ಯಾವುದೇ ಕಾರಣಕ್ಕೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ: ಯೋಗೇಂದ್ರ ಯಾದವ್ ಘೋಷಣೆ

ಮೋದಿಜೀ, ಯೋಗಿಜೀ ಹಾಗೂ ಎಲ್ಲರೂ ಜಾಗೃತರಾಗಿ ಕೇಳಿರಿ. ಪ್ರತಿಭಟನಾ ನಿರತ ರೈತರು ಅವಮಾನ ಮತ್ತು ಮಾನಹಾನಿಗೊಂಡು ಈ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ.

ಯಾವುದೇ ಕಾರಣಕ್ಕೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ: ಯೋಗೇಂದ್ರ ಯಾದವ್ ಘೋಷಣೆ
ಯೋಗೇಂದ್ರ ಯಾದವ್
Follow us
TV9 Web
| Updated By: ganapathi bhat

Updated on:Apr 06, 2022 | 8:31 PM

ದೆಹಲಿ: ಮೋದಿಜೀ, ಯೋಗಿಜೀ ಹಾಗೂ ಎಲ್ಲರೂ ಜಾಗೃತರಾಗಿ ಕೇಳಿರಿ.. ಪ್ರತಿಭಟನಾ ನಿರತ ರೈತರು ಅವಮಾನ ಮತ್ತು ಮಾನಹಾನಿಗೊಂಡು ಈ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ವರಾಜ್ ಪಕ್ಷದ ನಾಯಕ ಯೋಗೇಂದ್ರ ಯಾದವ್ ಎಚ್ಚರಿಕೆ ನೀಡಿದ್ದಾರೆ. ರೈತ ಹೋರಾಟವನ್ನು ಉದ್ದೇಶಿಸಿ, ದೆಹಲಿ-ಉತ್ತರ ಪ್ರದೇಶ ಗಡಿಭಾಗದಲ್ಲಿ ಯಾದವ್ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಸಿಂಘು ಗಡಿಭಾಗದಲ್ಲಿ ಪ್ರತಿಭಟನಾ ನಿರತರಾಗಿದ್ದ ರೈತರನ್ನು ಚದುರಿಸಲು ಹಾಗೂ ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರು. ಸ್ಥಳೀಯರು ಎಂದು ಗುರುತಿಸಲ್ಪಟ್ಟ ಅನೇಕರು ಕೂಡ ರೈತರು ಜಾಗ ಖಾಲಿ ಮಾಡಬೇಕು ಎಂದು ಆಗ್ರಹಿಸಿದ್ದರು.

ಇಂದು ಮುಂಜಾನೆ ವೇಳೆ, ಭಾರತೀಯ ಕಿಸಾನ್ ಯೂನಿಯನ್ (BKU) ಸದಸ್ಯರು ಕೂಡ ದೆಹಲಿ-ಮೀರತ್ ಹೆದ್ದಾರಿಯಲ್ಲಿ ನೆಲೆಯೂರಿದ್ದರು. ಗಾಜಿಬಾದ್ ಆಡಳಿತವು ಉತ್ತರ ಪ್ರದೇಶ ಪ್ರತಿಭಟನಾ ಸ್ಥಳದಿಂದ ಜಾಗ ಖಾಲಿ ಮಾಡುವಂತೆ ಸೂಚನೆ ನೀಡಿತ್ತು. ಗುರುವಾರದ ಬಳಿಕ, ನೂರಾರು ಪೊಲೀಸರು ಕೂಡ ಸ್ಥಳದಲ್ಲಿ ನಿಯೋಜನೆಗೊಂಡಿದ್ದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಶಂಕರ್ ಪಾಂಡೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಕಲಾನಿಧಿ ನೈತಾನಿ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ್ದರು.

ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಮುಖಂಡರ ಮೇಲೆ ಎಫ್​ಐಆರ್ ದಾಖಲಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ತೊಡಗಿದ ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್, ಲಖಾ ಸಿಧಾನ, ನಟ ದೀಪು ಸಿಧು ವಿರುದ್ಧ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ. ಎಫ್​ಐಆರ್​ನಲ್ಲಿ ಹೆಸರಿರುವ ಎಲ್ಲಾ ರೈತಮುಖಂಡರು ಈ ಮೂಲಕ ತಮ್ಮ ಪಾಸ್​ಪೋರ್ಟ್ ಒಪ್ಪಿಸಬೇಕಾಗಿದೆ. ಎಫ್​ಐಆರ್ ಜಾರಿಯಾಗಿರುವ ಪ್ರತಿಭಟನಾಕಾರರು ದೇಶ ತೊರೆಯದಂತೆ ನೋಡಿಕೊಳ್ಳಲು ಇದರಿಂದ ಸಾಧ್ಯವಾಗಿದೆ.

ರೈತರೇ ಹೋರಾಟ ಮುಂದುವರಿಸಿ, ನಿಮ್ಮ ಜತೆ ನಾವಿದ್ದೇವೆ: ರಾಹುಲ್ ಗಾಂಧಿ ಅಭಯ‘ಹಸ್ತ‘

Published On - 6:22 pm, Fri, 29 January 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್