Farmer’s Protest: ಫೆ.18ಕ್ಕೆ ದೇಶಾದ್ಯಂತ ರೈಲು ತಡೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಫೆ.18ರಂದು ದೇಶಾದ್ಯಂತ ರೈಲು ತಡೆ ಚಳವಳಿ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಫೆ.18ರಂದು ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ರೈಲು ತಡೆ ನಡೆಸಲು ನಿರ್ಧರಿಸಲಾಗಿದೆ.

Farmer's Protest: ಫೆ.18ಕ್ಕೆ ದೇಶಾದ್ಯಂತ ರೈಲು ತಡೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ರಾಜೇಶ್ ದುಗ್ಗುಮನೆ

Updated on:Feb 10, 2021 | 9:43 PM

ದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಫೆ.18ರಂದು ದೇಶಾದ್ಯಂತ ರೈಲು ತಡೆ ಚಳವಳಿ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಫೆ.18ರಂದು ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ರೈಲು ತಡೆ ನಡೆಸಲು ಮೋರ್ಚಾದ ವಕ್ತಾರ ದರ್ಶನ್​ ಪಾಲ್​ ಕರೆ ನೀಡಿದ್ದಾರೆ.

ಮೂರು ನೂತನ ಕೃಷಿ ವಿಧೇಯಕಗಳ ವಿರುದ್ಧ ತಮ್ಮ ಮುಷ್ಕರವನ್ನು ತೀವ್ರಗೊಳಿಸಲು ನಿರ್ಧರಿಸಿರುವ ರೈತ ಸಂಘಟನೆಗಳು ಫೆಬ್ರುವರಿ 18ರಂದು ದೇಶದಾದ್ಯಂತ 4-ಗಂಟೆಗಳ ಅವಧಿಗೆ ‘ರೇಲ್ ರೋಕೊ’ ಚಳವಳಿ ಮಾಡುವುದಾಗಿ ಬುಧವಾರದಂದು ಘೋಷಿಸಿದ್ದಾರೆ.

ಮುಷ್ಕರದ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಬಿಡುಗಡೆ ಮಾಡಿರುವ ಪ್ರಕಟಣೆಯೊಂದರಲ್ಲಿ ಫೆಬ್ರುವರಿ 12 ರಿಂದ ರಾಜಸ್ತಾನದಲ್ಲಿ ಟೋಲ್ ಸಂಗ್ರಹಿಸುವುದಕ್ಕೆ ಅವಕಾಶ ನೀಡುವುದಿಲ್ಲವೆಂದು ಹೇಳಿದೆ.

ಏತನ್ಮಧ್ಯೆ, ಬುಧವಾರ ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಹೊಸ ಕೃಷಿ ಕಾಯ್ದೆಗಳು ಐಚ್ಛಿಕವಾಗಿವೆಯೇ ಹೊರತು ಕಡ್ಡಾಯವಲ್ಲ ಎಂದಿದ್ದಾರೆ. ಸರ್ಕಾರವು ರೈತರ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡಿದೆ. ವಿವಾದಾತ್ಮಕ ಕಾಯ್ದೆಗಳಿಗೆ ಸಂಬಂಧಿಸಿದಂತೆ ಅವರ ತಾರ್ಕಿಕ ಸಲಹೆಗಳನ್ನು ಅಂಗೀಕರಿಸಲು ಸರ್ಕಾರ ಸಿದ್ಧವಿದೆ ಎಂದರು.

ಇಂದು ಮಾಧ್ಯಮದವರೊಂದಿಗೆ ಮಾತಾಡಿದ ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ಕೇಂದ್ರದಲ್ಲಿ ಸರ್ಕಾರ ಬದಲಾಗುವಂತೆ ಮಾಡುವ ಯಾವುದೇ ಉದ್ದೇಶ ರೈತರಿಗಿಲ್ಲ, ಆದರೆ ಸರ್ಕಾರ ತಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಹೇಳಿದರು. ತಮ್ಮ ಒಕ್ಕೂಟದ ನಾಯಕರು ದೇಶದ ಬೇರೆಬೇರೆ ಭಾಗಗಳಿಗೆ ತೆರಳಿ ಚಳುವಳಿಯನ್ನು ಹಬ್ಬಿಸಲಿದ್ದಾರೆ ಅಂತಲೂ ಟಿಕಾಯತ್ ಹೇಳಿದರು.

ಮಂಗಳವಾರದಂದು ನಡೆದ ಬೆಳವಣಿಗೆಯೊಂದರಲ್ಲಿ ದೆಹಲಿ ಪೊಲೀಸ್ ಗಣರಜ್ಯೋತ್ಸವ ದಿನದಂದು ಕೆಂಪುಕೋಟೆಯ ಬಳಿ ನಡೆದ ಗಲಭೆಗೆ ಕಾರಣನಾಗಿದ್ದ ಪಂಜಾಬಿ ನಟ ದೀಪ್ ಸಿಧುವನ್ನು ಬಂಧಿಸಿದ್ದ್ದಾರೆ.

ಹೊಸ ಕೃಷಿ ಕಾಯಿದೆಗಳು ಕನಿಷ್ಠ ಬೆಂಬಲ ಬೆಲೆ ಪದ್ಧತಿಯನ್ನು ತೊಡೆದು ಹಾಕಿ ತಮ್ಮನ್ನು ಉದ್ದಿಮೆಗಳ ಶೋಷಣೆಗೆ ಗುರಿಮಾಡಲಿವೆ ಎಂಬ ಆತಂಕವನ್ನು ರೈತ ಸಂಘಟನೆಗಳು ವ್ಯಕ್ತಪಡಿಸುತ್ತಿವೆ. ಅದರೆ ಅವರ ಆತಂಕವನ್ನು ನಿರಾಧಾರ ಎಂದು ಹೇಳುತ್ತಿರುವ ಕೇಂದ್ರವು ಹೊಸ ಕಾಯಿದೆಗಳು ರೈತರಿಗೆ ಉತ್ತಮ ಅವಕಾಶಗಳನ್ನು ಹೊತ್ತು ತರಲಿವೆ ಮತ್ತು ಕೃಷಿ ಪದ್ಧತಿಯಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ನೆರವಾಗಲಿವೆ ಎಂದು ಹೇಳಿದೆ.

Published On - 9:13 pm, Wed, 10 February 21

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು