Farmers Protest: ಮೂರನೇ ದಿನಕ್ಕೆ ಕಾಲಿಟ್ಟ ರೈತರ ಚಳವಳಿ, ಪಂಜಾಬ್​ನಲ್ಲಿ ಇಂದು ರೈಲು ತಡೆದು ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಹಮ್ಮಿಕೊಂಡ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪಂಜಾಬ್​ನ ರೈಲು ನಿಲ್ದಾಣದಲ್ಲಿ ರೈಲುಗಳನ್ನು ತಡೆದು ಚಳಿವಳಿ ನಡೆಸಲಿದ್ದಾರೆ. ಮಂಗಳವಾರ ರೈತರ ಚಳವಳಿಯಿಂದಾಗಿ ಪೊಲೀಸರು ಹಾಗೂ ರೈತರ ನಡುವೆ ಘರ್ಷಣೆ ಏರ್ಪಟ್ಟಿತ್ತು. ರೈತರನ್ನು ದೆಹಲಿಗೆ ಪ್ರವೇಶಿಸದಂತೆ ತಡೆಯಲು ಪೊಲೀಸರು ಡ್ರೋನ್ ಮೂಲಕ ಅಶ್ರುವಾಯು ಶೆಲ್​ಗಳನ್ನು ಸಿಡಿಸಿದ್ದರು.

Farmers Protest: ಮೂರನೇ ದಿನಕ್ಕೆ ಕಾಲಿಟ್ಟ ರೈತರ ಚಳವಳಿ, ಪಂಜಾಬ್​ನಲ್ಲಿ ಇಂದು ರೈಲು ತಡೆದು ಪ್ರತಿಭಟನೆ
ರೈತರ ಪ್ರತಿಭಟನೆ-ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Feb 15, 2024 | 7:59 AM

ನವದೆಹಲಿಯ ಪ್ರತಿಯೊಂದು ಗಡಿಯಲ್ಲೂ ರೈತರ ಚಳಿವಳಿ(Farmers Protest)ಯ ಪರಿಣಾಮ ಗೋಚರಿಸುತ್ತಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಎರಡು ದಿನಗಳಿಂದ ರೈತರ ಪ್ರತಿಭಟನೆ ಹಿನ್ನೆಲೆ ದೆಹಲಿ ಸೇರಿದಂತೆ ಪಂಜಾಬ್, ಹರ್ಯಾಣ ಸಾಕಷ್ಟು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇಂದು ರೈತರು ಪಂಜಾಬ್​ನಲ್ಲಿ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಲಿದ್ದಾರೆ.

ಮಂಗಳವಾರ ರೈತರ ಚಳವಳಿಯಿಂದಾಗಿ ಪೊಲೀಸರು ಹಾಗೂ ರೈತರ ನಡುವೆ ಘರ್ಷಣೆ ಏರ್ಪಟ್ಟಿತ್ತು. ರೈತರನ್ನು ದೆಹಲಿಗೆ ಪ್ರವೇಶಿಸದಂತೆ ತಡೆಯಲು ಪೊಲೀಸರು ಡ್ರೋನ್ ಮೂಲಕ ಅಶ್ರುವಾಯು ಶೆಲ್​ಗಳನ್ನು ಸಿಡಿಸಿದ್ದರು. ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು, ಇಂದು ಪಂಜಾಬ್ ರೈತ ಸಂಘಟನೆಗಳು ರೈಲು ತಡೆಯಲು ನಿರ್ಧರಿಸಿವೆ.

ರೈತರು ದೆಹಲಿಗೆ ಬರುವುದನ್ನು ತಡೆಯಲು ಗಡಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಟಿಕ್ರಿ, ಸಿಂಗು ಮತ್ತು ಝರೋಡಾ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ರೈತರು ಟ್ರ್ಯಾಕ್ಟರ್​ ಮತ್ತು ಟ್ರಾಲಿಗಳೊಂದಿಗೆ ರಾಜಧಾನಿ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ.

ಮತ್ತಷ್ಟು ಓದಿ:  Farmer’s Protest: ನಾಳೆ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲು ಒಪ್ಪಿದ ರೈತ ಮುಖಂಡರು

ಉತ್ತರ ಪ್ರದೇಶ ಜೊತೆಗಿನ ಚಿಲ್ಲಾ-ಗಾಜಿಪುರ ಗಡಿಯನ್ನೂ ಮುಚ್ಚಲಾಗಿದೆ. ದೆಹಲಿ ಪೊಲೀಸರು ಪ್ರವೇಶ, ನಿರ್ಗಮನ ಸ್ಥಳಗಳಲ್ಲಿ ಬ್ಯಾರಿಕೇಡ್​ಗಳು, ಕಬ್ಬಿಣದ ಮೊಳೆಗಳು ಹಾಗೂ ಕಾಂಕ್ರೀಟ್​ ಬ್ಯಾರಿಕೇಡ್​ಗಳನ್ನು ಅಳವಡಿಸಿದೆ.

ರೈತರ ಬೇಡಿಕೆಗಳೇನು? ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರೂಪಿಸುವುದು ರೈತರ ಬಹುಮುಖ್ಯ ಬೇಡಿಕೆಯಾಗಿದೆ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ -ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಸಿಗಬೇಕು -ಭಾರತವನ್ನು ಡಬ್ಲ್ಯೂಟಿಒದಿಂದ ಹೊರತೆಗೆಯಬೇಕು -ಕೃಷಿ ಸರಕುಗಳು, ಹಾಲು ಉತ್ಪನ್ನಗಳು, ಹಣ್ಣುಗಳು,ತರಕಾರಿಗಳು ಮತ್ತು ಮಾಂಸದ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲು ಭತ್ಯೆ ಹೆಚ್ಚಿಸಬೇಕು. -58 ವರ್ಷ ಮೇಲ್ಪಟ್ಟ ರೈತರು ಮತ್ತು ಕೃಷಿ ಕೂಲಿಕಾರರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಿ ಮಾಸಿಕ 10 ಸಾವಿರದವರೆಗೆ ಪಿಂಚಣಿ ನೀಡಬೇಕು. -ಕೀಟನಾಶಕಗಳು, ಬೀಜಗಳು ಮತ್ತು ರಸಗೊಬ್ಬರ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಹತ್ತಿ ಸೇರಿದಂತೆ ಎಲ್ಲಾ ಬೆಳಗಳ ಬೀಜಗಳ ಗುಣಮಟ್ಟ ಸುಧಾರಿಸಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ