ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು 16 ವಿರೋಧ ಪಕ್ಷಗಳ ನಿರ್ಧಾರ

ಜಂಟಿ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ವಿಪಕ್ಷಗಳು ತೀರ್ಮಾನಿಸಿವೆ.

ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು 16 ವಿರೋಧ ಪಕ್ಷಗಳ ನಿರ್ಧಾರ
ಸಂಸತ್ ಭವನ
Follow us
TV9 Web
| Updated By: ganapathi bhat

Updated on:Apr 06, 2022 | 8:34 PM

ದೆಹಲಿ: ಇಂದಿನಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ವಿರೋಧ ಪಕ್ಷಗಳ ಭಾರಿ ವಿರೋಧ ವ್ಯಕ್ತವಾಗುವ ಸಾಧ್ಯತೆ ಗೋಚರಿಸಿದೆ. 2021ರ ಬಜೆಟ್ ಅಧಿವೇಷನ ಇಂದು (ಜ.29) ಆರಂಭಗೊಳ್ಳಲಿದೆ. ಬಳಿಕ, ಫೆ. 1ರಿಂದ ಕೇಂದ್ರ ಬಜೆಟ್ ಪ್ರಸ್ತುತಿ ಆರಂಭಗೊಳ್ಳಲಿದೆ. ಆದರೆ, ಇದಕ್ಕೂ ಮೊದಲೇ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವ ಸೂಚನೆ ಲಭಿಸಿದೆ.

ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ, ಜಂಟಿ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ವಿಪಕ್ಷಗಳು ತೀರ್ಮಾನಿಸಿವೆ. ನೂತನ ಕೃಷಿ ಕಾಯ್ದೆ ವಿಚಾರದಲ್ಲಿ ಕೇಂದ್ರ ತಾಳಿರುವ ಒರಟು ನಿಲುವು, ರೈತ ಪ್ರತಿಭಟನೆ ಬಗ್ಗೆ ಸರ್ಕಾರ ತಾಳಿರುವ ನಿಲುವು ಖಂಡಿಸಿ ವಿರೋಧ ಪಕ್ಷಗಳು ಇಂದಿನ ಭಾಷಣ ಬಹಿಷ್ಕರಿಸಲು ತೀರ್ಮಾನಿಸಿವೆ.

ಕಾಂಗ್ರೆಸ್, ಎನ್‌ಸಿಪಿ, ಶಿವಸೇನೆ, ಟಿಎಂಸಿ ಸೇರಿದಂತೆ ಒಟ್ಟು 16 ವಿಪಕ್ಷಗಳಿಂದ ಭಾಷಣ ಬಹಿಷ್ಕರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಮ್ ಆದ್ಮಿ ಪಕ್ಷ ಹಾಗೂ ಶಿರೋಮಣಿ ಅಕಾಲಿ ದಳದಿಂದಲೂ ಭಾಷಣ ಬಹಿಷ್ಕರಿಸುವುದಾಗಿ ಹೇಳಿಕೆ ಲಭ್ಯವಾಗಿದೆ. 16 ವಿಪಕ್ಷಗಳು ಒಟ್ಟಾಗಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಕೈಗೊಂಡಿರುವ ತೀರ್ಮಾನವನ್ನು, ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಕೂಡ ನಿನ್ನೆ ಸ್ಪಷ್ಟಪಡಿಸಿದ್ದಾರೆ.

ಲಕ್ಷ ಸಂಖ್ಯೆಯ ರೈತ ಹೋರಾಟಗಾರರು ಸುಮಾರು 64 ದಿನಗಳಿಂದ ದೆಹಲಿ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅತಿಯಾದ ಮಳೆ, ಚಳಿಯ ನಡುವೆಯೂ ಅವರು ಚಳುವಳಿಯಲ್ಲಿ ತೊಡಗಿದ್ದರು. ಆದರೆ, ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಬದಲಾಗಿ, ಜಲ ಫಿರಂಗಿ, ಅಶ್ರುವಾಯು, ಲಾಠಿ ಏಟಿನ ಮೂಲಕ ಪ್ರತಿಕ್ರಿಯಿಸಿದೆ. ರೈತ ವಚಳುವಳಿಯ ವಿರುದ್ಧ ಇಲ್ಲಸಲ್ಲದ ಊಹಾಪೋಹಗಳನ್ನೂ ಕಟ್ಟಿಕೊಡಲಾಗುತ್ತಿದೆ. ಇದು ಖಂಡನೀಯ ಎಂದು 16 ಪಕ್ಷಗಳ ನಾಯಕರು ಸಹಮತದ ಹೇಳಿಕೆ ನೀಡಿದ್ದಾರೆ.

ಗುಲಾಮ್ ನಬಿ ಆಜಾದ್, ಶರದ್ ಪವಾರ್, ಫಾರೂಕ್ ಅಬ್ದುಲ್ಲಾ, ತಿರುಚಿ ಸಿಲ್ವ, ಸಂಜಯ್ ರಾವತ್ ಸಹಿತ ಹಲವು ನಾಯಕರು ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಜೆ.ಡಿ.ಎಸ್ ಪಕ್ಷ ಕೂಡ, ಇಂದಿನ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲಿರುವ ಬಗ್ಗೆ ಹೇಳಿಕೆ ನೀಡಿದೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕಾರ ಮಾಡುವುದಾಗಿ ಹೇಳಿದ್ದಾರೆ.

Kannada News Live | ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ

Published On - 10:45 am, Fri, 29 January 21

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ