ರೈತರ ಪ್ರತಿಭಟನೆ: ಹೆದ್ದಾರಿಗಳಲ್ಲಿನ ತಡೆಗಳನ್ನು ತೆಗೆದುಹಾಕುವಂತೆ ಕೋರಿದ್ದ ಅರ್ಜಿಗೆ ಸುಪ್ರೀಂ ನಕಾರ

ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹೆದ್ದಾರಿಗಳಲ್ಲಿನ ತಡೆಗಳನ್ನು ತೆಗೆದುಹಾಕಲು ಕೇಂದ್ರ ಮತ್ತು ಇತರರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಪ್ರಕರಣವು ಈಗಾಗಲೇ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದು, ಇದೇ ವಿಷಯದ ಕುರಿತು ಪುನರಾವರ್ತಿತ ಅರ್ಜಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರೈತರ ಪ್ರತಿಭಟನೆ: ಹೆದ್ದಾರಿಗಳಲ್ಲಿನ ತಡೆಗಳನ್ನು ತೆಗೆದುಹಾಕುವಂತೆ ಕೋರಿದ್ದ ಅರ್ಜಿಗೆ ಸುಪ್ರೀಂ ನಕಾರ
ಪ್ರತಿಭಟನೆ
Image Credit source: Live Law

Updated on: Dec 09, 2024 | 2:51 PM

ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹೆದ್ದಾರಿಗಳಲ್ಲಿನ ತಡೆಗಳನ್ನು ತೆಗೆದುಹಾಕಲು ಕೇಂದ್ರ ಮತ್ತು ಇತರರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಪ್ರಕರಣವು ಈಗಾಗಲೇ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದು, ಇದೇ ವಿಷಯದ ಕುರಿತು ಪುನರಾವರ್ತಿತ ಅರ್ಜಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರ ಪೀಠವು ಪಂಜಾಬ್‌ನಲ್ಲಿ ಸಾಮಾಜಿಕ ಕಾರ್ಯಕರ್ತರೆಂದು ಹೇಳಿಕೊಂಡ ಅರ್ಜಿದಾರ ಗೌರವ್ ಲೂತ್ರಾ ಅವರಿಗೆ, ನಿಮಗೆ ಮಾತ್ರ ಸಮಾಜದ ಬಗ್ಗೆ ಕಾಳಜಿ ಇರುವುದಲ್ಲ, ಮತ್ತೆ ಮತ್ತೆ ಅರ್ಜಿ ಸಲ್ಲಿಸಬೇಡಿ. ಕೆಲವರು ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಿದರೆ ಕೆಲವರು ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಮಾಡುತ್ತಾರೆ ಎಂದು ಪೀಠ ತರಾಟೆಗೆ ತೆಗೆದುಕೊಂಡಿತು.

ಬಾಕಿ ಇರುವ ಪ್ರಕರಣದೊಂದಿಗೆ ಅರ್ಜಿಯನ್ನು ಸೇರಿಸಲು ಲೂತ್ರಾ ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು.
ಸಂಯುಕ್ತ ಕಿಸಾನ್ ಮೋರ್ಚಾ (ಅರಾಜಕೀಯ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಬ್ಯಾನರ್ ಅಡಿಯಲ್ಲಿ ರೈತರು ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಫೆಬ್ರವರಿ 13 ರಂದು ಭದ್ರತಾ ಪಡೆಗಳು ದೆಹಲಿಯತ್ತ ತೆರಳದಂತೆ ತಡೆದವು.

ಮತ್ತಷ್ಟು ಓದಿ: Farmers Protest: ನೋಯ್ಡಾದಿಂದ ದೆಹಲಿಗೆ ರೈತರ ಪ್ರತಿಭಟನಾ ಮೆರವಣಿಗೆ, ಬೇಡಿಕೆಗಳೇನೇನು?

ಪ್ರತಿಭಟನಾನಿರತ ರೈತರು ಡಿಸೆಂಬರ್ 6 ರಂದು ದೆಹಲಿ ಪ್ರವೇಶಿಸಲು ಯೋಜಿಸಿದ್ದರು, ಆದರೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ ನಂತರ ತಮ್ಮ ಮೆರವಣಿಗೆಯನ್ನು ಮುಂದೂಡಿದರು. ಭಾನುವಾರ, 8 ಡಿಸೆಂಬರ್, ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ಮತ್ತೆ ಪ್ರಾರಂಭವಾಯಿತು ಮತ್ತು ಅದೇ ಕಾರಣಕ್ಕಾಗಿ ಮತ್ತೆ ನಿಲ್ಲಿಸಲಾಯಿತು.

ರೈತರು ಮತ್ತು ಅವರ ಸಂಘಟನೆಗಳು ಪಂಜಾಬ್‌ನ ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಅನಿರ್ದಿಷ್ಟ ಅವಧಿಯವರೆಗೆ ನಿರ್ಬಂಧಿಸಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಧರಣಿ ನಿರತ ರೈತರು ರಾಷ್ಟ್ರೀಯ ಹೆದ್ದಾರಿ ಮತ್ತು ರೈಲು ಹಳಿಗಳನ್ನು ತಡೆಯಬಾರದು ಎಂಬ ಸೂಚನೆಗಳನ್ನು ಅರ್ಜಿದಾರರು ಕೋರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ