‘ದೆಹಲಿ ಚಲೋ’ ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು

ಕೈಯಲ್ಲಿ ಖಡ್ಗ, ಕೋಲುಗಳನ್ನು ಹಿಡಿದು ಮೆರವಣಿಗೆ ಹೊರಟಿರುವ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗಡಿಭಾಗಗಳನ್ನು ಮುಚ್ಚಲಾಗಿದೆ. ಹೆಚ್ಚಿನ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

‘ದೆಹಲಿ ಚಲೋ' ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು
‘ದೆಹಲಿ ಚಲೋ‘ ಚಳವಳಿಗೆಂದು ಧಾವಿಸುತ್ತಿರುವ ರೈತರು
Follow us
Lakshmi Hegde
| Updated By: ganapathi bhat

Updated on:Nov 26, 2020 | 1:12 PM

ದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಪಂಜಾಬ್​ ಮತ್ತು ಹರ್ಯಾಣದ ರೈತರು ದೆಹಲಿ ಚಲೋ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಫತೇಹಾಬಾದ್​​ನಿಂದ ಪ್ರತಿಭಟನಾ ಮೆರವಣಿಗೆ ಶುರು ಮಾಡಿದ್ದು, ಟ್ರ್ಯಾಕ್ಟರ್​ ಸೇರಿ ಹಲವು ವಾಹನಗಳಲ್ಲಿ ರಾಷ್ಟ್ರ ರಾಜಧಾನಿಯತ್ತ ದಂಡುದಂಡಾಗಿ ಸಾಗುತ್ತಿದ್ದಾರೆ.

ಕೈಯಲ್ಲಿ ಖಡ್ಗ, ಕೋಲುಗಳನ್ನು ಹಿಡಿದು ಮೆರವಣಿಗೆ ಹೊರಟಿರುವ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗಡಿಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹೆಚ್ಚಿನ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

ಈ ಮಧ್ಯ ಪ್ರತಿಭಟನಾಕಾರರು ಪುಂಡಾಟ ಮೆರೆದಿದ್ದು, ಅಂಬಾಲಾದ ಶಂಭು ಗಡಿ ಸಮೀಪ ಸೇತುವೆ ಬಳಿ ಹಾಕಲಾದ ಬ್ಯಾರಿಕೇಡ್​ಗಳನ್ನು ಕಿತ್ತು ನದಿಗೆ ಎಸೆದಿದ್ದಾರೆ. ಅಷ್ಟೇ ಅಲ್ಲ ಪೊಲೀಸರ ಕಡೆಗೆ ಇಟ್ಟಿಗೆ, ಕಲ್ಲುಗಳನ್ನೂ ಎಸೆದಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಅಶ್ರುವಾಯು, ಜಲಫಿರಂಗಿಗಳನ್ನು ಪ್ರಯೋಗ ಮಾಡಿದ್ದಾರೆ. ಸೇತುವೆ ಮೇಲೆ ಸುಮಾರು ಎರಡು ತಾಸು, ಪ್ರತಿಭಟನಾಕಾರರು-ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಗಡಿ ಬಂದ್ ಮಾಡಿದ್ರೂ ಜಗ್ಗಲಿಲ್ಲ ಹರ್ಯಾಣ ಬಿಜೆಪಿ ಸರ್ಕಾರ ಪ್ರತಿಭಟನಾಕಾರರು ತಡೆಯಲು ತುಂಬ ಪ್ರಯತ್ನ ಮಾಡಿತ್ತು. ಗಡಿ ಬಂದ್ ಮಾಡಿ, ಪೊಲೀಸರ ಭದ್ರತೆ ಹೆಚ್ಚಿಸಿದ್ದರೂ ಜಗ್ಗದ ರೈತರು ಹರ್ಯಾಣ ಪ್ರವೇಶಿಸಿದ್ದಾರೆ. ಪಂಜಾಬ್​ನ ಪಟಿಯಾಲಾದಲ್ಲಿ ಬಸ್​ಸ್ಟ್ಯಾಂಡ್​ಗಳನ್ನು ಕ್ಲೋಸ್ ಮಾಡಲಾಗಿದೆ. ಸಾರ್ವಜನಿಕ ವಾಹನ ಸಂಚಾರ ಇಂದು ಮತ್ತು ನಾಳೆ ಸ್ಥಗಿತಗೊಳ್ಳಲಿದೆ.

ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ತರುವುದಕ್ಕೂ ಮೊದಲೇ ಶುರುವಾದ ಪ್ರತಿಭಟನೆ ಇನ್ನೂ ಮುಂದುವರಿಯುತ್ತಲೇ ಇದೆ. ಇದೀಗ ಉತ್ತರ ಪ್ರದೇಶ, ಹರ್ಯಾಣ, ಉತ್ತರಾಖಂಡ, ರಾಜಸ್ಥಾನ, ಕೇರಳ, ಪಂಜಾಬ್​ಗಳ ಸಾವಿರಕ್ಕೂ ಹೆಚ್ಚು ರೈತರು ದೆಹಲಿ ಚಲೋ ಚಳವಳಿಯಲ್ಲಿ ಪಾಲ್ಗೊಂಡಿದ್ದಾರೆ.

Published On - 1:09 pm, Thu, 26 November 20

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್