ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ(protest)ಯು ಶುಭ್ಕರಣ್ ಸಿಂಗ್(Shubh Karan Singh) ಸಾವಿನ ಬಳಿಕ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಮಾರ್ಚ್ 3 ರಂದು ಶುಭ್ಕರಣ್ ಅವರ ಆತ್ಮಕ್ಕೆ ಶಾಂತಿ ಕೋರಿ ಅಂತಿಮ ನಮನ ಸಲ್ಲಿಸಲಾಗುವುದು ಅದರ ಬಳಿಕವಷ್ಟೇ ಪ್ರತಿಭಟನೆ ಕುರಿತು ನಿರ್ಧಾರಕ್ಕೆ ಬರಲಾಗುವುದು ಎಂದು ರೈತರು ತಿಳಿಸಿದ್ದಾರೆ. ದೆಹಲಿ ಚಲೋ ರೈತರ ಯಾತ್ರೆ ಕುರಿತು ಫೆಬ್ರವರಿ 29ರಂದು ನಿರ್ಧಾರ ಕೈಗೊಳ್ಳಬೇಕಿತ್ತು.
ರೈತರೊಂದಿಗೆ ಮಾತುಕತೆಗೆ ಸಿದ್ಧ
ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರೈತ ಮುಖಂಡರ ನಡುವೆ ನಾಲ್ಕು ಬಾರಿ ಮಾತುಕತೆ ನಡೆದಿದೆ. ಆದ್ರೆ ಈ ಮಾತಕತೆಗೆ ಇನ್ನೂ ಪರಿಹಾರ ದೊರೆತಿಲ್ಲ, ಐದನೇ ಸುತ್ತಿನ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಧರಣಿ ನಿರತ ರೈತರೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧವಿದೆ ಎಂದು ಕೃಷಿ ಸಚಿವ ಅರ್ಜುನ್ ಮುಂಡಾ ಹೇಳಿದ್ದಾರೆ.
ಯುನೈಟೆಡ್ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಎರಡೂ ವೇದಿಕೆಗಳಿಂದ 6 ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಲಾಗುವುದು. ಸಮಿತಿಯ ಹೆಸರುಗಳನ್ನು ನಿರ್ಧರಿಸಲಾಗಿದೆ.ಎರಡೂ ಸಮಿತಿಗಳು ಶುಕ್ರವಾರ ಸಭೆ ಸೇರಲಿವೆ. ಸಮನ್ವಯ ಸಮಿತಿ ಸಂಪರ್ಕಿಸಿದ್ದು, ಚರ್ಚೆ ನಡೆದಿದೆ ಎಂದು ಕಿಸಾನ್ ಸಂಘರ್ಷ ಸಮಿತಿಯ ರಾಜ್ಯ ಮುಖಂಡ ಸತ್ನಾಮ್ ಸಿಂಗ್ ಪನ್ನು ತಿಳಿಸಿದ್ದಾರೆ.
ದೆಹಲಿ ಚಲೋ ರೈತರ ಪಾದಯಾತ್ರೆ ನಿಂತಿದ್ದು ಯಾವಾಗ?
ಈ ವರ್ಷದ ಆರಂಭದಲ್ಲಿ ರೈತರು ತಮ್ಮ ಬೇಡಿಕೆಗಳೊಂದಿಗೆ ದೆಹಲಿಗೆ ಪಾದಯಾತ್ರೆ ನಡೆಸಲು ಪ್ರಯತ್ನಿಸುತ್ತಿದ್ದಾರೆ.
ಫೆಬ್ರವರಿ 20ರಂದು ರೈತ ಮುಖಂಡರು ಎರಡು ದಿನಗಳ ಕಾಲ ವಿರಾಮ ನೀಡಿದ್ದರು. ಫೆಬ್ರವರಿ 23ರಂದು ಮುಂದಿನ ಕಾರ್ಯತಂತ್ರವನ್ನು ರಚಿಸಲಾಗುವುದು ಎಂದಿದ್ದರು. ಮಧ್ಯದಲ್ಲಿ ಪಾದಯಾತ್ರೆಯಲ್ಲಿದ್ದ ಶುಭ್ಕರಣ್ ಎಂಬುವವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದರಲ್ಲಿ ಅವರು ಸಾವನ್ನಪ್ಪಿದ್ದರು. ಅದಾದ ಬಳಿಕ ಯಾತ್ರೆಯನ್ನು ಕೆಲಕಾಲ ಮುಂದೂಡಿದ್ದರು.
ಮತ್ತಷ್ಟು ಓದಿ: Farmers Protest: ದೆಹಲಿ ಚಲೋ: ರೈತ ಸಾವು, 2 ದಿನಗಳ ಕಾಲ ರೈತರ ಪ್ರತಿಭಟನೆ ತಾತ್ಕಾಲಿಕ ಸ್ಥಗಿತ
ರೈತರ ಪ್ರತಿಭಟನೆಯ ಉದ್ದೇಶವೇನು?
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರೂಪಿಸುವುದು ರೈತರ ಬಹುಮುಖ್ಯ ಬೇಡಿಕೆಯಾಗಿದೆ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ -ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಸಿಗಬೇಕು
-ಭಾರತವನ್ನು ಡಬ್ಲ್ಯೂಟಿಒದಿಂದ ಹೊರತೆಗೆಯಬೇಕು
-ಕೃಷಿ ಸರಕುಗಳು, ಹಾಲು ಉತ್ಪನ್ನಗಳು, ಹಣ್ಣುಗಳು,ತರಕಾರಿಗಳು ಮತ್ತು ಮಾಂಸದ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲು ಭತ್ಯೆ ಹೆಚ್ಚಿಸಬೇಕು.
-58 ವರ್ಷ ಮೇಲ್ಪಟ್ಟ ರೈತರು ಮತ್ತು ಕೃಷಿ ಕೂಲಿಕಾರರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಿ ಮಾಸಿಕ 10 ಸಾವಿರದವರೆಗೆ ಪಿಂಚಣಿ ನೀಡಬೇಕು. -ಕೀಟನಾಶಕಗಳು, ಬೀಜಗಳು ಮತ್ತು ರಸಗೊಬ್ಬರ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಹತ್ತಿ ಸೇರಿದಂತೆ ಎಲ್ಲಾ ಬೆಳಗಳ ಬೀಜಗಳ ಗುಣಮಟ್ಟ ಸುಧಾರಿಸಬೇಕು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ