AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakesh Tikait: ನರೇಂದ್ರ ಮೋದಿ ಘೋಷಿಸಿದ ಬೆಂಬಲ ಬೆಲೆ ಬದ್ಧತೆಯನ್ನು ಅನುಮಾನಿಸಿದ ರಾಕೇಶ್ ಟಿಕಾಯತ್

ಹೊಸ ಸಮುದಾಯವೊಂದು ಪ್ರತಿಭಟನೆಯಲ್ಲಿ ನಿರತವಾಗಿದೆ ಎಂಬ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಕೇಶ್ ಟಿಕಾಯತ್, ಹೌದು ಈ ಬಾರಿ ರೈತ ಸಮುದಾಯ ಮುಂದೆ ಬಂದಿದೆ. ಜನರೂ ರೈತರಿಗೆ ಬೆಂಬಲ ನೀಡುತ್ತಿದ್ದಾರೆ ಎಂದಿದ್ದಾರೆ.

Rakesh Tikait: ನರೇಂದ್ರ ಮೋದಿ ಘೋಷಿಸಿದ ಬೆಂಬಲ ಬೆಲೆ ಬದ್ಧತೆಯನ್ನು ಅನುಮಾನಿಸಿದ ರಾಕೇಶ್ ಟಿಕಾಯತ್
ರಾಕೇಶ್​ ಟಿಕಾಯತ್​
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:Feb 08, 2021 | 7:42 PM

Share

ಗಾಜಿಯಾಬಾದ್: ದೇಶದಲ್ಲಿ ಹಸಿವಿನ ಮೇಲೆ ವ್ಯಾಪಾರ ನಡೆಸಲು ಅವಕಾಶ ನೀಡುವುದಿಲ್ಲ ಎಂದ ರೈತ ನಾಯಕ ರಾಕೇಶ್ ಟಿಕಾಯತ್, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (Minimum Support Price – MSP) ನೀಡುವ ಕುರಿತು ಸರ್ಕಾರ ಭರವಸೆ ನೀಡಬೇಕು. ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ಕಾನೂನುಗಳನ್ನು ಭೇಷರತ್​ ವಾಪಸ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯಸಭೆಯಲ್ಲಿ ಭಾಷಣ ಮಾಡಿದ ನರೇಂದ್ರ ಮೋದಿ ಅವರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇತ್ತು. ಕನಿಷ್ಠ ಬೆಂಬಲ ಬೆಲೆ ಇದೆ ಮತ್ತು ಮುಂದೆಯೂ ಕನಿಷ್ಠ ಬೆಂಬಲ ಬೆಲೆ ಇರುತ್ತದೆ ಎಂದು ಹೇಳಿದ್ದರು. ಮೋದಿ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ಟಿಕಾಯತ್, ಪ್ರತಿದಿನ ವಿಮಾನದ ದರ ಎರಡು ಮೂರು ಬಾರಿ ಬದಲಿಸುವಂತೆ ಕೃಷಿ ಉತ್ಪನ್ನಗಳ ಬೆಲೆಯನ್ನು ನಿರ್ಧರಿಸಲು ಆಗುವುದಿಲ್ಲ ಎಂದಿದ್ದಾರೆ.

ಹೊಸ ಸಮುದಾಯವೊಂದು ಪ್ರತಿಭಟನೆಯಲ್ಲಿ ನಿರತವಾಗಿದೆ ಎಂಬ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಟಿಕಾಯತ್, ಹೌದು ಈ ಬಾರಿ ರೈತ ಸಮುದಾಯ ಮುಂದೆ ಬಂದಿದೆ. ಜನರೂ ರೈತರಿಗೆ ಬೆಂಬಲ ನೀಡುತ್ತಿದ್ದಾರೆ. ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರು ಕನಿಷ್ಠ ಬೆಂಬಲ ಬೆಲೆ ಬಗ್ಗೆ ಯಾವುದೇ ಕಾನೂನು ಇಲ್ಲ ಎಂಬುದನ್ನು ಎತ್ತಿ ತೋರಿಸಿದ್ದರು. ಕನಿಷ್ಠ ಬೆಂಬಲ ಬೆಲೆ ತಪ್ಪಿ ಹೋದರೆ ವ್ಯಾಪಾರಿಗಳು ಕಡಿಮೆ ಬೆಲೆಗೆ ಬೆಳೆ ಖರೀದಿಸಿ ಲೂಟಿ ಮಾಡುತ್ತಾರೆ ಎಂದು ಹೇಳಿದ್ದಾರೆ.

ಈಗ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿಭಜಿಸುವುದನ್ನು ಅವರು ಖಂಡಿಸಿದರು. ಈ ಚಳವಳಿಯನ್ನು ಮೊದಲು ಪಂಜಾಬ್ ನವರ ಸಮಸ್ಯೆ ಎಂದು ಬಿಂಬಿಸಲಾಯಿತು. ಆಮೇಲೆ ಸಿಖ್ ನಂತರ ಜಾಟ್ ಜನಾಂದವರ ಸಮಸ್ಯೆ ಎಂದು ಹೇಳಲಾಯಿತು. ಇದು ಹೀಗೆಯೇ ಮುಂದುವರಿಯುತ್ತದೆ. ದೇಶದ ರೈತರೆಲ್ಲರೂ ಒಗ್ಗಟ್ಟಾಗಿದ್ದಾರೆ. ಯಾರೊಬ್ಬ ರೈತರೂ ದೊಡ್ಡವರು ಅಥವಾ ಚಿಕ್ಕವರಲ್ಲ. ಈ ಚಳವಳಿ ಎಲ್ಲ ರೈತರದ್ದು ಎಂದಿದ್ದಾರೆ.

MSP ಇತ್ತು, MSP ಇದೆ ಮತ್ತು MSP ಮುಂದೆಯೂ ಇರಲಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ

Published On - 7:41 pm, Mon, 8 February 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ