಸಿದ್ದೇವೆ. ಕೊರೊನಾ ವೈರಸ್ ಸಾಂಕ್ರಾಮಿಕ ಉಲ್ಬಣಗೊಂಡಿರುವ ಕಾರಣ ಪ್ರತಿಭಟನೆ ನೆಪದಲ್ಲಿ ಗುಂಪುಗೂಡುವುದು ಸರಿಯಲ್ಲ. ಇದನ್ನು ನಾವು ರೈತಮುಖಂಡರೊಂದಿಗೆ ಚರ್ಚಿಸಿದ್ದೇವೆ ಎಂದು ಹಿಸ್ಸಾರ್​ ಜಿಲ್ಲಾಧಿಕಾರಿ ಪ್ರಿಯಾಂಕಾ ಸೋನಿ ತಿಳಿಸಿದ್ದಾರೆ. ಸದ್ಯ ಜಿಲ್ಲೆಯಲ್ಲೂ ಲಾಕ್​ಡೌನ್ ಸ್ಥಿತಿ ಇದೆ. ಈ ಮಧ್ಯೆ ನಾಳಿನ ಪ್ರತಿಭಟನೆಯಲ್ಲಿ ಗುಂಪುಗೂಡದಂತೆ ತಡೆಯಲು, ಶಾಂತಿ ಕಾಪಾಡಲು ಬೇಕಾಗಿರುವ ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್​ ಮುಖ್ಯಸ್ಥ ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ 3ನೇ ಅಲೆಯಿಂದ ಮಕ್ಕಳಿಗೆ ಹೆಚ್ಚಿನ ಅಪಾಯ, ಭಾರತದಲ್ಲಿ ತಯಾರಿಸಿದ ಮೂಗಿಗೆ ಹಾಕುವ ಲಸಿಕೆ ‘ಗೇಮ್ ಚೇಂಜರ್’ ಆಗುವ ಸಾಧ್ಯತೆ: ಸೌಮ್ಯ ಸ್ವಾಮಿನಾಥನ್

‘ನಾನು ಜೈಲಿಗೆ ಹೋಗಲು ಹಿಂಜರಿಯುವುದಿಲ್ಲ’; ಪುತ್ರಿ ಸುಹಾನಾ ಬಾಯ್​ಫ್ರೆಂಡ್​ ಬಗ್ಗೆ ಶಾರುಖ್​ ಖಡಕ್​ ವಾರ್ನಿಂಗ್​

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ