ಪ್ರತಿಭಟನೆ ಸ್ಥಳ ಬದಲಿಸಿದರೆ ಮಾತುಕತೆ ಎಂಬ ಅಮಿತ್​ ಶಾ ಷರತ್ತಿಗೆ ರೈತರ ತಿರಸ್ಕಾರ

ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತರು ಸಿದ್ಧರಿದ್ದಾರೆ. ಆದರೆ ಮಾತುಕತೆಗೆ ಬರುವಾಗ ಸರ್ಕಾರವು ತೆರೆದ ಹೃದಯದಿಂದ ಬರಬೇಕೆ ವಿನಃ ಷರತ್ತುಗಳೊಂದಿಗೆ ಅಲ್ಲ ಎಂದು ಪ್ರತಿಭಟನಾನಿರತರು ಹೇಳಿದ್ದಾರೆ.

ಪ್ರತಿಭಟನೆ ಸ್ಥಳ ಬದಲಿಸಿದರೆ ಮಾತುಕತೆ ಎಂಬ ಅಮಿತ್​ ಶಾ ಷರತ್ತಿಗೆ ರೈತರ ತಿರಸ್ಕಾರ
ದೆಹಲಿ-ನೋಯ್ಡಾ ಗಡಿಯಲ್ಲಿ ರೈತರು.
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Nov 29, 2020 | 7:04 PM

ದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ ರೈತರು, ಪ್ರತಿಭಟನೆಯ ಸ್ಥಳ ಬದಲಿಸಿದರೆ ಮಾತುಕತೆ ಎಂಬ ಕೇಂದ್ರ ಗೃಹ ಸಚಿವ ಅಮಿತ್​ ಶಾ ಷರತ್ತನ್ನು ತಿರಸ್ಕರಿಸಿದ್ದಾರೆ.

ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತರು ಸಿದ್ಧರಿದ್ದಾರೆ. ಆದರೆ ಮಾತುಕತೆಗೆ ಬರುವಾಗ ಸರ್ಕಾರವು ತೆರೆದ ಹೃದಯದಿಂದ ಬರಬೇಕೆ ವಿನಃ ಷರತ್ತುಗಳೊಂದಿಗೆ ಅಲ್ಲ ಎಂದು ಹೇಳಿದ್ದಾರೆ.

ಅಮಿತ್ ಶಾ ಮುಂದಿಟ್ಟ ಮಾತುಕತೆ ಪ್ರಸ್ತಾವ ಕುರಿತು ಇಂದು (ನ.29) ಮುಂಜಾನೆ ನಡೆದ ರೈತ ನಾಯಕರ ಸಭೆಯಲ್ಲಿ ಚರ್ಚೆ ನಡೆಯಿತು. ಅಮಿತ್​ ಶಾ ಪ್ರಸ್ತಾವ ತಿರಸ್ಕರಿಸುವ ಬಗ್ಗೆ ರೈತ ನಾಯಕರು ತೀರ್ಮಾನ ತೆಗೆದುಕೊಂಡರು.

ಅವಶ್ಯಕತೆ ಬಿದ್ದರೆ ಕ್ರೀಡಾಂಗಣಗಳನ್ನು ಜೈಲುಗಳನ್ನಾಗಿ ಬದಲಿಸಬಹುದು ಎಂಬ ದೆಹಲಿ ಪೊಲೀಸರ ಸಲಹೆ ರೈತರಲ್ಲಿ ಆತಂಕ ಮೂಡಿಸಿದಂತಿದೆ. ಆದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಸಲಹೆಯನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದರು. ಪ್ರತಿಭಟನಾಕಾರರು ದೆಹಲಿಯ ಅತಿಥಿಗಳು ಎಂದು ಭರವಸೆ ತುಂಬಲು ಯತ್ನಿಸಿದ್ದರು. ಆದರೂ, ದೆಹಲಿಯ ಗಡಿಯಲ್ಲಿಯೇ ಕುಳಿತುಕೊಳ್ಳುತ್ತೇವೆ ಎಂದು ರೈತರು ಇದೀಗ ಪಟ್ಟು ಹಿಡಿದಿದ್ದಾರೆ.

ನಿನ್ನೆ (ನ.28) ರೈತ ಸಂಘಟನೆಗಳ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ್ದ ಅಮಿತ್ ಶಾ, ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ರೈತರ ಎಲ್ಲ ಪ್ರಶ್ನೆಗಳನ್ನು ಆಲಿಸಲು ಮತ್ತು ಬೇಡಿಕೆಗಳನ್ನು ಪರಿಗಣಿಸಲು ಸರ್ಕಾರ ಸಿದ್ಧವಿದೆ. ಆದಕ್ಕೆ ಅದಕ್ಕೂ ಮೊದಲು ರೈತರು ನಿಗದಿತ ಸ್ಥಳಕ್ಕೆ ತೆರಳಬೇಕು ಎಂಬ ಷರತ್ತು ವಿಧಿಸಿದ್ದರು.

ನರೇಲಾದ ದೆಹಲಿ-ಹರ್ಯಾಣ ಗಡಿಯಲ್ಲಿ ಪೊಲೀಸರ ಭದ್ರತಾ ಕೋಟೆ ಭೇದಿಸುವಲ್ಲಿ ರೈತರು ಯಶಸ್ವಿಯಾದರು. ಬ್ಯಾರಿಕೇಡ್​ಗಳನ್ನು ಬದಿಗೆ ಸರಿಸಿ ಮುನ್ನುಗ್ಗಿದ್ದರು.

ಈ ನಡುವೆ, ಇಂದಿನ ಮನ್​ ಕಿ ಬಾತ್ ರೇಡಿಯೊ ಭಾಷಣದಲ್ಲಿ ಕೃಷಿ ಕಾನೂನುಗಳ ಬಗ್ಗೆ ಪ್ರಸ್ತಾಪಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಕೃಷಿ ಕಾನೂನುಗಳು ರೈತರಿಗೆ ಬಲ ತುಂಬುತ್ತವೆ ಎಂದು ಹೇಳಿದ್ದರು.

ಅಮಿತ್ ಶಾ ಸ್ಪಷ್ಟನೆ

ಹೈದರಾಬಾದ್ ವರದಿ: GHMC ಚುನಾವಣಾ ಪ್ರಚಾರದ ನಂತರ ಸಿಕಂದರಾಬಾದ್​ನಲ್ಲಿ ಗೃಹ ಸಚಿವ ಅಮಿತ್ ಶಾ ಪತ್ರಿಕಾಗೋಷ್ಠಿ ನಡೆಸಿದರು. ಪಂಜಾಬ್ ರೈತರ ದೆಹಲಿ ಚಲೋ ಪ್ರತಿಭಟನೆ ರಾಜಕೀಯ ಪ್ರೇರಿತವೆಂದು ತಾವು ಎಲ್ಲೂ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಮಿತ್ ಶಾ, ತಾವು ಎಂದೂ ಪಂಜಾಬ್ ರೈತರ ಪ್ರತಿಭಟನೆಯನ್ನು ಕಡೆಗಣಿಸಿಲ್ಲ. ರೈತರ ಪ್ರತಿಯೊಂದು ಸಮಸ್ಯೆಗಳಗಳನ್ನು ಆಲಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು.

ಇನ್ನಷ್ಟು…

ಏನೇ ಆಗ್ಲಿ, ದೆಹಲಿ ತಲುಪೇ ತಲುಪುತ್ತೇವೆ -6 ತಿಂಗಳ ದಿನಸಿ ಹೊತ್ತು ದೆಹಲಿಯತ್ತ ಸಾಗಿದ ರೈತನ ಆಕ್ರೋಶ Delhi Chalo: ಪ್ರತಿಭಟನೆ ಕೊನೆಗೊಳಿಸುವಂತೆ ರೈತರಿಗೆ ಕೇಂದ್ರ ಕೃಷಿ ಸಚಿವ ತೋಮರ್ ಮನವಿ! ರೈತರ ಉಗ್ರ ಹೋರಾಟದ ನಡುವೆ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Published On - 6:56 pm, Sun, 29 November 20

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ